![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 14, 2022, 11:55 AM IST
ಗದಗ: ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಅವಾಂತರ ಸೃಷ್ಟಿಸಿದ್ದ ನರಿಯನ್ನು ಸ್ಥಳೀಯರು ಅಟ್ಟಿಸಿಕೊಂಡು ಕೊಂದಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಬುಧವಾರ (ಡಿ.14) ನಡೆದಿದೆ.
ಬುಧವಾರ ಬೆಳಿಗ್ಗೆ ಗಜೇಂದ್ರಗಡ ಪಟ್ಟಣಕ್ಕೆ ದಾಳಿಯಿಟ್ಟ ನರಿ ಸ್ಥಳೀಯರನ್ನು ಬೆನ್ನಟ್ಟುತ್ತಿದ್ದು, ಹಲವರು ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ನರಿಯನ್ನು ಅಟ್ಟಾಡಿಸಿಕೊಂಡು ಕೊಂದು ಹಾಕಿದ್ದಾರೆ.
ಮಂಗಳವಾರ ಗದಗ ತಾಲೂಕಿನ ಅಸುಂಡಿ ಗ್ರಾಮದ ಹುಲಕೋಟಿ ಸಹಕಾರ ಸಂಸ್ಥೆಯ ಪ್ರೌಢಶಾಲೆಯ ಆವರಣದಲ್ಲಿ ಆಗಮಿಸಿದ್ದ ನರಿಯೊಂದು ಅವಾಂತರ ಸೃಷ್ಟಿಸಿತ್ತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಾಬರಿಗೊಂಡಿದ್ದರು. ತದನಂತರ ಅರಣ್ಯ ಇಲಾಖೆ ಸಿಬ್ಬಂದಿ ನರಿಯನ್ನು ಬಲೆಯೊಳಗೆ ಸೆರೆ ಹಿಡಿದು ಬಿಂಕದಕಟ್ಟಿ ಮೃಗಾಲಯಕ್ಕೆ ಬಿಟ್ಟಿದ್ದರು.
ಬುಧವಾರ (ಇಂದು) ಗಜೇಂದ್ರಗಡ ಪಟ್ಟಣದಲ್ಲಿ ಸಾರ್ವಜನಿಕ ಮೇಲೆ ದಾಳಿ ನಡೆಸಿದ ನರಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸ್ಥಳೀಯರು ನರಿ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.