ಕೋವಿಡ್-19 ಸೋಂಕು ತಾಗಿದ್ದ ಗದಗದ 80ರ ವೃದ್ಧೆ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
Team Udayavani, Apr 9, 2020, 9:34 AM IST
ಗದಗ: ಜಿಲ್ಲೆಯ ಕೋವಿಡ್-19 ಸೋಂಕು ಪೀಡಿತ ವೃದ್ಧೆ ಸಾವನ್ನಪ್ಪಿದ್ದಾರೆ. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಗರದ ರಂಗನವಾಡಿ ನಿವಾಸಿಯಾಗಿದ್ದ 80 ವರ್ಷದ ವೃದ್ಧೆ ಬುಧವಾರ ಮಧ್ಯರಾತ್ರಿ 12.55ಕ್ಕೆ ಕಾರ್ಡಿಯಾಕ್ ಅರೆಸ್ಟನಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 4 ರಂದು ತೀವ್ರ ಉಸಿರಾಟದ ತೊಂದರೆಯಿಂದ ಬಳುಲುತ್ತಿದ್ದ ವೃದ್ಧೆಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏ.6 ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಮಲ್ಲ ಸಮುದ್ರದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಸೋಂಕು ಮೂಲ ಯಾರು?
ವೃದ್ಧೆಗೆ ಸೋಂಕು ಎಲ್ಲಿಂದ, ಯಾರಿಂದ ತಗುಲಿದೆ ಎನ್ನುವುದು ನಿಗೂಢವಾಗಿದೆ. ಮೃತಳು ಇಲ್ಲಿನ ರಂಗನವಾಡದ ತಂಗಿ ಮನೆಯಲ್ಲಿ ವಾಸವಿದ್ದಳು. ಅಲ್ಲದೇ ಇತ್ತೀಚಿಗೆ ಇಲ್ಲಿನ ಎಸ್.ಎಂ.ಕೃಷ್ಣ ನಗರದಲ್ಲಿ ಸಂಬಂಧಿಕರೊಬ್ಬರ ಪುಟ್ಟ ಕಾರ್ಯಕ್ರಮದಲ್ಲಿ ಭಾಗಿಯಗಿದ್ದರು. ಅದೇ ಸಮಾರಂಭಕ್ಕೆ 7 ಜನ ಗೋವಾದಿಂದ ಆಗಮಿಸಿದ್ದರು. ಹೀಗಾಗಿ ಅವರಿಂದಲೇ ಸೋಂಕು ಹರಡಿರುವ ಸಂಶಯ ವ್ಯಕ್ತವಾಯಿತು.
ಈ ನಡುವೆ ವೃದ್ಧೆಗೆ ಸೋಂಕು ಖಚಿತವಾಗುತ್ತಿದ್ದಂತೆ ಆಕೆಯ ಮನೆಯವರು, ಗೋವಾದಿಂದ ಆಗಮಿಸಿದವರು ಸೇರಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 35 ಜನ ಹಾಗೂ ವೃದ್ಧೆಗೆ ಚಿಕಿತ್ಸೆ ನೀಡಿದ್ದ 7 ಜನ ವೈದ್ಯಕೀಯ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಯಾರಲ್ಲೂ ಸೋಂಕು ದೃಢ ಪಟ್ಟಿಲ್ಲ. ಹೀಗಾಗಿ ವೃದ್ಧೆಗೆ ಸೋಂಕು ಹರಡಿದ್ದು ಯಾರಿಂದ ಎಂಬುದು ಪತ್ತೆ ಮಾಡುವುದೇ ಜಿಲ್ಲಾಡಳಿತದ ಮುಂದಿರುವ ಸವಾಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.