ಕೃಷ್ಣಾ ಬಿ ಸ್ಕೀಂ ಅನುದಾನ ಶೀಘ್ರ ನೀಡಿ

ಕೊಪ್ಪಳ ಏತ ನೀರಾವರಿ ಯೋಜನೆ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಕೂಡ್ಲೆಪ್ಪ ಗುಡಿಮನಿ ಆಗ್ರಹ

Team Udayavani, Mar 12, 2021, 8:55 PM IST

Scheem

ಗಜೇಂದ್ರಗಡ: ಕೃಷ್ಣಾ ಬಿ ಸ್ಕೀಂನ 3ನೇ ಹಂತದ ಯೋಜನೆಗೆ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಘೋಷಣೆ ಮಾಡಿದ 5,600 ಕೋಟಿ ರೂ. ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಲ್ಲದೇ, ಮಳೆಗಾಲದೊಳಗೆ ಯೋಜನೆ ವ್ಯಾಪ್ತಿಯ ಕೆರೆ ತುಂಬಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಕೃಷ್ಣಾ ಬಿ ಸ್ಕೀಂ 3ನೇ ಹಂತ ಕೊಪ್ಪಳ ಏತ ನೀರಾವರಿ ಯೋಜನೆ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಕೂಡ್ಲೆಪ್ಪ ಗುಡಿಮನಿ ಆಗ್ರಹಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊಪ್ಪಳ ಏತ ನೀರಾವರಿ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 5600 ಕೋಟಿ ರೂ. ಅನುದಾನ ಮೀಸಲಿರಿಸಿದೆ. ಅಲ್ಲದೇ, ಕೆರೆ ತುಂಬಿಸಲು 500 ಕೋಟಿ ಅನುದಾನ ಘೋಷಣೆ ಮಾಡಿದೆ. ಬಜೆಟ್‌ನಲ್ಲಿ ಜನರ ಓಲೈಕೆ ಮಾಡಲು ಅನುದಾನ ಮೀಸಲಿರಿಸಿರುವುದು ಸ್ವಾತಂತ್ರÂ ನಂತರದಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ ಕೇವಲ ಘೋಷಣೆ ಆಗದೇ ಈ ಅನುದಾನವನ್ನು ಸದ್ಬಳಕೆ ಮಾಡಬೇಕು. ಮಳೆಗಾಲ ಪ್ರಾರಂಭಕ್ಕೂ ಮುನ್ನವೇ ಯೋಜನೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದರು.

ಈ ಭಾಗದ ಕೆರೆಗಳನ್ನು ತುಂಬಿಸುವುದಲ್ಲದೇ, ನೀರಾವರಿ ಯೋಜನೆ ಜಾರಿಗೊಳಿಸಲು ಕ್ಷೇತ್ರದ ಜನಪ್ರತಿನಿಧಿ ಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ ಎಂದು ಒತ್ತಾಯಿಸಿದರು. ಮುಖಂಡ ಎಂ.ಎಸ್‌. ಹಡಪದ ಮಾತನಾಡಿ, ಕೊಪ್ಪಳ ಏತ ನೀರಾವರಿ ಯೋಜನೆ ರಾಷ್ಟ್ರೀಯ ಮಟ್ಟದ ನೀರಾವರಿ ಯೋಜನೆ  ಇದಾಗಿದ್ದು, ಕೊಪ್ಪಳ ಏತ ನೀರಾವರಿಯಲ್ಲಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕು ಒಳಗೊಂಡಿದೆ. ಲಕ್ಷಾಂತರ ಎಕರೆ ಜಮೀನು ನೀರಾವರಿಗೆ ಒಳಪಡುತ್ತದೆ. ಪ್ರಸಕ್ತ ಬಜೆಟ್‌ನಲ್ಲಿ 5,600 ಕೋಟಿ ಅನುದಾನ ಮೀಸಲಿರಿಸಿರುವುದು ಸ್ವಾಗತಾರ್ಹ.

ಬರದ ಪ್ರದೇಶಕ್ಕೆ ಯಾವುದೇ ಜಲಮೂಲಗಳಿಲ್ಲ. ನೀರಿಗಾಗಿ ಹಪಹಪಿಸುತ್ತಿದ್ದೇವೆ. ಆದರೆ ಕೊಪ್ಪಳ ಏತ ನೀರಾವರಿ ಯೋಜನೆ ಈ ಭಾಗದ ಗ್ರಾಮೀಣ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಂಜೀವಿನಿಯಾಗಿದೆ. ದೊಡ್ಡ ಮಟ್ಟದ ಯೋಜನೆಗೆ ಇನ್ನೂ ಹೆಚ್ಚು ಅನುದಾನ ಕಾಯ್ದಿರಿಸಬೇಕಿತ್ತು. ಆ ಮೂಲಕ ಯೋಜನೆ ತ್ವರಿತಗತಿಯ ಕೆಲಸಕ್ಕೆ ಸಹಕಾರಿಯಾಗಿದೆ. ನೆರೆಯ ಆಂಧ್ರಪ್ರದೇಶದಲ್ಲಿ ಕೃಷ್ಣಾ ನೀರು ಪಡೆದುಕೊಳ್ಳಬೇಕೆಂದು ಯೋಜನೆಯ ನೀರು ಬರುವ ಮೊದಲೇ ಬಳಕೆ ಹೇಗೆ ಮಾಡಿಕೊಳ್ಳಬೇಕು ಎಂಬುದನ್ನು ಈಗಾಗಲೇ ರೂಪುರೇಶ ಹಮ್ಮಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಕೃಷ್ಣಾ ನದಿ ನೀರಿನ ಬಳಕೆಯಲ್ಲಿ ವಿಫಲವಾಗಿದೆ ಎಂದು ದೂರಿದರು.

ಈ ವೇಳೆ ಆನಂದ ಕುಲಕರ್ಣಿ, ಶಿವಾನಂದ ಬೆನಹಾಳ, ಕನಕಪ್ಪ ಮಡಿವಾಳರ, ವಿರೇಶ ಬೆನಹಾಳ, ಮೆಹಬೂಬ ಹವಾಲ್ದಾರ, ಗಣೇಶ ರಾಠೊಡ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.