ಅಂಗವೈಕಲ್ಯ ಮೆಟ್ಟಿ ನಿಂತು ಮುಖ್ಯವಾಹಿನಿಗೆ ಬನ್ನಿ
Team Udayavani, Jan 14, 2019, 10:09 AM IST
ಗದಗ: ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಂಗವೈಕಲ್ಯವನ್ನು ಮೆಟ್ಟಿ ನಿಂತು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಹೇಳಿದರು. ನಗರದ ವಿವೇಕಾನಂದ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲಿಮ್ಕೋ ಇವರ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ವಿಶೇಷ ಆಡಿಪ್ ಮತ್ತು ಆರ್.ವೈ. ಯೋಜನೆಯಡಿ ವಿಕಲಚೇತನರಿಗೆ ಹಾಗೂ ಬಿಪಿಎಲ್ ಹೊಂದಿದ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯಡಿ ವಿಕಲಚೇತನರು ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಹಿರಿಯ ನಾಗರಿಕರಿಗೆ ಉಚಿತ ಸಾಧನೆ ಸಲಕರಣೆ ವಿತರಿಸಲಾಗುತ್ತಿದೆ ಎಂದರು. ಜಿಪಂ ಸಿಇಒ ಮಂಜುನಾಥ ಚವ್ಹಾಣ ಮಾತನಾಡಿ, ಯೋಜನೆಗಳನ್ನು ಪಾದರರ್ಶಕವಾಗಿ ಅನುಷ್ಠಾನಗೊಳಿಸಿದ್ದೇವೆ. ಆದರೂ ಒಂದಿಲ್ಲೊಂದು ರೂಪದಲ್ಲಿ ಅಲ್ಲಲ್ಲಿ ಅನರ್ಹರು ಆಯ್ಕೆಯಾಗಿರುತ್ತಾರೆ. ಸರಕಾರದ ಯೋಜನೆಗಳನ್ನು ಸಮಪರ್ಕವಾಗಿ ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳೂ ಸರಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಅಲಿಮ್ಕೋದ ಪ್ರತಿನಿಧಿ ಅಭಯ ಪ್ರತಾಪ ಸಿಂಗ್ ಮಾತನಾಡಿ, ಕೇಂದ್ರ ಸರ್ಕಾರದ ವಿಶೇಷ ಆಡಿಪ್ ಮತ್ತು ಆರ್.ವಿ.ವೈ. ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಸಮೀಕ್ಷೆಯಲ್ಲಿ 436 ವಿಕಲಚೇತನರು ಹಾಗೂ ಬಿಪಿಎಲ್ ಪಡಿತರ ಹೊಂದಿದ ಹಿರಿಯ ನಾಗರಿಕ ಫಲಾನುಭವಿಗಳನ್ನಾಗಿ ಗುರುತಿಸಲಾಗಿತ್ತು. ಅವರಿಗೆ 28 ಲಕ್ಷ ರೂ. ವೆಚ್ಚದಡಿ ತ್ರಿಚಕ್ರ ಸೈಕಲ್, ವೀಲ್ ಚೇರ್, ಕ್ರಚಸ್ ಆಕ್ಷಿಲರಿ, ಬ್ರೈಲ್ ಕಿಟ್, ಎಂಎಸ್‌ಐಇಡಿ ಕಿಟ್ಸ್, ಹೀಯರಿಂಗ್ ಏಡ್ ಮಶಿನ್, ಸಿಪಿ ಚೇರ್ಸ್ ಸೇರಿದಂತೆ ಮತ್ತಿತರೆ ಸಾಧನ ಸಲಕರಣೆ ವಿತರಿಸಲಾಯಿತು.
ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಈರಪ್ಪ ನಾಡಗೌಡ್ರ, ಹನುಮಂತಪ್ಪ ಪೂಜಾರ, ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ ಇದ್ದರು. ಶ್ರೀಧರ ಪೂಜಾರ ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆಶು ನದಾಫ್ ವಂದಿಸಿದರು.
ಕೇಂದ್ರದ ಕಾರ್ಯಕ್ರಮಕ್ಕೆ ಸಂಸದರೇ ಗೈರು
ನಗರದ ಎಪಿಎಂಸಿ ಆವರಣದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆದ ವಿಕಲ ಚೇತನರು ಮತ್ತು ಹಿರಿಯ ನಾಗರಿಕರಿಗೆ ಸಾಧನ-ಸಲಕರಣೆ ವಿತರಣಾ ಕಾರ್ಯಕ್ರಮದಲ್ಲಿ ಸಂಸದರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಸಮಾರಂಭ ಉದ್ಘಾಟಿಸಬೇಕಿದ್ದ ಬಿಜೆಪಿಯ ಹಾವೇರಿ ಸಂಸದ ಶಿವಕುಮಾರ ಉದಾಸಿ ಮತ್ತು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಹಾಗೂ ಅಧ್ಯಕ್ಷತೆ ವಹಿಸಬೇಕಿದ್ದ ಸ್ಥಳೀಯ ಶಾಸಕ ಎಚ್.ಕೆ. ಪಾಟೀಲ ಗೈರಾಗಿದ್ದರು. ಗಣ್ಯರ ಅನುಪಸ್ಥಿತಿಯಿಂದಾಗಿ ಜಿ.ಪಂ. ಉಪಾಧ್ಯಕ್ಷೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.