ಶಿಕ್ಷಕರ ಬೃಹತ್‌ ಪ್ರತಿಭಟನೆ 


Team Udayavani, Feb 17, 2019, 10:23 AM IST

17-february-15.jpg

ಗದಗ: ಶಿಕ್ಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಬಳಿ ಜಮಾಯಿಸಿದ ಶಿಕ್ಷಕರು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಶಿಕ್ಷಕರ ವರ್ಗಾವಣೆ ಕಾಯ್ದೆ 2017ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರತಿವರ್ಷ ಮಾರ್ಚ್ -ಏಪ್ರಿಲ್‌ನಲ್ಲಿ ನಡೆಯಬೇಕು. ಆದರೆ ಕಳೆದ ಮೂರು ವರ್ಷಗಳಿಂದ ವರ್ಗಾವಣೆ ಪ್ರಕ್ರಿಯೆ ನಡೆಯದೇ ಶಿಕ್ಷಕ ಸಮುದಾಯ ತೊಂದರೆಗೆ ಸಿಲುಕಿದೆ ಎಂದು ದೂರಿದರು.

ನವೆಂಬರ್‌ನಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಫೆಬ್ರುವರಿಯಲ್ಲೇ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಶೇಕಡವಾರು ಮಿತಿಯನ್ನು ಪರಿಗಣಿಸಿ ಪ್ರಸಕ್ತ ಸಾಲಿನ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್‌ ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಸೇವಾನಿರತ ಪದವೀಧರ ಶಿಕ್ಷಕರಿಗೆ ಬಡ್ತಿ ನೀಡುವುದು ಅಗತ್ಯವಾಗಿದೆ. ಈಗಾಗಲೇ ಎರಡು ಬಾರಿ ನೇರ ನೇಮಕಾತಿಯ ಮೂಲಕ ಪದವೀಧರ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಸೇವಾನಿರತ ಶಿಕ್ಷಕರಿಗೆ ನಿರಂತರ ಅನ್ಯಾಯವಾಗುತ್ತಿದೆ. ಕಾರಣ ಬಡ್ತಿ ಪ್ರಕ್ರಿಯೆಗಳು ಸಂಪೂರ್ಣ ಸ್ಥಗಿತವಾಗಿದ್ದು, ಎಲ್ಲದಕ್ಕೂ ‘ಪವಿತ್ರಾ ಪ್ರಕರಣ’ವನ್ನು ಮುಂದುಮಾಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.

ನೂತನ ಪಂಚಣಿ ಯೋಜನೆ(ಎನ್‌ಪಿಎಸ್‌)ಗೆ ಸಂಬಂಧಿಸಿದಂತೆ ಸಮಿತಿಯ ವರದಿಯನ್ನು ಪಡೆದು ತಕ್ಷಣ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಗ್ರಾಮೀಣ ಕೃಪಾಂಕ ಸೌಲಭ್ಯ ಪಡೆದುಕೊಂಡು ಸೇವೆಯಿಂದ ವಜಾಗೊಂಡಿರುವ ಶಿಕ್ಷಕರ ಪೂರ್ಣ ಸೇವೆ ಪರಿಗಣಿಸಿ ಎಲ್ಲ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ, ಎಸ್‌.ಎಚ್‌. ನೈನಾಪುರ, ಬಿ.ಎಸ್‌. ಹರ್ಲಾಪುರ, ಎಸ್‌.ಎಲ್‌. ಶಿವಪ್ಪಗೌಡ್ರ, ಕೋಶಾಧ್ಯಕ್ಷ ಆರ್‌.ಎಚ್‌. ಖಾನಾಪುರ, ಎಚ್‌.ಆರ್‌. ಕೋಣಿಮನಿ, ಎಸ್‌.ಎನ್‌.ಅತಡಕರ, ಎಸ್‌.ಎಂ. ಪಾಟೀಲ, ಕೆ.ಎಂ. ನರಗುಂದ, ಡಿ.ಎಸ್‌. ತಳವಾರ, ಬಿ.ಎನ್‌. ಕ್ಯಾತನಗೌಡ್ರ, ಎಸ್‌.ಎಚ್‌. ಇಮ್ರಾಪುರ, ವಿ.ಜಿ. ಖೋಡೆ, ವಿಶ್ವನಾಥ ಉಳ್ಳಾಗಡ್ಡಿ, ಬಿ.ಬಿ.ಹಡಪದ, ಎಂ.ಬಿ.ಬಾರಾಟಕ್ಕೆ, ಎಸ್‌.ಡಿ.ಮಾದರ, ಎಂ.ಎಫ್‌.ಕೋಲ್ಕಾರ, ಬಿ.ವಿ.ಚಕ್ರಸಾಲಿ, ಎಂ.ಎಸ್‌.ಪಿಳ್ಳಿ, ಎಸ್‌.ಕೆ.ಮಂಗಳಗುಡ್ಡ, ಆರ್‌.ಎಚ್‌.ಖಾನಾಪೂರ, ಎಚ್‌ .ಜಿ.ಕಾಂಬಳೇಕರ, ಎಸ್‌.ಡಿ.ಗುಂಜಳ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.