ಲಾಕ್‌ಡೌನ್ ಮತ್ತಷ್ಟು ಬಿಗಿ
ಜೆಟಿ ಮಠದಿಂದ ಕೋವಿಡ್ ನಿಯಂತ್ರಣಕ್ಕೆ 10 ಲಕ್ಷ ಸರ್ಕಾರದ ಜೊತೆ ಎಲ್ಲರೂ ಕೈ ಜೋಡಿಸಿ
Team Udayavani, Apr 13, 2020, 1:48 PM IST
ಗದಗ: ತೋಂಟದಾರ್ಯ ಮಠದಲ್ಲಿ ನಡೆದ ಚೆಕ್ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ. ಪಾಟೀಲ ಮಾತನಾಡಿದರು.
ಗದಗ: ಕೊರೊನಾ ವೈರಸ್ ಶಂಕಿತರು ಹಾಗೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್‌ಡೌನ್ ಮತ್ತಷ್ಟು ಬಿಗಿ ಗೊಳಿಸಲಾಗುವುದು. ಗದಗ-ಬೆಟಗೇರಿಯ ಜನರು ತಮ್ಮ ಆರೋಗ್ಯ ರಕ್ಷಣೆಗಾಗಿ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಎಚ್ಚರಿಸಿದರು.
ಕೋವಿಡ್-19 ತಡೆಯಲು ನಗರದ ತೋಂಟದಾರ್ಯ ಮಠದಲ್ಲಿ ಶ್ರೀಗಳಿಂದ 10 ಲಕ್ಷ ರೂ. ದೇಣಿಗೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ನಗರದ ರಂಗನವಾಡದ ವೃದ್ಧೆಯೊಬ್ಬರು ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ. ಜನರ ಸುರಕ್ಷತೆಗಾಗಿ ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೂ ನಗರದಲ್ಲಿ ಸಾರ್ವಜನಿಕರ ಸಂಚಾರದಲ್ಲಿ ನಿರೀಕ್ಷಿತ ಬದಲಾವಣೆ ಕಂಡುಬರುತ್ತಿಲ್ಲ. ದಿನಸಿ ಖರೀದಿ, ಮಾಂಸ ಖರೀದಿಗೆ ಮುಗಿಬಿದ್ದ ಜನರು ಎಂದು ಪ್ರತಿನಿತ್ಯ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ದೇಶಕ್ಕೆಲ್ಲ ಒಂದು ಚಿಂತೆಯಾದರೆ ಗದಗಿನ ಜನರಿಗೆ ತಿನ್ನುವುದೊಂದೇ ಚಿಂತೆ ಎಂಬಂತೆ ಭಾಸವಾಗುತ್ತಿದೆ. ಈ ಕುರಿತು ಸಾರ್ವಜನಿಕರು ಕೂಡ ಚಿಂತನೆ ನಡೆಸಬೇಕು ಎಂದು ಹೇಳಿದರು.
ಕೋವಿಡ್ -19 ಮುಕ್ತ ಜಿಲ್ಲೆಯನ್ನಾಗಿಸಲು ಮುಂದಿನ 20 ದಿನಗಳ ಕಾಲ ಎರಡನೇ ಹಂತದ ಲಾಕ್‌ಡೌನ್ ಬಿಗಿಗೊಳಿಸಲಾಗುತ್ತದೆ. ಈ ವಿಚಾರದಲ್ಲಿ ಜಿಲ್ಲಾಡಳಿತ ಯಾವುದೇ ಒತ್ತಡಕ್ಕೆ ಮಣಿಯಬಾರದು. ಜನರಿಗೆ ದಿನ ಬಳಕೆ ವಸ್ತು ಪೂರೈಕೆಗೆ ಅಗತ್ಯ ಕ್ರಮ ಜರುಗಿಸಲಾಗುತ್ತದೆ. ವರ್ತಕರು ಕೂಡ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಳಿಕ ಆಶೀರ್ವಚನ ನೀಡಿದ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ, ಕೊರೊನಾ ವೈರಸ್ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಪ್ರಜೆಗಳ ಪ್ರಾಣ ರಕ್ಷಿಸಲು ಸರಕಾರ ಲಾಕ್‌ಡೌನ್ ಘೋಷಿಸಿದೆ. ಇದರಿಂದ ಸಾಕಷ್ಟು ಆರ್ಥಿಕ ಹಾನಿ ಉಂಟಾಗುತ್ತಿದೆ. ಬಹಳಷ್ಟು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ಯಾಕೇಜ್ ರೂಪದಲ್ಲಿ ಬಡವರ ನೆರವಿಗೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಅದರೊಂದಿಗೆ ಹನಿ ಹನಿಗೂಡಿದರೆ, ಹಳ್ಳ ಎಂಬಂತೆ ಸಾರ್ವಜನಿಕರು ಕೂಡ ಸರಕಾರದೊಂದಿಗೆ ಕೈಜೋಡಿಸಬೇಕು. ಜೊತೆಗೆ ವೈರಸ್ ಸಮುದಾಯಕ್ಕೆ ಹರಡದಂತೆ ಜಾಗ್ರತೆ ವಹಿಸಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಜೀವ ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್‌ಪಿ ಯತೀಶ್ ಎನ್., ವಿಪ ಸದಸ್ಯ ಎಸ್.ವಿ. ಸಂಕನೂರ, ಶ್ರೀಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಕುರಡಗಿ ಮತ್ತಿತರರು ಇದ್ದರು.
ಶಂಕಿತರ ಸಂಖ್ಯೆ ಹೆಚ್ಚಳ
ಜಿಲ್ಲೆಯಲ್ಲಿ ಹೊಸದಾಗಿ 7 ಸೇರಿದಂತೆ ನಿಗಾಕ್ಕೆ ಒಳಗಾದವರ ಸಂಖ್ಯೆ 349ಕ್ಕೆ
ಏರಿಕೆಯಾಗಿದೆ. 120 ಜನರು 28 ದಿನಗಳ ನಿಗಾ ಅವ ಧಿ ಪೂರೈಸಿದ್ದಾರೆ. 194 ಮನೆಯಲ್ಲಿಯೇ ಪ್ರತ್ಯೇಕ ನಿಗಾಹದಲ್ಲಿದ್ದು, 34 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. 194
ಪರೀಕ್ಷೆಗಾಗಿ ಸಂಗ್ರಹಿಸಿದ್ದು, 187 ಮಾದರಿಗಳು ನಕಾರಾತ್ಮಕವಾಗಿವೆ. 6 ಜನರ ವರದಿಗಳು ಇನ್ನಷ್ಟೇ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.