ಲಕ್ಕುಂಡಿ ಉತ್ಸವ ಅರ್ಥಪೂರ್ಣ ಆಚರಣೆ
ಪರಿಸರ ಸ್ವಚ್ಛತೆಗೆ ಆದ್ಯತೆ ಬ್ಯಾನರ್-ಪ್ಲಾಸ್ಟಿಕ್ ಮುಕ್ತ ಉತ್ಸವವನ್ನಾಗಿಸಲು ತೀರ್ಮಾನ
Team Udayavani, Mar 1, 2020, 2:50 PM IST
ಗದಗ: ಈ ಬಾರಿ ಲಕ್ಕುಂಡಿ ಉತ್ಸವವನ್ನು ವಿಶಿಷ್ಟ, ಅರ್ಥಪೂರ್ಣ ಹಾಗೂ ಸಂಭ್ರಮದೊಂದಿಗೆ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಲು ಬ್ಯಾನರ್ ಹಾಗೂ ಪ್ಲಾಸ್ಟಿಕ್ ಮುಕ್ತ ಉತ್ಸವವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಬೇಕು ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಮನವಿ ಮಾಡಿದರು.
ಇಲ್ಲಿನ ಜಿಲ್ಲಾಡಳಿತ ಭವನದ ಜಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಲಕ್ಕುಂಡಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಲಕ್ಕುಂಡಿ ಉತ್ಸವದ ಲೋಗೋ ಬಿಡುಗಡೆಗೊಳಿಸಿ ಅವರು ಮಾತನಾಡಿ, ಲಕ್ಕುಂಡಿಯ ಹಿಂದಿನ ಉತ್ಸವಗಳ ಅನುಭವದ ಆಧಾರದ ಮೇಲೆ ಈ ಬಾರಿಯ ಉತ್ಸವ ಸಮಾಜಮುಖೀಯಾಗಿ ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಬೇಕು ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.
ಮಾರ್ಚ್ 21 ಮತ್ತು 22 ರಂದು ಎರಡು ದಿನಗಳ ಕಾಲ ಲಕ್ಕುಂಡಿ ಉತ್ಸವ ನಡೆಯಲಿದ್ದು, ರಾಜ್ಯದ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ, ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವರು ಭಾಗವಹಿಸಲಿದ್ದು, ಮುಖ್ಯಮಂತ್ರಿಗಳು ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಉತ್ಸವ ಅಂಗವಾಗಿ ಮಾ. 20ರಂದು ಗಾಳಿಪಟದ ಸ್ಪರ್ಧೆ ಹಾಗೂ 21ರಂದು ಮಧ್ಯಾಹ್ನ ಜಾನಪದ ಕಲಾ ಮೆರವಣಿಗೆ ನಡೆಯಲಿದೆ. ಮಾ. 22ರಂದು ಬೆಳಗ್ಗೆ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುವುದು, ನಾಡಿನ ಖ್ಯಾತ ಕಲಾವಿದರನ್ನು ಆಹ್ವಾನಿಸುವುದರ ಜೊತೆಗೆ ಸ್ಥಳೀಯ ಹಾಗೂ ಲಕ್ಕುಂಡಿ ಗ್ರಾಮದ ಕಲಾವಿದರ ಕಲಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು, ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಕಲಾವಿದರಿಗೆ ವಿಶೇಷ ಆಸಕ್ತಿ ವಹಿಸಿ, ಸರಿಯಾದ ವಸತಿ ಹಾಗೂ ಊಟೋಪಹಾರ ವ್ಯವಸ್ಥೆಯಾಗಬೇಕು. ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ಪತ್ರವನ್ನು ಕಳುಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮಾತನಾಡಿ, ಈಗಾಗಲೇ ಜಿಲ್ಲಾಉಸ್ತುವಾರಿ ಸಚಿವರು ಲಕ್ಕುಂಡಿ ಗ್ರಾಮದಲ್ಲಿ ಉತ್ಸವದ ಪೂರ್ವಭಾವಿ ಸಭೆ ಜರುಗಿಸಿದ್ದು, ತಮ್ಮ ಅಧ್ಯಕ್ಷತೆಯಲ್ಲಿ ಕೂಡ ಸಭೆ ಜರುಗಿದ್ದು, ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಗ್ರಾಮೀಣ ಕ್ರೀಡೆಗಳು, ವಿಚಾರಗೋಷ್ಠಿ, ಕವಿಗೋಷ್ಠಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯದ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಮಾತನಾಡಿ, ಲಕ್ಕುಂಡಿ ಉತ್ಸವವನ್ನು ವ್ಯವಸ್ಥಿತ ಹಾಗೂ ಯಶಸ್ವಿಯನ್ನಾಗಿಸಲು ಸ್ವಾಗತ, ಹಣಕಾಸು, ಪ್ರಚಾರ, ಪ್ರದರ್ಶನ, ಮೆರವಣಿಗೆ, ವಸತಿ, ಸಾರಿಗೆ ಸೇರಿದಂತೆ ಒಟ್ಟು 15 ಸಮಿತಿಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಬಾರಿಯ ಲಕ್ಕುಂಡಿ ಉತ್ಸವ ಜನ ಮೆಚ್ಚುಗೆಗೆ ಪಾತ್ರವಾಗಬೇಕು. ಈ ನಿಟ್ಟಿನಲ್ಲಿ ಉತ್ಸವದ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್ ನಿಯೋಜನೆ, ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಅದರೊಂದಿಗೆ ಲಕ್ಕುಂಡಿ ಗ್ರಾ.ಪಂ. ವತಿಯಿಂದ ಇಡೀ ಊರಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಸಿ.ಸಿ.ಪಾಟೀಲ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಡಾ| ಆನಂದ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ., ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.