ಇಷ್ಟಲಿಂಗ ದೀಕ್ಷೆ ಪಡೆದು ಭಗವಂತನನ್ನು ಪೂಜಿಸಿ

ಸಮಾಜದಲ್ಲಿನ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಹಕ್ಕು ಪ್ರಾಪ್ತವಾಗುತ್ತದೆ.

Team Udayavani, Mar 2, 2022, 6:24 PM IST

ಇಷ್ಟಲಿಂಗ ದೀಕ್ಷೆ ಪಡೆದು ಭಗವಂತನನ್ನು ಪೂಜಿಸಿ

ಲಕ್ಷ್ಮೇಶ್ವರ: ಶ್ರೀಗುರುವಿನಿಂದ ಶಿವದೀಕ್ಷಾ ಸಂಪನ್ನರಾಗಿ ಇಷ್ಟಲಿಂಗ ದೀಕ್ಷೆ ಪಡೆದು ಭಗವಂತನನ್ನು ಪೂಜಿಸಿದರೆ ಜನ್ಮ ಸಾರ್ಥಕವಾಗುತ್ತದೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಅವರು ಮಂಗಳವಾರ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಶಿವಲಿಂಗ ಪೂಜೆ, ಜಂಗಮ ವಟುಗಳಿಗೆ ಅಯ್ನಾಚಾರ-ಲಿಂಗದೀಕ್ಷೆ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ ಆಶೀರ್ವಚನ ನೀಡಿದರು. ಮಹಾಶಿವರಾತ್ರಿಯ ಉಪವಾಸ ವೃತಾಚರಣೆಯು ಆತ್ಮ ಸಾಕ್ಷಾತ್ಕಾರದ ಹಬ್ಬವಾಗಿದೆ.

ಅಜ್ಞಾನದ ಅಂಧಕಾರ ಕಳೆದು ಜಗತ್ತಿಗೆ ಸುಜ್ಞಾನ ದಯಪಾಲಿಸಲು ಸಾಕ್ಷಾತ್‌ ಶಿವನೇ ಧರೆಗಿಳಿದ ಪುಣ್ಯದಿನವಾಗಿದೆ. ಶಿವನೆಂದರೆ ಮುಕ್ತಿಪ್ರಾಪ್ತಿ, ಪಾಪನಾಶ, ಮಂಗಳಕರ, ಪರಿಪೂರ್ಣ ಪ್ರಾಪ್ತ ಎಂಬುದಾಗಿದೆ. ಶಿವರಾತ್ರಿಯಂದು ಕೈಗೊಳ್ಳುವ ಉಪವಾಸ ವೃತಾಚರಣೆಯಿಂದ ದೇಹ, ಬುದ್ದಿ, ಮನಸ್ಸು ಪ್ರಸನ್ನ ಚಿತ್ತವಾಗಿಸಿ ಸುಜ್ಞಾನದ ಬೆಳಕಿನತ್ತ ಸಾಗಿಸುತ್ತದೆ. ವೀರಶೈವ ಧರ್ಮದವರು ಅಯ್ನಾಚಾರ ಮತ್ತು ಶಿವದೀಕ್ಷೆ ಸಂಸ್ಕಾರ ಪಡೆಯುವುದು ಪ್ರಮುಖವಾಗಿದೆ. ವೀರಶೈವ ಪರಂಪರೆಯಲ್ಲಿ ದೀಕ್ಷೆ ಪಡೆಯುವುದು ಮಹತ್ವದ್ದಾಗಿದೆ. ಶಿವ ದೀಕ್ಷೆಯಿಂದ ಶಿವಜ್ಞಾನ ಲಭಿಸಿ ಪಾಶಬಂಧನಗಳು ಮರೆಯಾಗುವುವು.

ಲಿಂಗಧಾರಣೆ, ಶಿವಪೂಜೆಯಿಂದ ಆತ್ಮಬಲ ಹೆಚ್ಚುತ್ತದೆ. ಸಮಾಜದಲ್ಲಿನ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಹಕ್ಕು ಪ್ರಾಪ್ತವಾಗುತ್ತದೆ. ವಿಭೂತಿ, ಲಿಂಗ, ಜೋಳಿಗೆ, ದಂಡ ಇವು ಸಂಸ್ಕಾರದ ಸಂಕೇತಗಳಾಗಿವೆ. ವೀರಶೈವ ಲಿಂಗಾಯತ ಸಮಾಜದವರೆಲ್ಲರೂ ನಿತ್ಯ “ಓಂ ನಮಃ ಶಿವಾಯ’ ಶ್ರೇಷ್ಠ ಮಂತ್ರ ಪಠಣ ಮಾಡಬೇಕು. ಲಿಂ. ಗಂಗಾಧರ ಶ್ರೀಗಳು ಮಹಾಶಿವರಾತ್ರಿಗೆ ಮಾಡುತ್ತಿದ್ದ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಲಿಂ. ಗಂಗಾಧರ ಜಗದ್ಗುರುಗಳ ಸಂಕಲ್ಪದಂತೆ ಕ್ಷೇತ್ರದಲ್ಲಿ ತ್ರಿಕೋಟಿಲಿಂಗ ಸ್ಥಾಪನೆ ಕಾರ್ಯ ನಡೆದಿದ್ದು, ಈ ಭಾಗದ ಶಿವಭಕ್ತರಿಗೆ ಕಾಶಿ ಕ್ಷೇತ್ರ ದರ್ಶನವಾದಂತೆ ಎಂದು ಹೇಳಿದರು.

ಲಕ್ಷ್ಮೇಶ್ವರ, ಶಿರಹಟ್ಟಿ, ಕುಂದಗೋಳ, ಶಿಗ್ಗಾಂವಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿದ್ದರು. ಅನೇಕ ಜಂಗಮ ವಟುಗಳಿಗೆ ಲಿಂಗದೀಕ್ಷೆ, ಮಂತ್ರಬೋಧನೆ ಕಾರ್ಯ ನೆರವೇರಿಸಲಾಯಿತು.

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.