ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ನೀಡಿ: ಶಿಗ್ಲಿ
ಮಕ್ಕಳು ಬಾಲ್ಯದಲ್ಲಿ ಅನುಕರಣೆ ಮೂಲಕವೇ ಎಲ್ಲವನ್ನೂ ಗ್ರಹಿಸಿ ಕಲಿಯುತ್ತಾರೆ.
Team Udayavani, Nov 15, 2021, 4:38 PM IST
ಲಕ್ಷ್ಮೇಶ್ವರ: ಮಕ್ಕಳು ದೇಶದ ಸಂಪತ್ತು ಅವರ ಮನಸ್ಸು ಮಣ್ಣಿನ ಮುದ್ದೆ ಮತ್ತು ಬಿಳೆ ಹಾಳೆಯಂತೆ. ಬಾಲ್ಯದಲ್ಲೇ ಅವರಿಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದು ಸಿಆರ್‌ಪಿ ಎನ್.ಎನ್. ಶಿಗ್ಲಿ ಹೇಳಿದರು.
ಪಟ್ಟಣದ ಪಿಎಸ್‌ಬಿಡಿ ಬಾಲಕಿಯರ ಪ್ರೌಢಶಾಲೆ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಜನಪದ ನೃತ್ಯ ಮತ್ತು ಚಿತ್ರಕಲಾ ಸ್ಪರ್ಧೆ ಹಾಗೂ ಫಿಟ್ ಇಂಡಿಯಾ ಶಾಲಾ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಪ್ರೀತಿ, ವಿಶ್ವಾಸದಿಂದ ಉತ್ತಮವಾದುದನ್ನು ಕಲಿಸುವ ಮೂಲಕ ಮಕ್ಕಳನ್ನೇ ಸಂಪತ್ತನ್ನಾಗಿಸಬೇಕು.
ಮಕ್ಕಳು ಬಾಲ್ಯದಲ್ಲಿ ಅನುಕರಣೆ ಮೂಲಕವೇ ಎಲ್ಲವನ್ನೂ ಗ್ರಹಿಸಿ ಕಲಿಯುತ್ತಾರೆ. ಆದ್ದರಿಂದ ಪಾಲಕರು ಮತ್ತು ಶಿಕ್ಷಕರು ಅತ್ಯಂತ ಎಚ್ಚರಿಕೆಯ ಹೆಜ್ಜೆ ಇಡಬೇಕು. ಹಿರಿಯರ ನಡೆ-ನುಡಿ ಜವಾಹರಲಾಲ್ ನೆಹರೂ ಅವರಂತೆ ಮಕ್ಕಳಿಗೆ ಪ್ರೇರಣೆ ಮತ್ತು ಆದರ್ಶವಾಗಿರಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ರಮೇಶ ನವಲೆ, ಕಾರ್ಯದರ್ಶಿ ಜಯಲಕ್ಷ್ಮೀ ಗಡ್ಡದೇವರಮಠ, ಸುವರ್ಣಬಾಯಿ ಬಹದ್ದೂರ್ ದೇಸಾಯಿ, ಜಯಲಕ್ಷ್ಮೀ ಮಹಾಂತಶೆಟ್ರ, ರೋಹಿಣಿಬಾಯಿ ಬಹದ್ದೂರ್ ದೇಸಾಯಿ, ರೇಣುಕ ಪ್ರಸಾದ, ಜೆ.ಡಿ. ಲಮಾಣಿ, ಶೀಲಾ ತಳವಾರ, ಸಚಿನ್, ಎಸ್.ಎಂ. ಹಾದಿಮನಿ, ಪಿ.ಎಲ್. ಪಾಟೀಲ ಉಪಸ್ಥಿತರಿದ್ದರು. ಗ್ರಾಮೀಣ ಸೊಬಗಿನ ವೇಷಭೂಷಣದಲ್ಲಿ ಮಕ್ಕಳು ಮಾಡಿದ ನೃತ್ಯ ಗಮನ ಸೆಳೆಯಿತು. ಚಿತ್ರಕಲೆಯಲ್ಲಿ ಕವಿತಾ ಮುಳಗುಂದ ಪ್ರಥಮ, ದಾನೇಶ್ವರಿ ಗವಿ ದ್ವಿತೀಯ, ರೇಷ್ಮಾ ಬಾಕಳೆ ತೃತೀಯ, ಜಾನಪದ ನೃತ್ಯದಲ್ಲಿ ಕೀರ್ತಿ ಗುಂಪಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆಯಿತು. ಮೃತ್ಯುಂಜಯ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.