ಸ್ವಾವಲಂಬಿ ಜೀವನಕ್ಕಾಗಿ ಶಿಕ್ಷಣ ಪಡೆಯಿರಿ
Team Udayavani, May 20, 2019, 2:19 PM IST
ಮುಳಗುಂದ: ವಿದ್ಯಾರ್ಥಿ ದಿಶೆಯಲ್ಲಿ ಬರುವ ಎಲ್ಲ ಸವಾಲುಗಳನ್ನು ಎದುರಿಸಿ ಸಿಗುವ ಸೌಲತ್ತು ಸದುಪಯೋಗಪಡಿಸಿಕೊಳ್ಳಬೇಕು. ಭವಿಷ್ಯದ ಸ್ವಾವಲಂಬಿ ಜೀವನಕ್ಕಾಗಿ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸಾಧನೆ ಹಾದಿ ಸುಗಮಗೊಳಿಸಬೇಕು ಎಂದು ಹಾವೇರಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎ.ಎಂ. ವಡಗೇರಿ ಹೇಳಿದರು.
ಪಟ್ಟಣದ ಬೀರಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಹಾಲುಮತ (ಕುರುಬ) ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇಂದು ಪ್ರತಿಭಾವಂತ ಮಕ್ಕಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿದ್ದು, ಕೀಳರಿಮೆ ಬದಿಗಿಟ್ಟು ಶ್ರಮವಹಿಸಬೇಕು. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ ಆರ್‌ಟಿಒ ಅಧಿಕಾರಿ ಬಿ.ಡಿ. ಹರ್ತಿ, ಮಕ್ಕಳು ಈಗಿನಿಂದಲೇ ಉನ್ನತ ಕನಸನ್ನು ಕಾಣುವ, ಅದನ್ನು ನನಸಾಗಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲ ಪ್ರಯತ್ನಗಳನ್ನು ಶ್ರದ್ಧೆಯಿಂದ ಕಲಿತುಕೊಳ್ಳಬೇಕಿದೆ ಎಂದರು. ಸಿ.ಬಿ. ಬಡ್ನಿ, ನಾಗರಾಜ ದೇಶಪಾಂಡೆ, ಎಂ.ಡಿ. ಬಟ್ಟೂರ, ಎಸ್.ಎಫ್. ಅಮೋಘಿಮಠ, ಮಹಾಂತೇಶ ನೀಲಗುಂದ, ಬಿ.ವಿ. ಸುಂಕಾಪುರ, ಹೊನ್ನಪ್ಪ ನೀಲಗುಂದ, ಬಸವರಾಜ ನಿಮ್ಮನಾಯ್ಕರ, ರಮೇಶ ಗುಂಜಳ, ಗುರುಪಾದಪ್ಪ ಗೊರವರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…
ಆಕರ್ಷಕ ಪ್ರವಾಸಿ ತಾಣ, ಸುಂದರ ಊರು…ಸೂಡಿ ಪ್ರಾಚೀನ ಪರಂಪರೆಗೆ ಸಾಕ್ಷಿ…
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!