ಗದಗ: ಸಮಾಜಮುಖಿ ಆಲೋಚನೆ ಹೊಂದಿದ್ದ ಒಡೆಯರ್
Team Udayavani, Jun 6, 2024, 4:35 PM IST
■ ಉದಯವಾಣಿ ಸಮಾಚಾರ
ಗದಗ: ಮೈಸೂರಿನ ಸುವರ್ಣಯುಗದ ಸಾಮ್ರಾಟ್, ಸಾಮಾಜಿಕ ನ್ಯಾಯದ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್. ಅವರ ಆಡಳಿತಾವಧಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಇಂಬು-ವೇಗೋತ್ಕರ್ಷ ದೊರೆಯಿತು. ಅವರು ಅರಮನೆಯಲ್ಲಿ ಕಾಲ ಕಳೆದದ್ದಕ್ಕಿಂತ ಸಮಾಜಮುಖಿ ಆಲೋಚನೆ ಹೊಂದಿ ಜನರೊಂದಿಗೆ ಇದ್ದುದೇ ಹೆಚ್ಚು. ಇವರ ತುಡಿತದ ಫಲವೇ ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಕಾರಣವಾಯಿತು ಎಂದು ಬರಹಗಾರ ಬಸವರಾಜ ಗಣಪ್ಪನವರ ಹೇಳಿದರು.
ನಗರದಲ್ಲಿ ಜಿಲ್ಲಾ ಕಸಾಪ ಏರ್ಪಡಿಸಿದ ಕಸಾಪ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 140ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲೇ ಮೊಟ್ಟಮೊದಲ ವಿವಿಯನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕಾಲದಲ್ಲಿ ಮೈಸೂರನ್ನು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ದರು. ಶಿಕ್ಷಣ, ಕೈಗಾರಿಕೆ, ಕೃಷಿ ಮೂರು ಆಯಾಮಗಳಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಕೃಷಿ ಭೂಮಿಯ ಅಭಿವೃದ್ಧಿಗೆ ನೀರಾವರಿ ಯೋಜನೆ ಜಾರಿಗೆ ತಂದ ಧೀಮಂತರು ಎಂದರು.
ಆಡಳಿತದಲ್ಲಿ ಜನರ ಸಹಭಾಗಿತ್ವ ಇರಬೇಕು ಎಂಬ ಉದೇಶದಿಂದ ಮೈಸೂರು ಸಂಸ್ಥಾನದಲ್ಲಿ ಚಾಮರಾಜ ಒಡೆಯರ ಕಾಲದಲ್ಲಿ ಪ್ರಜಾಪ್ರತಿನಿಧಿ ಸಭೆ ಪ್ರಾರಂಭಗೊಂಡಿತು. ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕಾಲದಲ್ಲಿ ಇದು ವಿಸ್ತಾರವಾಗಿ ಬೆಳೆಯಿತು. ಶಿಕ್ಷಣ ಇಲ್ಲದೇ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಸತ್ಯವನ್ನು ನಾಲ್ವಡಿ ಕೃಷ್ಣರಾಜರು
ಕಂಡುಕೊಂಡಿದ್ದರು. ಈ ಕಾರಣಕ್ಕಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಅವರು ಹೆಚ್ಚಿನ ಒತ್ತು ನೀಡಿದರು. ಉಚಿತ ಶಿಕ್ಷಣ ಪ್ರಾರಂಭಿಸಿದರು.
ಕನ್ನಡ ನಾಡಿನಲ್ಲಿ ನೆಲ-ಜಲ, ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿಯಲು ಕಸಾಪದಂತಹ ಸಂಸ್ಥೆ ಬೇಕು ಎನ್ನುವ ಚಿಂತನೆ ಮಾಡಿ ಸ್ಥಾಪಿಸಿದ ಸಂಸ್ಥೆ ಒಂದು ಶತಮಾನ ಕಂಡು ಕನ್ನಡಿಗರ ಹೆಮ್ಮೆಯ ದ್ಯೊತಕವಾಗಿದೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಲ್ವಡಿ ಕೃಷ್ಟರಾಜ ಒಡೆಯರ್ ಮೊಟ್ಟ ಮೊದಲ ಬಾರಿಗೆ
ಸ್ತ್ರೀ ಶಿಕ್ಷಣವನ್ನು ಕಡ್ಡಾಯಗೊಳಿಸಿದರು. ಕುರುಡ ಮತ್ತು ಮೂಕ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು. ಅವರ ಅವಧಿಯಲ್ಲಿ 1911ರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಿಸಲಾಯಿತು. 1918ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪದ್ಧತಿ ನಿರ್ಮೂಲನೆ ಮಾಡಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಅಶೋಕ ಬರಗುಂಡಿ, ಚಂದ್ರಶೇಖರ ವಸ್ತ್ರದ, ಪ್ರ.ತೋ. ನಾರಾಯಣಪುರ, ಶಶಿಕಾಂತ ಕೊರ್ಲಹಳ್ಳಿ, ಅಶೋಕ ಹಾದಿ, ಅಶೋಕ ಸತ್ಯರಡ್ಡಿ, ಡಿ.ಎಸ್. ಬಾಪುರಿ, ಮಂಜುನಾಥ ಹಿಂಡಿ, ಸಿ.ಎಂ. ಮಾರನಬಸರಿ, ಡಾ| ರಾಜೇಂದ್ರ ಗಡಾದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.