Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
Team Udayavani, Sep 11, 2024, 8:35 PM IST
ಗದಗ: ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿಯಾಗುವ ಪ್ರಶ್ನೆಯೂ ಇಲ್ಲ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ನಮ್ಮ ನಾಯಕರು. ಅನವಶ್ಯವಾಗಿ ಗೊಂದಲ ಸೃಷ್ಟಿ ಮಾಡಬಾರದು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಮಾಧ್ಯಮಗಳಿಗೂ ಗೊತ್ತಿದೆ. ಮುಂದಿನ ಮುಖ್ಯಮಂತ್ರಿ ಚರ್ಚೆಗೆ ಇದು ಸಮಯವೂ ಅಲ್ಲ. ವಿವೇಕ ಇದ್ದವರು ಅನವಶ್ಯಕ ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.
ಅಮೆರಿಕ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ರಾಹುಲ್ ಗಾಂಧಿ ಅವರನ್ನು ಎಷ್ಟೇ ಅವಹೇಳನ ಮಾಡಿದರೂ ಜನರು ಅವರನ್ನು ನಾಯಕ ಅಂತ ಗುರುತಿಸಿದ್ದಾರೆ. ರಾಹುಲ್ ಹೇಳಿಕೆ ಕೊಟ್ಟಿರುವುದನ್ನು ಗಮನಿಸಿ ತಿದ್ದಿಕೊಳ್ಳುವ ಪ್ರಯತ್ನವನ್ನು ಬಿಜೆಪಿ ಮಾಡಬೇಕು ಎಂದು ತಿರುಗೇಟು ನೀಡಿದರು.
ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಶೀಘ್ರ ಸರ್ವಪಕ್ಷದ ಸಭೆ ಕರೆದು, ನಿಯೋಗವನ್ನು ಯಾವಾಗ ಕರೆದೊಯ್ಯಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು. ನಮ್ಮ ಪ್ರಯತ್ನ ಯಶಸ್ವಿ ಆಗದಿದ್ದಲ್ಲಿ ಕಾನೂನಾತ್ಮಕ ಹೋರಾಟ ಅನಿವಾರ್ಯ ಎಂದು ಹೇಳಿದರು.
ಇದನ್ನೂ ಓದಿ: Jammu: ಕಥುವಾ ಗಡಿಯಲ್ಲಿ ಎನ್‌ಕೌಂಟರ್… 2 ಭಯೋತ್ಪಾದಕರ ಹತ್ಯೆ, ಶೋಧ ಕಾರ್ಯ ಮುಂದುವರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.