ಗದಗ-ಅಭಿವೃದ್ಧಿ ಶೂನ್ಯ: ಕೆರೆಗಳ ತುಂಬ ಹೂಳೇ ಹೂಳು

ಶಿರೋಳ ಕೆರೆಗಳಿಗೆ ಮಾತ್ರ ನದಿ ಮೂಲಕ ನೀರು ಹರಿಸಲಾಗುತ್ತಿದೆ.

Team Udayavani, Aug 3, 2023, 6:30 PM IST

ಗದಗ-ಅಭಿವೃದ್ಧಿ ಶೂನ್ಯ: ಕೆರೆಗಳ ತುಂಬ ಹೂಳೇ ಹೂಳು

ಗದಗ: ಜಿಲ್ಲೆಯು ಕಳೆದ ಕೆಲ ವರ್ಷಗಳಿಂದ ಅತೀವೃಷ್ಟಿ, ಅನಾವೃಷ್ಟಿ ಸೇರಿದಂತೆ ನೆರೆ ಹಾಗೂ ಬರಗಾಲದಂತಹ ಪರಿಸ್ಥಿತಿ ಅನುಭವಿಸಿದೆ. ಇದರಿಂದ ಕೆಲ ಕೆರೆಗಳು ಭರ್ತಿಯಾಗಿ ಕೋಡಿ ಹರಿದಿದ್ದರೆ, ಇನ್ನು ಕೆಲವು ಕೆರೆಗಳು ನೀರಿಲ್ಲದೇ ಬತ್ತಿಹೋದ ಉದಾಹರಣೆಗಳು ಸಾಕಷ್ಟಿವೆ.

ಜಿಲ್ಲೆಯಲ್ಲಿ ನೀರಾವರಿ ಮತ್ತು ಸಣ್ಣ ನೀರಾವರಿ  ವ್ಯಾಪ್ತಿಯಲ್ಲಿ 22 ಕುಡಿಯಲು ಯೋಗ್ಯವಾದ ಕೆರೆಗಳು, 192 ಬಳಕೆಗೆ ಸೀಮಿತವಾದ ಕೆರೆಗಳು ಸೇರಿ ಒಟ್ಟು 214 ಕೆರೆಗಳಿದ್ದು, ಬಹುತೇಕ ಕೆರೆಗಳು ಮಳೆಯ ನೀರನ್ನೇ ನೆಚ್ಚಿಕೊಂಡಿವೆ. ಆದರೆ, ಸಧ್ಯ ಮುಂಗಾರು ಚಾಲ್ತಿಯಲ್ಲಿದ್ದು, ಅಷ್ಟಾಗಿ ಮಳೆ ಸುರಿಯದ ಕಾರಣ ಜಿಲ್ಲೆಯ ಬಹುತೇಕ ಕೆರೆಗಳು ತುಂಬದಿದ್ದರೂ ತಕ್ಕಮಟ್ಟಿನ ನೀರು ಶೇಖರಣೆಯಾಗಿದೆ.

ಇನ್ನು ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ, ಡಂಬಳ, ಶಿರೋಳ, ತಾಮ್ರಗುಂಡಿ, ನಾಗರಳ್ಳಿ, ಜಂತ್ಲಿ ಶಿರೂರು ಸೇರಿದಂತೆ 15 ಕೆರೆಗಳು, 20ಕ್ಕೂ ಹೆಚ್ಚು ಚೆಕ್‌ಡ್ಯಾಂಗಳಿಗೆ ಹಾಗೂ ಗದಗ ತಾಲೂಕಿನ ಲಕ್ಕುಂಡಿ, ಸಂಭಾಪುರ, ಕಳಸಾಪುರ, ಕಣಗಿನಹಾಳ ಸೇರಿದಂತೆ 8 ಗ್ರಾಮದ ಕೆರೆಗಳಿಗೆ ಕಳೆದ ಕೆಲ ವರ್ಷಗಳ ಹಿಂದೆ ನದಿ ನೀರು ಹರಿಸಲಾಗಿದ್ದು, ಪುನಶ್ಚೇತನಗೊಂಡಿದ್ದವು.

ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳು 32:
ಜಿಲ್ಲೆಯ ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನಲ್ಲಿ 11, ಗಜೇಂದ್ರಗಡ 9, ಶಿರಹಟ್ಟಿ ತಾಲೂಕಿನಲ್ಲಿ 5, ಗದಗ ತಾಲೂಕಿನಲ್ಲಿ 4 ಹಾಗೂ ಲಕ್ಷ್ಮೇ ಶ್ವರ ತಾಲೂಕಿನಲ್ಲಿ 3 ಸೇರಿ ಜಿಲ್ಲಾದ್ಯಂತ 32 ಕೆರೆಗಳಿದ್ದು, ಇವುಗಳಲ್ಲಿ ಮುಂಡರಗಿ ತಾಲೂಕಿನ ಡಂಬಳ, ಜಂತ್ಲಿಶಿರೂರ, ಪೇಠಾಲೂರ ಹಾಗೂ ಶಿರೋಳ ಕೆರೆಗಳಿಗೆ ಮಾತ್ರ ನದಿ ಮೂಲಕ ನೀರು ಹರಿಸಲಾಗುತ್ತಿದೆ.

