ಕೊರೊನಾ ಭಯ ಬೇಡ, ಮುಂಜಾಗ್ರತೆ ಅಗತ್ಯ

ರೋಗ ತಡೆಗೆ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ರಚನೆಜಿಲ್ಲಾಡಳಿತದಿಂದ ಅಧಿಕಾರಿಗಳ ಸಭೆ

Team Udayavani, Mar 5, 2020, 3:48 PM IST

5-March-17

ಗದಗ: ಮನುಷ್ಯ ಹಾಗೂ ಪ್ರಾಣಿಗಳಲ್ಲಿ ಉಸಿರಾಟ ಹಾಗೂ ಶ್ವಾಸಕೋಶಕ್ಕೆ ತೊಂದರೆ ಉಂಟುಮಾಡುವ ಕೊರೊನಾ ವೈರಸ್‌ ಬಗ್ಗೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಆದರೆ, ಮುಂಜಾಗೃತೆ ವಹಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾನಗರಗಳಿಗೆ ಕೆಲಸಕ್ಕಾಗಿ ಗುಳೆಹೋಗಿ ಬರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೊರೊನಾ ವೈರಸ್‌ ತಡೆಗಟ್ಟುವ ಕುರಿತು ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ರಚಿಸಿದ್ದು, ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರಮುಖವಾಗಿ ತಾಂಡಾಗಳಲ್ಲಿ ಕೆಲಸಕ್ಕಾಗಿ ಗೋವಾ ಹಾಗೂ ಮಂಗಳೂರು ಪ್ರದೇಶಗಳಿಗೆ ಹೋಗಿ ಬರುವ ಜನರ ಮೇಲೆ ತೀವ್ರ ನಿಗಾ ಇಡಬೇಕು. ಈ ತಾಂಡಾ ಹಾಗೂ ಪ್ರತಿ ಗ್ರಾಮದಲ್ಲಿ ವಾರ್ಡ್‌ವಾರು ಕೊರೊನಾ ವೈರಸ್‌ ತಡೆಗಟ್ಟಲು ಆರೋಗ್ಯ ಇಲಾಖೆ ಕಡ್ಡಾಯವಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅದಕ್ಕೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಹಾಗೂ ಪೊಲೀಸ್‌ ಇಲಾಖೆ ಸಹಯೋಗ ನೀಡಬೇಕು ಎಂದು ತಿಳಿಸಿದರು.

ಅದರೊಂದಿಗೆ ಗೋವಾ ಮತ್ತು ಮಂಗಳೂರಿಗೆ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಚಾಲಕ ಹಾಗೂ ನಿರ್ವಾಹಕರಿಗೆ, ಆರೋಗ್ಯ ಇಲಾಖೆಯ ಎಲ್ಲ ವೈದ್ಯಾಧಿಕಾರಿಗಳು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಉಪಯೋಗಿಸಬೇಕು. ಕೊರೊನಾ ವೈರಸ್‌ ಸೋಂಕಿನ ಲಕ್ಷಣಗಳು ಕಂಡು ಬರುವ ಪ್ರಯಾಣಿಕರ ಕುರಿತು ನಿಗಾ ವಹಿಸಬೇಕು. ಆರೋಗ್ಯ ಇಲಾಖೆ, ಅಂಗನವಾಡಿ, ಪೊಲೀಸ್‌, ಸಾರ್ವಜನಿಕ ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿಗೆ ಕೊರೊನಾ ವೈರಸ್‌ ತಡೆ ಕುರಿತಂತೆ ಸೋಂಕಿನ ಲಕ್ಷಣಗಳು ಹಾಗೂ ಪತ್ತೆ ಹೆಚ್ಚುವಿಕೆ ಇವುಗಳ ಕುರಿತು ಆರೋಗ್ಯ ಇಲಾಖೆ ನಿರ್ದೇಶನದಂತೆ ತರಬೇತಿ ನೀಡಬೇಕು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ವೈ.ಕೆ.ಭಜಂತ್ರಿ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಕೊರೊನಾ ವೈರಸ್‌ ತಡೆ ಹಾಗೂ ಜಾಗೃತಿ ಕುರಿತಂತೆ ಹೊರಡಿಸಿದ ಸುತ್ತೋಲೆಯನ್ನು ವಿವರಿಸಿದ ಅವರು, ಕೊರೊನಾ ಸೋಂಕಿನ ಲಕ್ಷಣಗಳಾದ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಹಾಗೂ ಭೇದಿ ಕಂಡುಬಂದಲ್ಲಿ ತಕ್ಷಣ ಸಮೀಪದ ಪ್ರಾಥಮಿಕ ಕೇಂದ್ರ, ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಯನ್ನು ಸಂಪರ್ಕಿಸಬೇಕು. ಕೊರೊನಾ ವೈರಸ್‌ ಸೋಂಕಿನ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ, ನಿಕಟ ಸಂಪರ್ಕದಲ್ಲಿ ಬಂದಾಗ ಹಸ್ತಲಾಘವ ಮಾಡುವುದರಿಂದ ಮತ್ತು ಮುಟ್ಟುವುದರಿಂದ ಸೋಂಕು ಹರಡಬಹುದಗಿದೆ. ಕರೋನಾ ಸೋಂಕು ಲಕ್ಷಣ ಕಂಡು ಬಂದ ವ್ಯಕ್ತಿಯ ಮೂಗು ಗಂಟಲಿನ ಸ್ರವದ ಲೇಪನ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೊಳಪಡಿಸಿ ಸೋಂಕಿನ ಕುರಿತು ದೃಢೀಕರಣಗೊಳ್ಳುತ್ತದೆ. ಸಾರ್ವಜನಿಕರು ಕೆಮ್ಮು ಅಥವಾ ಸೀನುವಿಕೆ ಸಂದರ್ಭದಲ್ಲಿ ಕರವಸ್ತ್ರಗಳನ್ನು ಕಡ್ಡಾಯವಾಗಿ ಉಪಯೋಗಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಯತೀಶ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ., ಜಿ.ಪಂ. ಯೋಜನಾ ನಿರ್ದೇಶಕ ಸಿ.ಆರ್‌. ಮುಂಡರಗಿ, ಜಿಮ್ಸ್‌ ಆಸ್ಪತ್ರೆ ಅಧೀಕ್ಷಕ ಜಿ.ಎಸ್‌.ಪಲ್ಲೇದ, ಡಾ|ಬಿಜ್ಜಳ, ಆರೋಗ್ಯ ಇಲಾಖೆ, ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.