Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


Team Udayavani, Apr 23, 2024, 2:03 PM IST

1-gadaga

ಗದಗ: ಕನಕದಾಸ ಶಿಕ್ಷಣ ಸಮಿತಿಯ ಕಲಾ, ವಾಣಿಜ್ಯ , ವಿಜ್ಞಾನ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬಿಎ 2ನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಪವಿತ್ರಾ ಕಡಕೋಳ ಸೈಕ್ಲಿಂಗ್ ನಲ್ಲಿ ರಾಷ್ಟ್ರಮಟ್ಡಕ್ಕೆ ಆಯ್ಕೆಯಾಗಿದ್ದಾಳೆ ಎಂದು ಸಮಿತಿಯ ಕಾರ್ಯದರ್ಶಿ ರವೀಂದ್ರನಾಥ ದಂಡಿನ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಲೋ ಇಂಡಿಯಾ ಟ್ಯಾಲೆಂಟ್‌ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಡೆಪ್ಯುಟಿ ಡೈರೆಕ್ಟರ್ ಆದೇಶದ ಮೇರೆಗೆ ಪಟಿಯಾಲದ ನೇತಾಜಿ ಸುಭಾಷ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆ ಎಂದರು.

ಕಳೆದ ಮಾರ್ಚ್ ತಿಂಗಳ 28 ರಿಂದ 31ರ ವರೆಗೆ ಹರಿಯಾಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಎಂಟಿಬಿ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ 2 ಬೆಳ್ಳಿ ಪದಕ, 1 ಕಂಚಿನ ಒದಕ ಪಡೆದು ಗದಗ ಜಿಲ್ಲೆ ಸೇರಿ ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ ಎಂದು ಹೇಳಿದರು.

ರಾಜ್ಯ ಸೈಕ್ಲಿಂಗ್ ಅಮೆಚ್ಯೂರ್ ಅಸೋಸಿಯೇಷನ್ ನ ಜಿ.ಬಿ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 1997ರಿಂದಲೂ ಸೈಕ್ಲಿಂಗ್ ನಲ್ಲಿ ಅನೇಕ ಕ್ರೀಡಾಪಟುಗಳು ಸಾಧನೆ ಮಾಡುತ್ತಾ ಬಂದಿದ್ದಾರೆ. 2008ರಿಂದ ಹಾಸ್ಟೆಲ್ ಆರಂಭವಾಯಿತು. ಈ ಹಾಸ್ಟೆಲ್ ಆರಂಭವಾದ ನಂತರ ಅನೇಕ ಬಡಕುಟುಂಬದ ಪ್ರತಿಭೆಗಳಿಗೆ ತಮ್ಮ ಕೌಶಲಗಳನ್ನು ಪ್ರದರ್ಶಿಸಲು ಅನುಕೂಲವಾಗಿದೆ. ಆರ್ ಡಿಪಿಆರ್ ವಿಶ್ವವಿದ್ಯಾಲಯದಲ್ಲಿ ಸೈಕ್ಲಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ 10 ಎಕರೆ ಜಮೀನು ಮೀಸಲಿಡಲಾಗಿದೆ ಎಂದು ಹೇಳಿದರು.

ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಮಾತನಾಡಿ, ಮೊದಲ ಬಾರಿ ಗದಗನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದೆ. ನಂತರ  ಈವರೆಗೆ 9 ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ 8 ಪದಕಗಳನ್ನು ಪಡೆದಿದ್ದೇನೆ. 19 ಮೌಂಟನ್ ಬೈಕ್ ಸೈಕ್ಲಿಂಗ್ ನ್ಯಾಷನಲ್ ಚಾಂಪಿಯನ್ ಶಿಪ್ ಭಾಗವಹಿಸಿದ್ದೇನೆ. 18 ಟೈಮ್ ಟ್ರೈಲ್ ಟೀಮ್ ಗೋಲ್ಡ್ ಮೆಡಲ್, 16 ಯೂತ್ ಗರ್ಲ್ಸ್ ಟೈಮ್ ಟ್ರೈಲ್ ಸಿಲ್ವರ್ ಮೆಡಲ್, 16 ಯೂತ್ ಗರ್ಲ್ಸ್ ಮಾಸ್ ಸ್ಟಾರ್ಟ್ ಬ್ರೌನ್ ಮೆಡಲ್ ಪಡೆದು ಈಗ ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಆಯ್ಕೆಯಾಗಿದ್ದೇನೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಡಿ.ಬಿ. ಗವಾನಿ, ಉಪಪ್ರಾಚಾರ್ಯ ಡಾ. ಜಿ.ಪಿ ಜಂಪಣ್ಣನವರ, ಎಸ್.ಎಸ್. ರಾಯ್ಕರ್, ವಿ.ಎಚ್. ಕೊಳ್ಳಿ, ಬಿ.ಐ. ಬಿರಾದಾರ ಸೇರಿ ಅನೇಕರು ಇದ್ದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

18-gadaga

ತುಂಗಭದ್ರಾ ನದಿ‌ಯಲ್ಲಿ ಅಕ್ರಮ‌ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ‌ ಎಸಿ ದಿಢೀರ್ ದಾಳಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.