Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Team Udayavani, Apr 23, 2024, 3:42 PM IST
■ ಉದಯವಾಣಿ ಸಮಾಚಾರ
ಗದಗ: ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಸೋಮವಾರ ನಡೆಯಿತು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮೇ 7 ರಂದು ನಡೆಯುವ ಮತದಾನದಂದು ಅರ್ಹರೆಲ್ಲರೂ ಕಡ್ಡಾಯ ಮತದಾನ ಮಾಡಬೇಕು ಎಂದರು.
ಪ್ರತಿಯೊಂದು ಮತ ಸಹ ಅಮೂಲ್ಯವಾಗಿದ್ದು, ಅರ್ಹರು ಮತದಾನ ಮಾಡುವುದರ ಜೊತೆಗೆ ಮತ್ತೂಬ್ಬರನ್ನು ಮತದಾನ ಮಾಡಲು ಪ್ರೇರೇಪಿಸಬೇಕು. ಮತದಾನ ಮಾಡುವುದು 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿ. ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದರು.
ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆ ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ-ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾವಿಧಿ ಬೋಧಿಸಿದರು.
ಜಿಪಂ ಸಿಇಒ ಭರತ್ ಎಸ್. ಮಾತನಾಡಿ, ಅರ್ಹರೆಲ್ಲರೂ ಮತದಾನ ಮಾಡುವುದರ ಜೊತೆಗೆ ಮತ್ತೊಬ್ಬರು ಮತದಾನ ಮಾಡಿರುವುದರ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಪ್ರಜಾಪ್ರಭುತ್ವ ಹಬ್ಬದಲ್ಲಿ ಮತದಾನ
ಮಾಡುವುದು ಅರ್ಹರೆಲ್ಲರ ಹಕ್ಕಾಗಿದೆ. ಮತದಾನ ಹೆಚ್ಚಳಕ್ಕೆ ಸ್ವೀಪ್ ಸಮಿತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಜಿಪಂ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ. ದೇವರಮನಿ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಚುನಾವಣಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.