ವಿಸ್ತೀರ್ಣ-ಅಚ್ಚುಕಟ್ಟು ಪ್ರದೇಶ: ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನ 11 ಕೆರೆಗಳ 776.76 ಹೆಕ್ಟೇರ್‌ ಪ್ರದೇಶದಲ್ಲಿ 4,330.88 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಶಿರಹಟ್ಟಿ ತಾಲೂಕಿನ 5 ಕೆರೆಗಳ 243.50 ಹೆಕ್ಟೇರ್‌ ಪ್ರದೇಶದಲ್ಲಿ 1,294.70 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ.

ಗಜೇಂದ್ರಗಡ/ ರೋಣ ತಾಲೂಕಿನ 9 ಕೆರೆಗಳ 170.78 ಹೆಕ್ಟೇರ್‌ ಪ್ರದೇಶವಿದ್ದು, 905.31 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಗದಗ ತಾಲೂಕಿನ 4 ಕೆರೆಗಳ 126.97 ಹೆಕ್ಟೇರ್‌ ಪ್ರದೇಶವಿದ್ದು, 967 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಲಕ್ಷ್ಮೇ ಶ್ವರ ತಾಲೂಕಿನ 3 ಕೆರೆಗಳ 61.92 ಹೆಕ್ಟೇರ್‌ ಪ್ರದೇಶವಿದ್ದು, 222.69 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟಾರೆ 32 ಕೆರೆಗಳ ವಿಸ್ತೀರ್ಣ 1,379.93 ಹೆಕ್ಟೇರ್‌ ಪ್ರದೇಶ ಹೊಂದಿದ್ದು, ಅದರಲ್ಲಿ 7,520.58 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿದೆ.

ಕೆರೆಗಳ ಒತ್ತುವರಿ: ಸಣ್ಣ ನೀರಾವರಿ ವ್ಯಾಪ್ತಿಯ ಮುಂಡರಗಿ ತಾಲೂಕಿನ ಶಿರೋಳ ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಕೆರೆಯನ್ನು ಸರ್ವೇ ಮಾಡುವಂತೆ ಸೂಚಿಸಲಾಗಿದೆ. ಸರ್ವೇ ನಂತರ ಅತಿಕ್ರಮಣದ
ಮಾಹಿತಿ ಲಭ್ಯವಾಗಲಿದೆ. ಇನ್ನು ಗದಗ ನಗರದ ಹೃದಯ ಭಾಗದಲ್ಲಿರುವ 103 ಎಕರೆ ವ್ಯಾಪ್ತಿಯ ಭೀಷ್ಮ ಕೆರೆಯೂ ಒತ್ತುವರಿಯಾದ ದೂರುಗಳು ಬಂದಿದ್ದರಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೆರೆ ಸರ್ವೇ ಮಾಡಿದ್ದು, ವರದಿ ಇನ್ನು ಸ್ಪಷ್ಟವಾಗಿ ದೊರೆತಿಲ್ಲ. ಜತೆಗೆ ಭೀಷ್ಮ ಕೆರೆಯ ಒಡಲಿಗೆ ಚರಂಡಿ ನೀರು ತುಂಬಿಕೊಂಡು ಮಲೀನವಾಗತೊಡಗಿದರೂ ನಗರಸಭೆ ಅ ಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿರುವುದು ಶೋಚನೀಯ.

ಕೆರೆಗಳ ಅಭಿವೃದ್ಧಿ ಶೂನ್ಯ: ಜಿಲ್ಲೆಯಲ್ಲಿ ನೀರಾವರಿ ಮತ್ತು ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ 22 ಕುಡಿಯಲು ಯೋಗ್ಯವಾದ ಕೆರೆಗಳು, 192 ಬಳಕೆಗೆ ಸೀಮಿತವಾದ ಕೆರೆಗಳು ಸೇರಿ ಒಟ್ಟು 214 ಕೆರೆಗಳಿದ್ದು, ಹೂಳೆತ್ತುವುದು, ಬೌಂಡರಿಂಗ್‌ ಕ್ರಂಚ್‌ ಹಾಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ.

ಕಳೆದ ಎರಡು ವರ್ಷಗಳಿಂದ ಯಾವುದೇ ಅನುದಾನವಿರದ ಕಾರಣ ಜಿಲ್ಲೆಯ ಸಣ್ಣ ನೀರಾವರಿ ವ್ಯಾಒತಿಯ ಕೆರೆಗಳ ಹೂಳೆತ್ತುವುದು ಮತ್ತು ಬೌಂಡರಿಂಗ್‌ ಕ್ರಂಚ್‌ ಹಾಕುವುದು ಸೇರಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಅನುದಾನ ಬಿಡುಗಡೆಗೊಂಡ ನಂತರ ಆದ್ಯತೆ ಮೇರೆಗೆ ಹೂಳೆತ್ತುವುದು ಸೇರಿ ಕೆರೆಗಳ ಬೌಂಡರಿಂಗ್‌ ಕ್ರಂಚ್‌ ಹಾಕಲು ಸೂಕ್ತ ಕ್ರಮ
ಕೈಗೊಳ್ಳಲಾಗುವುದು.
ನಾಗಶೆಟ್ಟಿ ಚಂದ್ರಶೇಖರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌, ಸಣ್ಣ ನೀರಾವರಿ

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.