ಕುಲವೃತ್ತಿದಾರರ ಕೈಹಿಡಿದ ಸಹಾಯಧನ

ಜಿಲ್ಲೆಯ ಶೇ.90 ಜನರಿಗೆ ಸಂದಾಯ | ಒಟ್ಟು 2528 ಜನ ಕಾರ್ಮಿಕರಿಗೆ ಲಾಭ

Team Udayavani, Aug 26, 2020, 4:07 PM IST

ಕುಲವೃತ್ತಿದಾರರ ಕೈಹಿಡಿದ ಸಹಾಯಧನ

ಸಾಂದರ್ಭಿಕ ಚಿತ್ರ

ಗದಗ: ಲಾಕ್‌ಡೌನ್‌ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರು, ಅಸಂಘಟಿತ ವಲಯದ ಕ್ಷೌರಿಕ ಹಾಗೂ ಅಗಸರಿಗೆ ಸರ್ಕಾರ ಘೋಷಿಸಿದ್ದ 5 ಸಾವಿರ ರೂ. ನೆರವು ಜಿಲ್ಲೆಯ ಶೇ.90 ಜನರಿಗೆ ಸಂದಾಯವಾಗಿದೆ. ಲಾಕ್‌ಡೌನ್‌ ವೇಳೆ ದುಡಿಮೆ ಇಲ್ಲದೇ ಪರದಾಡುವಂತಾಗಿದ್ದ ಸಾಂಪ್ರದಾಯಿಕ ಕುಲಕಸಬುದಾರರ ಕೈಹಿಡಿದಿದೆ. ಆದರೆ ಇನ್ನುಳಿದ ಅರ್ಜಿದಾರರು ಸರ್ಕಾರದ ನೆರವಿಗಾಗಿ ನಿತ್ಯ ಕಚೇರಿಗೆ ಅಲೆಯುವಂತಾಗಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಚ್‌ ತಿಂಗಳಲ್ಲಿ ಲಾಕ್‌ ಡೌನ್‌ ಘೋಷಿಸಿದ್ದರಿಂದ ಇಡೀ ದೇಶವೇ ಸ್ತಬ್ಧಗೊಂಡಿತ್ತು. ಸುಮಾರು ಮೂರುವರೆ ತಿಂಗಳ ಕಾಲ ಲಾಕ್‌ಡೌನ್‌ ಜಾರಿಯಲ್ಲಿದ್ದಿದ್ದರಿಂದ ನಿತ್ಯ ದುಡಿಮೆಯನ್ನೇ ನಂಬಿದ್ದ ಕಟ್ಟಡ ಕಾರ್ಮಿಕರು, ಕುಲ ಕಸಬುದಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಸರ್ಕಾರದಿಂದ ಉಚಿತ ಅಕ್ಕಿ ಹಾಗೂ ಮತ್ತಿತರೆ ಪಡಿತರ ನೀಡಿದರೂ ತರಕಾರಿ ಮತ್ತಿರೆ ಖರ್ಚು-ವೆಚ್ಚಗಳಿಗೆ ಕೈಯಲ್ಲಿ ಕಾಸಿಲ್ಲದೇ ಪರದಾಡುವಂತಾಗಿತ್ತು. ಹೀಗಾಗಿ ಅನಿವಾರ್ಯವಾಗಿ ಕೆಲವರು ಕ್ಷೌರಿಕ ಅಂಗಡಿ ತೆರೆದು ಪೊಲೀಸರ ಲಾಠಿ ರುಚಿ ಅನುಭವಿಸುವಂತಾಯಿತು.

ಮತ್ತೂಂದೆಡೆ ನೇರವಾಗಿ ಜನರ ಪ್ರಾಥಮಿಕ ಸಂಪರ್ಕಕ್ಕೆ ಬರುವುದರಿಂದ ಕೋವಿಡ್‌ ಹರಡುವ ಭೀತಿಯೂ ಹೆಚ್ಚಿತ್ತು. ರಾಜ್ಯದ ವಿವಿಧೆಡೆ ಕ್ಷೌರಿಕರು ಕೋವಿಡ್‌ ಗೆ ಒಳಗಾಗಿದ್ದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಾಂಪ್ರದಾಯಿಕ ವೃತ್ತಿದಾರರಿಗೆ ತಲಾ 5 ಸಾವಿರ ರೂ. ನೆರವು ಘೋಷಿಸಿದ್ದರು.

