ಅಬ್ಬರದ ಮಳೆಗೆ ನಲುಗಿದ ಜನತೆ!

Team Udayavani, Sep 25, 2019, 11:12 AM IST

GADAGA-TDY-1

ಗದಗ: ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 124.2 ಮಿ.ಮೀನಷ್ಟು ಮಳೆ ದಾಖಲಾಗಿದೆ. ಸತತ ಮೂರ್‍ನಾಲ್ಕು ಗಂಟೆ ಸುರಿದ ಬಿರುಸಿನ ಮಳೆಯಿಂದಾಗಿ  ಗದಗ-  ಬೆಟಗೇರಿ ಅವಳಿ ನಗರದ ತೆಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಯಿತು.

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಬೆಳಗಿನ ಜಾವ 3 ಗಂಟೆವರೆಗೂ ಬಿರುಸಿನಿಂದ ಮಳೆ ಸುರಿಯಿತು. ಪರಿಣಾಮ ನಗರದ ಬಹುತೇಕ ಚರಂಡಿಗಳು ಉಕ್ಕಿ ಹರಿದವು. ಗಂಗಿಮಡಿ, ಹೊಂಬಳ ನಾಕಾ ಜನತಾ ಕಾಲೋನಿ, ಅಂಬೇಡ್ಕರ್‌ ಬಡಾವಣೆ ಸೇರಿದಂತೆ ಖಾನತೋಟ, ಬೆಟಗೇರಿಯ ಕೊಳಗೇರಿ ಪ್ರದೇಶಗಳಲ್ಲಿ ಮಳೆ ಹಾಗೂ ಚರಂಡಿ ನೀರು ಮನೆಗೆ ನುಗ್ಗಿವೆ. ಮಳೆ ನೀರು ಮನೆಯೊಳಗೆ ಹರಿದು ಬರುತ್ತಿದ್ದಂತೆ ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು, ಕಾಳು, ಕಡಿ ಸೇರಿದಂತೆ ಅಗತ್ಯ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು.

ಈ ನಡುವೆ ಭಾರೀ ಮಳೆಯಿಂದಾಗಿ ಕೊಳಗೇರಿ ಬಡಾವಣೆಯ ರಸ್ತೆಗಳು ನೀರಿನಿಂದ ತುಂಬಿಕೊಂಡಿದ್ದರಿಂದ ಕ್ರಮೇಣ ಮನೆಗಳಿಗೆ ನುಗ್ಗಿವೆ. ಗಂಗಿಮಡಿ ಬಡಾವಣೆಯ ರೈಲ್ವೆ ಗೇಟ್‌ ಭಾಗದಲ್ಲಿನ ಸುಮಾರು 500ಕ್ಕೂ ಹೆಚ್ಚು ಮನೆಗಳಲ್ಲಿ ಒಂದೆರಡು ಅಡಿಯಷ್ಟು ನೀರು ನಿಂತಿದ್ದವು. ಇನ್ನುಳಿದಂತೆ ಬಡಾವಣೆಯ ಬಹುತೇಕ ಮನೆಗಳು ಜಲಾವೃತಗೊಂಡಿದ್ದವು.

ಬೆಳಗಿನ ಜಾವ ಮಳೆ ಕಡಿಮೆಯಾಗುತ್ತಿದ್ದಂತೆ ಮನೆಯಲ್ಲಿ ಆವರಿಸಿದ್ದ ನೀರನ್ನು ಹೊರ ಚೆಲ್ಲಿದರು. ಈ ನಡುವೆ ರಾತ್ರಿ ಇಡೀ ಮಕ್ಕಳು, ಮರಿಯೊಂದಿಗೆ ಜಾಗರಣೆ ಮಾಡಿದರು. ಕೆಲವರು ಸಮೀಪದ ದೇವಸ್ಥಾನಗಳಲ್ಲಿ ಆಶ್ರಯ ಪಡೆಯುವಂತಾಯಿತು ಎನ್ನುತ್ತಾರೆ ಬಡಾವಣೆಯ ನಿವಾಸಿ ಅನ್ವರ್‌ ಶಿರಹಟ್ಟಿ.

ಗಂಗಿಮಡಿಯಲ್ಲಿ ಚರಂಡಿಗಳೇ ಇಲ್ಲ!: ಗಂಗಿಮಡಿ ಬಡಾವಣೆಯಲ್ಲಿ ಮುಖ್ಯ ರಸ್ತೆ ಹೊರತಾಗಿ ಎಲ್ಲೂ ರಸ್ತೆ, ಚರಂಡಿ ಸೌಲಭ್ಯಗಳಿಲ್ಲ. ಬಡಾವಣೆಯ ವಿವಿಧೆಡೆ ವರ್ಷದ ಹಿಂದೆ ಆರಂಭಗೊಂಡಿದ್ದ ಚರಂಡಿ ನಿರ್ಮಾಣ ಇನ್ನೂ ಮುಗಿದಿಲ್ಲ. ಒಳಚರಂಡಿ ಕಾಮಗಾರಿ ಮ್ಯಾನ್‌ ಹೋಲ್‌ಗ‌ಳು ಅಲ್ಲಲ್ಲಿ ಬಾಯೆ¤ರೆದು ಕುಳಿತಿವೆ. ಕೆಲವೆಡೆ ಮಳೆ ನೀರು ನಿಂತಿದ್ದರಿಂದ ರಸ್ತೆ ಎನ್ನುವುದೇ ಗೊತ್ತಾಗುವುದಿಲ್ಲ. ಅಲ್ಲಲ್ಲಿ ಹಾಗೇ ಬಿಟ್ಟಿರುವ ಒಳಚರಂಡಿ ಮ್ಯಾನ್‌ ಹೋಲ್‌ಗ‌ಳಿಂದಾಗಿ ಸ್ವಲ್ಪ ಎಚ್ಚರ ತಪ್ಪಿದರೂ, ಮ್ಯಾನ್‌ಹೋಲ್‌ನಲ್ಲಿ ಬೀಳುವುದು ನಿಶ್ಚಿತ. ಚರಂಡಿಗಳನ್ನು ನಿರ್ಮಿಸುವಂತೆ ನಗರಸಭೆಯ ಹಿಂದಿನ ಸದಸ್ಯರು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ.

ಹೀಗಾಗಿ ಮಳೆ ಬಂದರೆ, ಸಾಕು ಜೀವನವೇ ಸಾಕು ಎನ್ನುವಂತಾಗುತ್ತದೆ. ಇಷ್ಟಾದರೂ, ನಗರಸಭೆಯ ಯಾವುದೇ ಅ ಧಿಕಾರಿ ಇತ್ತ ತಲೆಹಾಕಿಲ್ಲ ಎಂಬುದು ಸ್ಥಳೀಯರ ಗೋಳು.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!

ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.