ಜಿಸಿಎಲ್‌ ವಾರ್ಡ್‌ ಹಬ್ಬಕ್ಕೆ ಅದ್ದೂರಿ ಚಾಲನೆ

ಬೆಟಗೇರಿ ಭಾಗದಲ್ಲಿ ಹಬ್ಬದ ವಾತಾವರಣ ಸೃಷ್ಠಿ : ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ

Team Udayavani, Aug 21, 2022, 12:43 PM IST

9

ಗದಗ: ಗದಗ ನ್ಪೋರ್ಟ್ಸ್ ಆಂಡ್‌ ಕಲ್ಚರಲ್‌ ಅಕಾಡೆಮಿ ಬೆಟಗೇರಿ ಭಾಗದಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡಿದೆ. ಸ್ಥಳೀಯರು ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಾರ್ಡ್‌ಗಳ ಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಬೆಟಗೇರಿ ರಂಗಪ್ಪಜ್ಜನ ಮಠದ ಆವರಣದಲ್ಲಿ ಗದಗ ನ್ಪೋರ್ಟ್ಸ್ ಆಂಡ್‌ ಕಲ್ಚರಲ್‌ ಅಕಾಡೆಮಿ ವತಿಯಿಂದ ಹಮ್ಮಿಕೊಂಡ “ಗದಗ ಹಬ್ಬ’ದ ಭಾಗವಾಗಿರುವ ವಾರ್ಡ್‌ಗಳ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ಸಂದರ್ಭದಲ್ಲಿ ಬಹುತೇಕ ಜನರು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ದೂರ ಉಳಿದಿ ದ್ದರು. ಈಗ ಬಿಜೆಪಿ ಯುವ ಮುಖಂಡ ಅನಿಲ ಮೆಣಸಿನ ಕಾಯಿ ಅವರು ಗದಗ ಭಾಗದ ಜನತೆಗೆ ಸಾಂಸ್ಕೃತಿಕ ಜಾತ್ರೆಯನ್ನು ಉಣಬಡಿಸುತ್ತಿದ್ದಾರೆ ಎಂದರು.

ಸಂಗೀತ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸುಗಳನ್ನು, ಜಾತಿ-ಜಾತಿಗಳನ್ನು ಬೆಸೆಯುತ್ತವೆ. ವೈಷಮ್ಯ ಮರೆತು ಸುಮಧುರ ಕ್ಷಣಗಳನ್ನು ಮೆಲುಕು ಹಾಕುತ್ತವೆ. ಸಂಜೆಯಾದರೆ ಸಾಕು ಪ್ರೊ ಕಬಡ್ಡಿ ನೋಡಲು ಟಿವಿ ಮುಂದೆ ಕೂಡುತ್ತಿದ್ದೆವು. ಈಗ ಜನರಿಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು, ಉತ್ಸಾಹ ತುಂಬಲು ಅನಿಲ್‌ ಮೆಣಸಿನಕಾಯಿ ಅವರು ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಅನಿಲ ಮೆಣಸಿನಕಾಯಿ ಅವರು ಈ ಮೊದಲು ಆರಂಭಿಸಿದ ಜಿಸಿಎಲ್‌ ಕ್ರಿಕೆಟ್‌ ಪಂದ್ಯಾವಳಿ ಎರಡೂ ಆವೃತ್ತಿಗಳನ್ನು ಯಶಸ್ವಿಯಾಗಿಸಿರುವುದನ್ನು ನಾವು ನೋಡಿದ್ದೇವೆ. 2019ರಲ್ಲಿ ಜಿಸಿಎಲ್‌ ಆರಂಭಗೊಳಿಸುವ ಪ್ರಯತ್ನದಲ್ಲಿದ್ದಾಗ ಕೋವಿಡ್‌ನಿಂದ ನಿಂತು ಹೋಗಿತ್ತು. ಸದ್ಯ ಕೋವಿಡ್‌ ಆತಂಕ ದೂರವಾಗಿದ್ದು, ಬೆಟಗೇರಿಯ ರಂಗಪ್ಪಜ್ಜನ ಕ್ಷೇತ್ರದಿಂದ ಆರಂಭಿಸಿರುವ ಗದಗ ಹಬ್ಬವನ್ನೂ ಯಶಸ್ವಿಗೊಳಿಸುತ್ತಾರೆಂಬ ನಂಬಿಕೆ ಇದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖೇಲೋ ಇಂಡಿಯಾವನ್ನು ವರ್ಷಕ್ಕೆ ಎರಡು ಬಾರಿ ನಡೆಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ, ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ, ಕಾಮನ್‌ವೆಲ್ತ್‌ ಕ್ರೀಡಾಕೂಟ ಸೇರಿದಂತೆ ಭಾರತೀಯ ಕ್ರೀಡಾಪಟುಗಳು ಹೆಚ್ಚು ಹೆಚ್ಚು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸುತ್ತಿದ್ದಾರೆ. ಗದಗ ಭಾಗದಲ್ಲಿ ಅನಿಲ್‌ ಮೆಣಸಿನಕಾಯಿ ಅವರು ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುತ್ತಿರುವುದು ಕ್ರೀಡಾಪಟುಗಳಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಸೋಷಿಯಲ್‌ ಮೀಡಿಯಾ, ವಿಶುವಲ್‌ ಮೀಡಿಯಾ ಮೂಲಕ ಪ್ರತಿಯೊಂದು ಕ್ರೀಡೆಗಳು ಇಂದು ಜನಸಾಮಾನ್ಯರನ್ನು ತಲುಪುತ್ತಿವೆ. ನಮ್ಮ ದೇಶದಲ್ಲಿ ಕ್ರೀಡೆ ಹೆಚ್ಚು ಮುಂಚೂಣಿಗೆ ಬರುತ್ತಿದೆ. ಆಟಗಳಲ್ಲಿ ಸೋಲು ಸಹಜ. ಸೋತವರು ಮುಂದಿನ ಬಾರಿ ಗೆದ್ದೇ ಗೆಲ್ಲುತ್ತಾರೆ. ಯಾಕೆ ಗೆಲುವು ಸಾಧ್ಯವಾಗಿಲ್ಲ ಎಂಬುದನ್ನು ಆಟದಿಂದ ನಾವು ಕಲಿಯುತ್ತೇವೆ ಎಂದು 2018ರ ಅನಿಲ್‌ ಮೆಣಸಿನಕಾಯಿ ಕೂದಲೆಳೆಯ ಅಂತರದ ಸೋಲನ್ನು ನೆನಪಿಸಿಕೊಂಡರು.

