ದೊಡ್ಡಕರೆ ಅಭಿವೃದ್ಧಿಯಿಂದ ಅಂತರ್ಜಲ ವೃದ್ಧಿ
Team Udayavani, Mar 14, 2021, 3:00 PM IST
ರಟ್ಟೀಹಳ್ಳಿ: ರಟ್ಟೀಹಳ್ಳಿ ತಾಲೂಕಿನಲ್ಲಿ ಮಕರಿ ಗ್ರಾಮ ಅಭಿವೃದ್ಧಿ ಹೊಂದುತ್ತಿರುವಪ್ರದೇಶವಾಗಿದೆ. ರಟ್ಟಿàಹಳ್ಳಿಗೆ ಕೇವಲ ಮೂರುಕಿ.ಮೀ. ದೂರದಲ್ಲಿರುವ ಈ ಗ್ರಾಮದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಮಕರಿ ದೊಡ್ಡಕರೆ ಅಭಿವೃದ್ಧಿಯಿಂದ ಅಂತರ್ಜಲ ಹೆಚ್ಚಳವಾಗಿಸುತ್ತಮುತ್ತಲಿನ ಹೊಲಗಳು ಉತ್ತಮ ಫಸಲು ನೀಡಲಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ಶನಿವಾರ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮಕರಿ ದೊಡ್ಡಕೆರೆಯನ್ನು 86 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು,ಕೆರೆಯ ಅಂತಿಮ ಜಾಗೆ ನಿರ್ಮಾಣ, ಹೂಳೆತ್ತುವ ಕಾಮಗಾರಿ ಸೇರಿದಂತೆ ಕೆರೆಯ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ರಟ್ಟೀಹಳ್ಳಿ ಹಿರೇಕೆರೂರು ತಾಲೂಕನ್ನುನೀರಾವರಿ ಕ್ಷೇತ್ರವನ್ನಾಗಿಸಿ ರಾಜ್ಯದಲ್ಲಿ ಮಾದರಿತಾಲೂಕನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿ, ಕೆರೆ ಅಭಿವೃದ್ಧಿಯಿಂದ ಈ ಭಾಗದ ರೈತರಿಗೆ ಮತ್ತುಸಾರ್ವಜನಿಕರಿಗೆ, ಕೃಷಿಗೆ ಹಾಗೂ ಸಾರ್ವಜನಿಕಉಪಯೋಗಗಳಿಗೆ ಅನುಕೂಲವಾಗಲಿದೆ. ನಮ್ಮ ಕೃಷಿ ಮಂತ್ರಿಗಳಿಂದ ಈ ಎರಡು ತಾಲೂಕುಗಳುಸಮಗ್ರ ಅಭಿವೃದ್ಧಿಯಾಗುವುದರಲ್ಲಿ ಯಾವುದೇಸಂದೇಹವಿಲ್ಲ ಎಂದರು.
ಪ್ರಥಮ ದರ್ಜೆ ಗುತ್ತಿಗೆದಾರ ರಾಜ್ಯ ಕೃಷಿಕಸಮಾಜದ ನಿರ್ದೆಶಕ ಆರ್.ಎನ್.ಗಂಗೋಳ ಮಾತನಾಡಿ, ಈ ಕೆರೆ ಅಭಿವೃದ್ಧಿ ಕಾಮಗಾರಿ 9.97 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ.ಮಕರಿ ಗ್ರಾಮದ ಸಮಸ್ತ ಜನತೆಗೆ ಇದರ ಪ್ರಯೋಜನವಾಗಲಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಪ್ರಥಮ ದರ್ಜೆ ಗುತ್ತಿಗೆದಾರ ರಾಜ್ಯ ಕೃಷಿಕ ಸಮಾಜದನಿರ್ದೇಶಕ ಆರ್.ಎನ್.ಗಂಗೋಳ, ಮಕರಿಗ್ರಾಮ ಪಂಚಾಯತಿ ಎಲ್ಲಾ ಸದಸ್ಯರು, ಮುಖಂಡರಾದ ಕೆಎಂಎಫ್ ನಿರ್ದೇಶಕ ಹನುಮಂತಗೌಡ ಭರಮಣ್ಣನವರ,ಶೆದಿಯಪ್ಪ ಹಾರೋಗೊಪ್ಪ, ಮಾಲತೇಶಗಂಗೋಳ, ಜಿಪಂ ಸದಸ್ಯ ಎನ್.ಎಂ.ಈಟೇರ, ಸುಭಾಸ ನಿಂಬೆಗೊಂದಿ, ಸುಮಾ ಗಂಗೋಳ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಣೇಶ ಬಿದರಿ, ದೊಡ್ಡಗೌಡ ಪಾಟೀಲ, ಅಶೋಕ ನಾಗಣ್ಣನವರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.