ಕಾರ್ಯಕ್ರಮಕ್ಕೆ ಆಹ್ವಾನಿಸಿದವರೇ ಉಪಸ್ಥಿತರಿಲ್ಲ: ಕುಮಾರಸ್ವಾಮಿ ಅಸಮಾಧಾನ
Team Udayavani, Aug 23, 2021, 5:03 PM IST
ಗದಗ: ಸ್ಥಳೀಯ ಶಾಸಕರ ಅನುಪಸ್ಥಿತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವುದಿಲ್ಲ. ಜನ ಬಯಸುತ್ತಿದ್ದಾರೆ ಎಂದು ಕಾರ್ಯಕ್ರಮಕ್ಕೆ ಆಹ್ವಾನಿಸಿದವರೇ ಬೇರೆ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಗ್ರಾಮಸ್ಥರ ಅಪೇಕ್ಷೆಯಂತೆ ಸುಗ್ನಳ್ಳಿ ಗ್ರಾಮಕ್ಕೆ ಭೇಟಿ ನೀಡುವುದಾಗಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಶಿರಹಟ್ಟಿ ತಾಲೂಕಿನ ಸುಗ್ನಹಳ್ಳಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿಗೆ 10 ಕೋಟಿ ರೂ. ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಸುಗ್ನಳ್ಳಿಯ ಜನರು ತಮ್ಮನ್ನು ಬಯಸುತ್ತಿದ್ದಾರೆ. ಆಲದಮ್ಮನ ಕೆರೆ ಮತ್ತು ಬನ್ನಿಕೊಪ್ಪ ಕೆರೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸ್ವತಃ ಬಿಜೆಪಿಯ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಆಹ್ವಾನಿಸಿದ್ದರು. ಆದರೆ, ಇವತ್ತು ಆಹ್ವಾನ ನೀಡಿದವರೇ, ಏಕಾಏಕಿ ಕಾರ್ಯಕ್ರಮವನ್ನು ಮುಂದೂಡಿ, ಬೇರೆಲ್ಲೋ ಹೋಗಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನಿಸಿ, ಏಕಾಏಕಿ ಮುಂದೂಡಿದ ಬಗ್ಗೆ ಸ್ಥಳೀಯ ಶಾಸಕರೇ ಉತ್ತರಿಸಬೇಕು. ಇಲ್ಲಿನ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ನಾನು ಸರಕಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಿಲ್ಲ. ಈ ಬಗ್ಗೆ ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಕಣಕುಂಬಿ, ಆಲಮಟ್ಟಿ, ತಲಕಾಡು ಹಾಗೂ ಸಕಲೇಶಪುರದಿಂದ ಜೆಡಿಎಸ್ ಪಾದಯಾತ್ರೆ: ಎಚ್ ಡಿಕೆ
ಸಮ್ಮಿಶ್ರ ಸರಕಾರದಲ್ಲಿ ಶಿರಹಟ್ಟಿ ಅಭಿವೃದ್ಧಿಗೆ 50 ಕೋಟಿ ರೂ. ಕೋರಿ ಸ್ಥಳೀಯ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಅರ್ಜಿ ಸಲ್ಲಿಸಿದ್ದರು. ಅವರು ಯಾವುದೇ ಪಕ್ಷದವರಾಗಿದ್ದರೂ, ಪರವಾಗಿಲ್ಲ ಅಭಿವೃದ್ಧಿಯೇ ಮುಖ್ಯವೆಂಬ ಧೋರಣೆಯಿಂದ ಆಗ 50 ಕೋಟಿ ರೂ. ಮಂಜೂರು ಮಾಡಿದ್ದೆ. 2007ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಸುಗ್ನಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದೆ. ಆಗ ಜನರಿಗೆ ನೀಡಿದ್ದ ಭರವಸೆಯಂತೆ ಅನುದಾನ ಬಿಡುಗಡೆ ಮಾಡಿದ್ದೇನೆ. ಗ್ರಾಮಕ್ಕೆ ನನ್ನ ಭೇಟಿಯಿಂದ ಇದರ ಶ್ರೇಯಸ್ಸು ಜೆಡಿಎಸ್‌ಗೆ ಸಲ್ಲುತ್ತದೆ ಎಂದು ಭಾವಿಸದೆ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಂದುವರಿಸಬೇಕು ಎಂದು ಮನವಿ ಮಾಡಿದರು.
ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಗಳ ದೃಷ್ಟಿಯಿಂದ ರಾಜ್ಯದಲ್ಲಿ ಬೇರು ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಜನತೆ ಕೂಡಾ ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷ ಜೆಡಿಎಸ್‌ನತ್ತ ಒಲವು ತೋರುತ್ತಿದ್ದಾರೆ. ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.