ಕಾಲಕಾಲೇಶ್ವರ ವೃತ್ತದಲ್ಲಿ ಯಮಧೂತ ಕುದುರೆ!

Team Udayavani, Dec 9, 2018, 4:36 PM IST

9-december-15.gif

ಗಜೇಂದ್ರಗಡ: ಕೋಟೆ ನಾಡಿನ ಹೃದಯ ಭಾಗದ ವೃತ್ತದಲ್ಲಿ ಅಳವಡಿಸಿದ ಲೋಹದ ಕುದುರೆಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ತಳಮಟ್ಟದಿಂದ 18 ಅಡಿ ಎತ್ತರದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ನಾಲ್ಕು ಲೋಹದ ಕುದುರೆ ವಾಹನ ಸವಾರರಿಗೆ ಯಮಧೂತರಂತೆ ನಿಂತಿವೆ.

ಪಟ್ಟಣದ ಕಾಲಕಾಲೇಶ್ವರ ವೃತ್ತದ ಬಳಿ 2013 ಏ. 15ರಂದು ರಾತ್ರೋರಾತ್ರಿ ತಲೆ ಎತ್ತಿರುವ ಹಿತ್ತಾಳೆ, ತಾಮ್ರ ಮತ್ತು ಲೋಹದಿಂದ ನಿರ್ಮಿಸಿರುವ ನಾಲ್ಕು ಕುದುರೆಗಳ ಸ್ಥಾಪನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಪರಿಣಾಮ ನಿತ್ಯ ವಾಹನ ಸವಾರರು ಕಿರಿ ಕಿರಿ ಅನುಭವಿಸುವಂತಾಗಿದೆ. ಕೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಅವೈಜ್ಞಾನಿಕ ಕುದುರೆ ಅಳವಡಿಕೆ: ಕಾಲಕಾಲೇಶ್ವರ ವೃತ್ತದಲ್ಲಿ ನಾಲ್ಕು ಲೋಹದ ಕುದರೆಗಳಿಂದಾಗಿ ಎದುರು ಬದಿರು ಸಂಚರಿಸುವ ವಾಹನ ಸವಾರರಿಗೆ ಅಪಘಾತಕ್ಕೆ ಎಡೆಮಾಡಿಕೊಡಲಿದೆ. ಈ ಕುದುರೆಗಳನ್ನು ವೃತ್ತದ ತಳ ಭಾಗದಿಂದ 18 ಅಡಿ ಎತ್ತರದಲ್ಲಿ ನಿರ್ಮಿಸಿರುವುದು ಅವೈಜ್ಞಾನಿಕ. ಇದು ಸಂಚಾರಕ್ಕೆ ಅಡೆತಡೆ ಉಂಟು ಮಾಡಿದೆ ಎಂಬುದು ಸಾರ್ವಜನಿಕರ ದೂರಾಗಿದೆ.

ಟ್ರಾಫಿಕ್‌ ಸಿಗ್ನಲ್‌ ಸ್ಥಗಿತ: ಸದಾ ಜನದಟ್ಟಣೆ, ವಾಹನದಟ್ಟನೆ ಇರುವ ಕಾಲಕಾಲೇಶ್ವರ ವೃತ್ತದಲ್ಲಿ ಅಳವಡಿಸಿದ ಟ್ರಾಫಿಕ್‌ ಸಿಗ್ನಲ್‌ ದೀಪಗಳು ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸದೆ ಸ್ಥಗಿತಗೊಂಡಿವೆ. ಜೊತೆಗೆ ವೃತ್ತದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಪೊಲೀಸ್‌ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುವುದಿಲ್ಲ. ಇದರಿಂದ ವಾಹನ ಸವಾರರು ಸಂಚಾರಿ ನಿಯಮ ಗಾಳಿಗೆ ತೂರಿ ಬೇಕಾಬಿಟ್ಟಿ ಚಲಾಯಿಸುತ್ತಾರೆ. ಇದೂ ಕೂಡಾ ಅಪಘಾತ ಹೆಚ್ಚಳಕ್ಕೆ ಕಾರಣವಾಗಿದೆ.

ಅಪಘಾತಕ್ಕೆ ಆಹ್ವಾನಿಸುವ ಕುದುರೆ: ಜೋಡು ರಸ್ತೆಯಿಂದ ಬಸ್‌ ನಿಲ್ದಾಣಕ್ಕೆ ತೆರಳುವ ವಾಹನಗಳಿಗೆ ಎದುರು-ಬದಿರು ಆಗಮಿಸುವ ವಾಹನಗಳು ಗೋಚರಿಸುವುದಿಲ್ಲ. ಇನ್ನು ರೋಣ ರಸ್ತೆಯಿಂದ ಕುಷ್ಠಗಿ ರಸ್ತೆ ಮಾರ್ಗಕ್ಕೆ ತೆರಳುವ ವಾಹನಗಳಿಗೆ ಎದುರಿನ ಸಂಚರಕ್ಕೆ ವೃತ್ತ ಮಧ್ಯಭಾಗದ ಭೂಮಿಯಿಂದ 18 ಅಡಿರಷ್ಟು ಎತ್ತರದಲ್ಲಿ ಬೃಹದಾಕಾರದಲ್ಲಿ ಪೂರ್ವಾಭಿಮುಖವಾಗಿ ನಿಂತಿರುವ ನಾಲ್ಕು ಲೋಹದ ಕುದುರೆಗಳಿಂದ ವಾಹನ ಸವಾರರ ಕಣ್‌ ಕಟ್ಟುವಂತೆಯಾಗಿದೆ. ಇದು ಅಪಘಾತಕ್ಕೆ ಕಾರಣವಾಗುತ್ತಿದೆ.

ಸುಗಮ ಸಂಚಾರದ ದೃಷ್ಟಿಯಿಂದ ಕಾಲಕಾಲೇಶ್ವರ ವೃತ್ತವನ್ನು ಹಿರಿದು ಮಾಡುವುದಲ್ಲದೇ ನಾಲ್ಕು ದಿಕ್ಕಿನಿಂದ ಬರುವ ವಾಹನಗಳನ್ನು ಕಾಣುವಂತೆ ವೃತ್ತವನ್ನು ಪುನರ್‌ ನಿರ್ಮಾಣಕ್ಕೆ ಮುಂದಾಗಬೇಕು. ಇದನ್ನು ಯಾರೂ ಪ್ರತಿಷ್ಠೆಯನ್ನಾಗಿ ಪಡೆಯದೇ ಜನಸಾಮಾನ್ಯರ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು.
 ಎಂ.ಎಸ್‌. ಹಡಪದ,
ಸಿಪಿಐ(ಎಂ) ಮುಖಂಡ

ಜನದಟ್ಟಣೆಯ ಕೇಂದ್ರ ಸ್ಥಳವಾದ ಗಜೇಂದ್ರಗಡದ ಕಾಲಕಾಲೇಶ್ವರ ವೃತ್ತದಲ್ಲಿ ಪಾದಾಚಾರಿಗಳು ರಸ್ತೆ ದಾಟಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಟ್ರಾಫಿಕ್‌ ಸಿಗ್ನಲ್‌ ಆರಂಭಕ್ಕೆ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು.
 ಭೀಮಣ್ಣ ಇಂಗಳೆ, ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ

ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.