ಜಾರಿಗೆ ಬಾರದ ‘ಮೈತ್ರಿ’ ಸರಕಾರ ಭರವಸೆ

•ಬಜೆಟ್‌ಗೆ ಸೀಮಿತವಾದ ಇಸ್ರೇಲ್ ಕೃಷಿ ಯೋಜನೆ •ಜಿಮ್ಸ್‌ ಕಾಲೇಜು-ವಸತಿ ನಿಲಯಕ್ಕೆ ಅಲ್ಪಸ್ವಲ್ಪ ನೆರವು

Team Udayavani, Jul 3, 2019, 9:57 AM IST

gadaga-tdy-1..

ಗದಗ: ಜಿಮ್ಸ್‌ ಆಸ್ಪತ್ರೆಯ 450 ಹಾಸಿಗೆಗಳ ಬಹುಮಡಿ ಕಟ್ಟಡ ಕಾಮಗಾರಿ ಭರದಿಂದ ಸಾಗಿರುವುದು.

ಗದಗ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರಕ್ಕೆ ಇದೀಗ ವರ್ಷದ ಸಂಭ್ರಮ. ಆದರೆ, ಒಂದು ವರ್ಷದ ಅವಧಿಯಲ್ಲಿ ಎಚ್‌ಡಿಕೆ ಮಂಡಿಸಿರುವ ಎರಡು ಬಜೆಟ್‌ನಲ್ಲೂ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳು ಸಿಕ್ಕಿಲ್ಲ. ಜಿಲ್ಲೆಯ ಎರಡು ಹೊಸ ತಾಲೂಕುಗಳಿಗೆ ಆರಂಭದಲ್ಲಿ ದೊರಕಿದ್ದ 10 ಲಕ್ಷ ರೂ. ನಿರ್ವಹಣಾ ವೆಚ್ಚ ಬಿಟ್ಟರೆ, ಬಿಡಿಗಾಸೂ ಬಿಡುಗಡೆಯಾಗಿಲ್ಲ. ಇದೆಲ್ಲದರ ಮಧ್ಯೆಯೂ ಜಿಮ್ಸ್‌ ಆಸ್ಪತ್ರೆಗೆ ಅಲ್ಪಸ್ವಲ್ಪ ನೆರವು ಸಿಕ್ಕಿದೆ ಎಂಬುದು ಸಮಾಧಾನಕರ ಸಂಗತಿ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಏಕೈಕ ಕಾರಣಕ್ಕೆ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರಕಾರ ಜನ್ಮ ತಳೆಯಿತು. ಸರಕಾರದಲ್ಲಿ ಪ್ರತಿನಿತ್ಯ ಶಾಸಕರ ರಾಜೀನಾಮೆ ಗೊಂದಲ, ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳುವ ಪ್ರಹಸನ ಹಾಗೂ ಅನುದಾನ ಬಿಡುಗಡೆಯಾಗದ ಕಾರಣದಿಂದ ಇಸ್ರೇಲ್ ಕೃಷಿ ಯೋಜನೆಯಂತ ಮಹತ್ವದ ಯೋಜನೆಗಳು ಇನ್ನು ಅನಷ್ಠಾನಕ್ಕೆ ಬಂದಿಲ್ಲ. ಹಳೆ ಯೋಜನೆಗಳ ಮತ್ತು ಮುಂದುವರಿದ ಕಾಮಗಾರಿಗಳಲ್ಲೇ ಜಿಲ್ಲೆಯ ಅಧಿಕಾರಿ ವರ್ಗ ತಲ್ಲೀನವಾಗಿದೆ.

ಘೋಷಣೆಗಳು ಬಜೆಟ್‌ಗೆ ಸೀಮಿತ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಬಜೆಟ್ ಮಂಡಿಸಿದ್ದಾರೆ. ಎರಡೂ ಮುಂಗಡ ಪತ್ರದಲ್ಲಿ 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಇಸ್ರೇಲ್ ಮಾದರಿಯ ಕೃಷಿ ಯೋಜನೆ, ಇಲ್ಲಿನ ಜಿಮ್ಸ್‌ ಆಸ್ಪತ್ರೆಯನ್ನು 450 ಹಾಸಿಗೆಗಳ ಆಸ್ಪತ್ರೆಯನ್ನಾಗಿಸುವುದಾಗಿ ಘೋಷಿಸಿದ್ದರು.