ಬಿಜೆಪಿ ಯುವ ಮುಖಂಡ, ಜಿಸಿಎಲ್‌ ರೂವಾರಿ ಅನಿಲ ಮೆಣಸಿನಕಾಯಿ ಮಾತನಾಡಿ, ಗದಗ ಹಬ್ಬ, ವಾರ್ಡ್‌ ಹಬ್ಬಗಳ ಸಂಗೀತ, ಸಾಹಿತ್ಯ ಕ್ರೀಡೆ ಒಳಗೊಂಡಿದೆ. ಗದಗ ನ್ಪೋರ್ಟ್ಸ್ ಆಂಡ್‌ ಕಲ್ಚರಲ್‌ ಅಕಾಡೆಮಿ ಕಳೆದ 2 ಬಾರಿ ಯಶಸ್ವಿಯಾಗಿ ಜಿಸಿಎಲ್‌ ನ್ನು ಯಶಸ್ವಿಯಾಗಿ ನಡೆಸಿಕೊಟ್ಟಿತ್ತು. ಇಂದಿನಿಂದ ಮುಂದಿನ 6 ತಿಂಗಳ ಕಾಲ ಗದಗ-ಬೆಟಗೇರಿ ಭಾಗದಲ್ಲಿ ವಾರ್ಡ್‌ಗಳ ಹಬ್ಬ, ಗ್ರಾಮೀಣ ಭಾಗದಲ್ಲಿ ಹಳ್ಳಿ ಹಬ್ಬ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಜಿಸಿಎಲ್‌ ಸಾಹಿತ್ಯ ರಚನೆಕಾರ ಹೃದಯಶಿವ ಮಾತನಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ್‌, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಸದಸ್ಯೆ ಲಕ್ಷ್ಮೀ ಕಾಕಿ, ವಿಜಯಲಕ್ಷ್ಮೀ ಮಾನ್ವಿ, ಶ್ರೀನಿವಾಸ ಹುಬ್ಬಳ್ಳಿ, ಹನುಮಂತಪ್ಪ ಅಳವಂಡಿ, ರವಿ ದಂಡಿನ, ಉಮೇಶಗೌಡ ಪಾಟೀಲ, ಸಿದ್ದಲಿಂಗೇಶ್ವರ ಮೆಣಸಿನಕಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಮುತ್ತಣ್ಣ ಲಿಂಗನಗೌಡ್ರ, ಜಗನ್ನಾಥಸಾ ಬಾಂಡಗೆ, ಕಿಶನ್‌ ಮೇರವಾಡೆ, ಪ್ರಶಾಂತ ನಾಯ್ಕರ್‌ ಇತರರಿದ್ದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ ಸ್ವಾಗತಿಸಿ, ಸಿದ್ದಲಿಂಗಶಾಸ್ತ್ರಿ ಸಿದ್ದಾಪೂರ ನಿರೂಪಿಸಿ, ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ ವಂದಿಸಿದರು.

ರಂಗಪ್ಪಜ್ಜನ ವಾಣಿ ಕಾರ್ಯರೂಪಕ್ಕೆ ತರಲಿದ್ದಾರೆ ಜನ

ಯಾವುದು ಅಲ್ಲ ಅದು ಹೌದು, ಯಾವುದು ಹೌದು ಅದು ಅಲ್ಲ ಎಂಬ ರಂಗಪ್ಪಜ್ಜನ ಸಿದ್ಧಾಂತದಂತೆ ಗದಗ ವಿಧಾನಸಭಾ ಕ್ಷೇತ್ರದ 2018ರ ಚುನಾವಣೆಯಲ್ಲಿ ಯಾರು ಗೆಲ್ಲಬೇಕಾಗಿತ್ತು ಅವರು ಪರಾಜಯಗೊಂಡಿದ್ದರು. ಮುಂಬರುವ 2023ರ ಚುನಾವಣೆಯಲ್ಲಿ ಮತದಾರರು ಪರಾಜಯಗೊಂಡವರನ್ನು ಗೆಲ್ಲಿಸುವ ಮೂಲಕ ರಂಗಪ್ಪಜ್ಜನ ವಾಣಿಯನ್ನು ಕಾರ್ಯರೂಪಕ್ಕೆ ತರಲಿದ್ದಾರೆ ಎಂದು ಸಚಿವ ಸಿ.ಸಿ. ಪಾಟೀಲ ಅವರು ಪರೋಕ್ಷವಾಗಿ ಅನಿಲ್‌ ಮೆಣಸಿನಕಾಯಿ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.