ಗಜೇಂದ್ರಗಡದ 2 ಬಡಾವಣೆ ಸೀಲ್‌ಡೌನ್
Team Udayavani, Jul 11, 2020, 4:21 PM IST
ಗಜೇಂದ್ರಗಡ: ಪಟ್ಟಣದಲ್ಲಿ ಕೋವಿಡ್ ಸೊಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಎರಡು ಬಡಾವಣೆಗಳನ್ನು ಸೀಲ್‌ಡೌನ್ ಮಾಡಲಾಯಿತು.
ಪಟ್ಟಣದಲ್ಲಿ ಇದುವರೆಗೂ ಯಾವುದೇ ಪ್ರಕರಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಎರೆಡು ದಿನಗಳಲ್ಲಿ ಇನ್ನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವ 14 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ಇನ್ನು ದ್ವಿತೀಯ ಸಂಪರ್ಕಿತರ ಸಂಖ್ಯೆ 50ಕ್ಕೂ ಅಧಿಕವಾಗಿದ್ದು, ಇದರಿಂದಾಗಿ ಪಟ್ಟಣದ ಜನರಲ್ಲಿ ಭೀತಿ ಹುಟ್ಟಿಸಿದೆ. ದೆಹಲಿ ಮತ್ತು ಬೆಂಗಳೂರಿನ ಎರಡು ಕೋವಿಡ್-19 ಪ್ರಕರಣಗಳು ಇಡೀ ಗಜೇಂದ್ರಗಡವನ್ನೇ ಬೆಚ್ಚಿ ಬೀಳಿಸುವಂತಾಗಿದ್ದು, ಇಬ್ಬರು ಸೋಂಕಿತರು ಇರುವ ಬಡಾವಣೆಗಳನ್ನು ಅಧಿ ಕಾರಿಗಳು 14 ದಿನಗಳವರೆಗೆ ಸೀಲ್‌ಡೌನ್ ಮಾಡಿದ್ದಾರೆ. ಇದಲ್ಲದೇ ಕ್ರಿಮಿನಾಶಕ ದ್ರಾವಣ ಸಿಂಪಡನೆ ಸಹ ಕೈಗೊಂಡಿದ್ದಾರೆ. ಸ್ಥಳೀಯ ಪೂಜಾರ ಪ್ಲಾಟ್‌ನಲ್ಲಿ ಸೋಂಕಿತರ ಮನೆಯಿಂದ 100 ಮೀಟರ್‌ವರೆಗೆ ಬೇಲಿ ಹಾಕುವ ಮೂಲಕ ಅಲ್ಲಿನ ನಿವಾಸಿಗಳು ಮನೆಯಿಂದ ಹೊರ ಬರದಂತೆ ಸೂಚಿಸಿದ್ದಾರೆ.
ತಹಶೀಲ್ದಾರ್ ಭೇಟಿ: ಸೀಲ್‌ಡೌನ್ ಮಾಡಲಾದ ಪ್ರದೇಶಕ್ಕೆ ತಹಶೀಲ್ದಾರ್ ಎ.ಬಿ. ಕಲಘಟಗಿ ಭೇಟಿ ನೀಡಿ ಮಾಹಿತಿ ಪಡೆದರು. ನಿಷೇಧಿತ ಸ್ಥಳದಲ್ಲಿ ಸಾರ್ವಜನಿಕರು ಸಂಚರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದರು. ಸೀಲ್‌ಡೌನ್ ಏರಿಯಾದಲ್ಲಿನ ನಿವಾಸಿಗಳಿಗೆ ಅಗತ್ಯ ವಸ್ತುಗಳು ಬೇಕಾದರೆ ಪುರಸಭೆ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.