ಅದರೊಂದಿಗೆ ಎರಡನೇ ಬಾರಿಗೆ ಗದಗ, ಹಾವೇರಿ, ಕುಂದಗೋಳ, ಹುಬ್ಬಳ್ಳಿ ಮತ್ತು ಅಣ್ಣಿಗೇರಿಯಲ್ಲಿ ಮೆಣಸು ಮತ್ತು ಹೆಸರುಕಾಳು ಬೆಳೆಗಳ ಗುಣವಿಶ್ಲೇಷಣೆ ಮತ್ತು ಸಂಸ್ಕರಣಾ ಘಟಕ ಸ್ಥಾಪನೆಗೆ 160 ಕೋಟಿ ರೂ. ಹಾಗೂ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲು ಗದಗ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸದಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲು 20 ಕೋಟಿ ರೂ., ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವಾಸ್ತವ್ಯ ಮಾಡಿದ್ದ ಶಿರಹಟ್ಟಿ ತಾಲೂಕಿನ ಸುಗ್ನಳ್ಳಿ ಗ್ರಾಮದ ಆಲದಮ್ಮನ ಕೆರೆ ತುಂಬಿಸುವ ಯೋಜನೆಗೆ 10 ಕೋಟಿ ರೂ. ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಈ ಪೈಕಿ ಜಿಮ್ಸ್‌ ಆಸ್ಪತ್ರೆ ಕಟ್ಟಡ ನಿರ್ಮಾಣ ಹೊರತಾಗಿ, ಇನ್ಯಾವುದೇ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಬಯಲು ಸೀಮೆಯ ರೈತಾಪಿ ಜನರಿಗೆ ಇಸ್ರೇಲ್ ಮಾದರಿಯ ನೀರಾವರಿಯ ಕನಸು ಬಿತ್ತಿರುವ ಕುಮಾರಸ್ವಾಮಿ, ಅದರ ಜಾರಿಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಇಸ್ರೇಲ್ ಕೃಷಿ ಮತ್ತು ತೋಟಗಾರಿಕೆ ಪದ್ಧತಿ ಜಾರಿಗಾಗಿ ಬೆಂಗಳೂರಿನಲ್ಲಿ ಕೇಂದ್ರವೊಂದನ್ನು ತೆರೆಯಲಾಗಿದೆ ಎಂಬ ಮಾಹಿತಿ ಬಿಟ್ಟರೆ ಹೆಚ್ಚೇನೂ ಗೊತ್ತಿಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.

ಗದುಗಿನಲ್ಲಿ ಈರಳ್ಳಿ ಬೆಳೆಗಳ ಗುಣ ವಿಶ್ಲೇಷಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗಾಗಿ ಪ್ರಕಟಿಸಿರುವ ‘ರೈತ ಕಣಜ’ ಯೋಜನೆ ಬಗ್ಗೆ ಅಧಿಕೃತ ಮಾಹಿತಿಯೇ ಇಲ್ಲ ಎನ್ನುತ್ತಾರೆ ಜಿಲ್ಲಾಮಟ್ಟದ ಅಧಿಕಾರಿಗಳು.

ಜಿಮ್ಸ್‌ ಆಸ್ಪತ್ರೆಗೆ ಬರಪೂರ: ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜಿಮ್ಸ್‌ ಆಸ್ಪತ್ರೆಯಲ್ಲಿ 450 ಹಾಸಿಗೆಗಳ ಕಟ್ಟಡ ನಿರ್ಮಾಣಕ್ಕೆ ಸಿದ್ದರಾಮಯ್ಯ ಸರಕಾರದಲ್ಲೇ ಹಸಿರು ನಿಶಾನೆ ತೋರಿಸಲಾಗಿತ್ತು. ಅದನ್ನು ಎಚ್.ಡಿ. ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲೂ ಪುನರುಚ್ಛರಿಸುವ ಮೂಲಕ ಜಿಮ್ಸ್‌ ಅಭಿವೃದ್ಧಿ ವೇಗ ಹೆಚ್ಚಿಸಿದರು. ಒಟ್ಟು 110 ಕೋಟಿ ರೂ. ಅಂದಾಜು ಮೊತ್ತದಲ್ಲಿ ಈವರೆಗೆ 46.28 ಕೋಟಿ ರೂ. ಬಿಡುಗಡೆಯಾಗಿದೆ. ಜಿಮ್ಸ್‌ ಆಸ್ಪತ್ರೆ ಜೊತೆಜೊತೆಗೆ ಆಯುಷ್‌ ಇಲಾಖೆಯಿಂದ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಆಯುಷ್‌ ಆಸ್ಪತ್ರೆ ಕಟ್ಟಡ ಕಾಮಗಾರಿ ಬರದಿಂದ ಸಾಗಿದೆ.

ವಿದ್ಯಾರ್ಥಿ ನಿಲಯದ 2ನೇ ಹಂತದ ಕಾಮಗಾರಿಗೆ ಒಟ್ಟು 22.50 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್‌ ಪ್ರಕ್ರಿಯೆ ಮುಗಿದು ಜು. 1ರಂದು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್‌ ಚಾಲನೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ.