ಜಿಲ್ಲೆಯ 25 ಸಾವಿರ ಜನರಿಗೆ ಲಾಭ: ಜಿಲ್ಲೆಯಲ್ಲಿ 28,070 ಕಟ್ಟಡ ಕಾರ್ಮಿಕರಿದ್ದು, ಆ ಪೈಕಿ ಕಾರ್ಮಿಕ ಮಂಡಳಿ ಮೂಲಕ 23,377 ಜನರ ಬ್ಯಾಂಕ್‌ ಖಾತೆಗೆ ನೇರವಾಗಿ ತಲಾ ಐದು ಸಾವಿರ ರೂ. ಜಮಾ ಮಾಡಲಾಗಿದೆ. ಆದರೆ ಇನ್ನುಳಿದ ಸುಮಾರು ಮೂರು ಸಾವಿರ ಜನ ಕಾರ್ಮಿಕರಲ್ಲಿ ಕೆಲವರು ಲಾಕ್‌ಡೌನ್‌ ಬಳಿಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿಸಿಕೊಂಡಿದ್ದರೆ, ಇನ್ನೂ ಕೆಲವರ ಬ್ಯಾಂಕ್‌ ಪಾಸ್‌ಬುಕ್‌ ಅಪಡೇಟ್‌ ಆಗದಿರುವುದು ಮತ್ತಿತರೆ ಕಾರಣದಿಂದಾಗಿ ಸಹಾಯಧನ ಬಂದಿಲ್ಲ. ಅದರೊಂದಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ್ದ 1999 ಕ್ಷೌರಿಕರು, 1240 ಜನ ಅಗಸರ ಪೈಕಿ ಕ್ರಮವಾಗಿ 1477 ಮತ್ತು 1051 ಸೇರಿದಂತೆ ಒಟ್ಟು 2528 ಜನ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಗಳಂತೆ ಒಟ್ಟು 1.26 ಕೋಟಿ ರೂ. ಬ್ಯಾಂಕ್‌ ಖಾತೆಗೆ ಪಾವತಿಸಲಾಗಿದೆ. ಆದರೆ ಇನ್ನೂ ನೂರಾರು ಜನ ಅರ್ಜಿದಾರರಿಗೆ ಸರ್ಕಾರದ ಸಹಾಯಧನ ಬಿಡುಗಡೆಯಾಗಿಲ್ಲ. ಸರ್ಕಾರ ನಿಗದಿ ಪಡಿಸಿದ್ದ ಬಜೆಟ್‌ ಖಾಲಿಯಾಗಿದೆ. ಹೀಗಾಗಿ ಕಾರ್ಮಿಕರು ಸಹಾಯಧನಕ್ಕಾಗಿ ಪ್ರತಿದಿನ ಸ್ಥಳೀಯ ಕಾರ್ಮಿಕ ಇಲಾಖೆ ಕಚೇರಿಗೆ ಅಲೆಯುವಂತಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಕುಲ ಕಸುಬುದಾರರಿಗೆ ನೆರವು ಘೋಷಿಸಿದ್ದು, ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಆದರೆ ರೇಷನ್‌ ಕಾರ್ಡ್‌ವೊಂದಕ್ಕೆ ಒಂದೇ ಅರ್ಜಿ ಪರಿಗಣಿಸಿದ್ದರಿಂದ ಅವಿಭಕ್ತ ಕುಟುಂಬದ ಅನೇಕ ಅರ್ಜಿದಾರರು ಸಹಾಯಧನದಿಂದ ವಂಚಿತರಾಗಿದ್ದಾರೆ. ಈ ನಿಯಮ ಸಡಿಲಿಸಿ ಬಾಕಿ ಉಳಿದಿರುವ ಅರ್ಜಿದಾರರಿಗೆ ತಕ್ಷಣ ಹಣ ಬಿಡುಗಡೆ ಮಾಡಬೇಕು. -ರಾಜು ಗೌಡರ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ

ಈಗಾಗಲೇ ಆನ್‌ ಲೈನ್‌ ಪೋರ್ಟಲ್‌ನಲ್ಲಿ ಸ್ವೀಕೃತಗೊಂಡಿದ್ದ ಶೇ.90 ಅರ್ಜಿದಾರರಿಗೆ ಸಹಾಯಧನ ಜಮಾ ಆಗಿದೆ. ಕೆಲ ಕಟ್ಟಡ ಕಾರ್ಮಿಕ ವಿವರಗಳಲ್ಲಿ ಲೋಪದೋಷಗಳಿದ್ದು, ಅವುಗಳನ್ನು ಸರಿಪಡಿಸಿ ಮತ್ತೆ ಇಲಾಖೆಗೆ ಸಲ್ಲಿಸಲಾಗಿದೆ. -ಸುಧಾ ಗರಗ, ಜಿಲ್ಲಾ ಕಾರ್ಮಿಕ ಅಧಿಕಾರಿ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.