ಮಾ.14ರಿಂದ ಲಕ್ಕುಂಡಿ ಉತ್ಸವ ಆರಂಭ
ಫ್ಲೆಕ್ಸ್ -ಬ್ಯಾನರ್ ಮುಕ್ತ ಉತ್ಸವಕ್ಕೆ ಆದ್ಯತೆಸ್ಥಳೀಯ ಕಲಾವಿದರಿಗೆ ಸಮಾನ ಅವಕಾಶ ಭರವಸೆ
Team Udayavani, Feb 16, 2020, 3:20 PM IST
ಗದಗ: ಮಾ. 14 ಹಾಗೂ 15ರಂದು ಲಕ್ಕುಂಡಿ ಉತ್ಸವವನ್ನು ಅರ್ಥಪೂರ್ಣ ಹಾಗೂ ಸಂಭ್ರಮದಿಂದ ಆಚರಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಲಕ್ಕುಂಡಿಯ ಅನ್ನದಾನೀಶ್ವರ ಮಠದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹಾಗೂ ರಾಜ್ಯ ಮತ್ತು ಅಂತಾರಾಷ್ಟ್ರೀಯ ಕಲಾವಿದರಿಗೆ ಸಮಾನ ಅವಕಾಶ ಕಲ್ಪಿಸುವ ಭರವಸೆ ನೀಡಿದರು. ಲಕ್ಕುಂಡಿ ಉತ್ಸವವನ್ನು ಸ್ವಚ್ಛತೆಯ ರೂಪದಲ್ಲಿ ಫ್ಲೆಕ್ಸ್-ಬ್ಯಾನರ್ ಮುಕ್ತ ಉತ್ಸವವನ್ನು ಆಚರಿಸುವ ಆಶಯ ವ್ಯಕ್ತಪಡಿಸಿದರು. ಲಕ್ಕುಂಡಿ ಉತ್ಸವದಲ್ಲಿ ಸಿಡಿಮದ್ದಿನ ವಿಶೇಷ ಪ್ರದರ್ಶನ ಏರ್ಪಡಿಸಲಾಗುವುದು. ಉತ್ಸವದ ವೇದಿಕೆ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ಹೊರತುಪಡಿಸಿ, ಉಳಿದ ಸಮಯದಲ್ಲಿ ಸಂಪೂರ್ಣವಾಗಿ ಕಲಾವಿದರ ಕಲೆ ಅನಾವರಣಗೊಳಿಸುವಂತಹ ವೇದಿಕೆ ಆಗಲು ಎಲ್ಲ ಚುನಾಯಿತ ಪ್ರತಿನಿಧಿಗಳು ಸಹಕರಿಸಬೇಕು. ಕಾರ್ಯಕ್ರಮದ ಉದ್ಘಾಟನೆ ಸಮಾರಂಭಕ್ಕೆ ಅತಿಥಿಗಳನ್ನು ಆಹ್ವಾನಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಉತ್ಸವ ಹಿನ್ನೆಲೆಯಲ್ಲಿ ಗ್ರಾಮವನ್ನು ಸ್ವಚ್ಛವಾಗಿಸಲು ಗ್ರಾಮಸ್ಥರು ಸಹಕಾರ ನೀಡಬೇಕು. ಸಕ್ರಿಯವಾಗಿ ಉತ್ಸವದ ಯಶಸ್ಸಿಗೆ ಭಾಗಿಯಾಗಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದರು.
ಸ್ಥಳೀಯ ಕಲಾವಿದರಿಗೆ ಉತ್ಸವದಲ್ಲಿ ಭಾಗಿಯಾಗಲು ಅರ್ಜಿ ಸಲ್ಲಿಕೆಗೆ ದಿನವನ್ನು ನಿಗದಿ ಮಾಡಿ, ಆಯ್ಕೆ ಸಮಿತಿಯಿಂದ ತಂಡಗಳ ಆಯ್ಕೆ ಮನರಂಜನೆ, ಸಂದೇಶ ನೀಡುವಂತಹ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಜಿ.ಪಂ. ಅಧ್ಯಕ್ಷ ಸಿದ್ದು ಪಾಟೀಲ ಮಾತನಾಡಿ, ಲಕ್ಕುಂಡಿ ಐತಿಹಾಸಿಕ ಪರಂಪರೆಯ ತಾಣವಾಗಿದ್ದು, ಈ ಬಾರಿಯ ಲಕ್ಕುಂಡಿ ಉತ್ಸವವನ್ನು ಯಶಸ್ವಿಯಾಗಿಸಲು ಅಗತ್ಯ ಸಹಕಾರ ನೀಡಲಾಗವುದು. ರಾಜ್ಯ ಸರಕಾರ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಅದನ್ನು ಸಕ್ರಿಯವಾಗಿಸಿ ಉತ್ಸವವನ್ನು ಉತ್ತಮ ರೀತಿಯಲ್ಲಿ ಆಚರಿಸಲು ಕ್ರಮ ಜರುಗಿಸಬೇಕು ಎಂದರು.
ಲಕ್ಕುಂಡಿ ಉತ್ಸವ ಕುರಿತಂತೆ ಗ್ರಾಮದ ಪ್ರಮುಖರು ಮಾತನಾಡಿ, ಉತ್ಸವದ ಸಂಭ್ರಮದ ಆಚರಣೆಯಲ್ಲಿ ಗ್ರಾಮದ ಸರ್ವ ಸಹಕಾರ ನೀಡುವ ಕುರಿತು ವಿಚಾರಗೋಷ್ಠಿಗಳಲ್ಲಿ ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮುಂತಾದವುಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ವಿಚಾರಗೋಷ್ಠಿ ಏರ್ಪಡಿಸಲು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲು, ಲಕ್ಕುಂಡಿಯ ಇತಿಹಾಸ ಕುರಿತು ಹೆಚ್ಚಿನ ಮಾಹಿತಿ ಒದಗಿಸುವ ಕಾರ್ಯಕ್ರಮ, ದೇವಸ್ಥಾನಗಳಿಗೆ ದೀಪಾಲಂಕಾರ ಮಾಡುವ, ಐತಿಹಾಸಿಕ ದೇವಸ್ಥಾನಗಳಿಗೆ ಮಾಹಿತಿ ಫಲಕ ಅಳವಡಿಕೆ ಕುರಿತು ಸಲಹೆಗಳನ್ನು ನೀಡಿದರು.
ಲಕ್ಕುಂಡಿ ಗ್ರಾ.ಪಂ. ಅಧ್ಯಕ್ಷ ಶಿವಪುತ್ರಪ್ಪ ಬೂದಿಹಾಳ, ತಾ.ಪಂ. ಉಪಾಧ್ಯಕ್ಷೆ ಸುಜಾತಾ ಖಂಡು, ಜಿ.ಪಂ. ಸಿಇಒ ಡಾ| ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎನ್., ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾ.ಪಂ. ಇಒ ಡಾ| ಎಚ್.ಎಸ್. ಜನಗಿ ಹಾಗೂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮದ ಗಣ್ಯರು, ಗುರು, ಹಿರಿಯರು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.