ಈ ವರ್ಷದ ಅನುದಾನವೇ ಬಂದಿಲ್ಲ: ಪ್ರಸಕ್ತ ಸಾಲಿನ ಹಣಕಾಸು ವರ್ಷ ಆರಂಭಗೊಂಡು ಮೂರು ತಿಂಗಳು ಕಳೆದರೂ ಜಿಲ್ಲೆಯ ವಿವಿಧ ಇಲಾಖೆಗಳಿಗೆ ನಾನಾ ಲೆಕ್ಕ ಶೀರ್ಷಿಕೆಯಡಿ ಅನುದಾನವೇ ಬಂದಿಲ್ಲ.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ, ಪ್ರೌಢಶಾಲಾ ನಿರ್ಮಾಣ ಹಾಗೂ ದುರಸ್ತಿಯಡಿ 2018-19ನೇ ಸಾಲಿಗೆ 267.80 ಲಕ್ಷ ರೂ. ಮೊತ್ತದಲ್ಲಿ ಒಟ್ಟು 89 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಬಹುತೇಕ ಪೂರ್ಣಗೊಂಡಿವೆ. ಆದರೆ, 2019-20ನೇ ಸಾಲಿಗೆ ಇನ್ನಷ್ಟೇ ಕ್ರಿಯಾಯೋಜನೆ ಸಿದ್ಧಗೊಳ್ಳಬೇಕಿದೆ.

ಲೋಕೋಪಯೋಗಿ ಇಲಾಖೆಯಿಂದ ಇನ್ನೂ 2018-19ನೇ ಸಾಲಿನ ಕೆಲಸಗಳೇ ಪ್ರಗತಿಯಲ್ಲಿವೆ. ವಿವಿಧ 12 ಕಾಮಗಾರಿಗ ಳಿಗೆ ಒಟ್ಟು 117.9032 ಕೋಟಿ ರೂ. ಗಳಲ್ಲಿ 91.4506 ಕೋಟಿ ರೂ. ಖರ್ಚಾಗಿದ್ದು, 26.4526 ಕೋಟಿ ರೂ. ಬಾಕಿ ಉಳಿದಿದೆ. ಇನ್ನು, ಪ್ರಸಕ್ತ ಸಾಲಿನ ಕಾಮಗಾರಿಗಳ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ.

ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗಕ್ಕೆ ಕಳೆದ ಸಾಲಿನಲ್ಲಿ ವಿವಿಧ ಲೆಕ್ಕ ಶೀರ್ಷಿಕೆಯಡಿ 61 ಕೋಟಿ ರೂ. ಲಭ್ಯವಾಗಿದ್ದು, ಅದರಲ್ಲಿ 52 ಕೋಟಿ ರೂ. ಖರ್ಚಾಗಿದೆ. ನಬಾರ್ಡ್‌ ಮೂಲಕ 4 ಕೋಟಿ ರೂ. ಮೊತ್ತದಲ್ಲಿ ವಿವಿಧ 4 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸಂಪೂರ್ಣ ಮೊತ್ತ ಬಾಕಿಯಿದೆ. ಪ್ರಸಕ್ತ ಸಾಲಿಗೆ ಜಿಲ್ಲೆಯ 213 ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿಗಾಗಿ 56 ಲಕ್ಷ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿಯಮಿತವಾಗಿ ಅನುದಾನ ಲಭ್ಯವಾಗುತ್ತಿದೆ. ಇನ್ನುಳಿದಂತೆ ಗದಗ-ಬೆಟಗೇರಿ ನಗರಸಭೆ ಸೇರಿದಂತೆ ಜಿಲ್ಲೆಯ 9 ಸ್ಥಳೀಯ ಸಂಸ್ಥೆಗಳಿಗೂ ಯಾವುದೇ ವಿಶೇಷ ಅನುದಾನ ಪ್ರಕಟವಾಗಿಲ್ಲ. ಸಮಾಜ ಕಲ್ಯಾಣ, ಸಣ್ಣ ನೀರಾವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಇಲಾಖೆಗಳೂ ಸರಕಾರದ ನಿಯಮಿತ ಕಾರ್ಯಕ್ರಮಗಳಿಗೆ ಸೀಮಿತವಾಗಿವೆ.

ಒಟ್ಟಾರೆ, ರಾಜ್ಯ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಅಭಿವೃದ್ಧಿ ಕಾರ್ಯಗಳು ಚುರುಕು ಪಡೆದಿಲ್ಲ. ಬಜೆಟ್‌ನಲ್ಲಿ ಪ್ರಕಟಿಸಿರುವ ಇಸ್ರೇಲ್ ಮಾದರಿ ಕೃಷಿ ಎಂಬ ಬಹುದೊಡ್ಡ ಕನಸು ಬಿತ್ತಿದ್ದರೂ ಹಣಕಾಸಿನ ನೆರವಿಲ್ಲದೇ ದಾಖಲೆಗೆ ಸೀಮಿತಗೊಂಡಿದೆ.

ಮೂರು ತಿಂಗಳು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಏನ್ನನ್ನು ಮಾಡಲಾಗಲಿಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮುಂದಿನ ವಾರ ಸಂಬಂಧಿಸಿ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಇಸ್ರೇಲ್ ಕೃಷಿ ಸೇರಿದಂತೆ ಬಜೆಟ್ ಘೋಷಣೆ ಕ್ರಮಗಳನ್ನು ಅನುಷ್ಠಾನಕ್ಕೆ ಸೂಚಿಸುತ್ತೇವೆ. ಅದರೊಂದಿಗೆ ಜಿಲ್ಲೆಗೆ ಅಗತ್ಯವಿರುವ ಮತ್ತಿತರರೆ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆಯೂ ಗಮನ ಹರಿಸಲಾಗುತ್ತದೆ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.