ಮುಂಡರಗಿ-ನರಗುಂದದಲ್ಲಿ ಹೆಚ್ಚಿನ ನಿಗಾ
Team Udayavani, Apr 23, 2020, 5:01 PM IST
ಮುಂಡರಗಿ: ಪಟ್ಟಣದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ದೃಢಪಟ್ಟಿದೆ ಎಂಬ ವದಂತಿ ಬುಧವಾರ ಸ್ಥಳೀಯರನ್ನು ಬೆಚ್ಚಿ ಬೀಳಿಸಿತ್ತು. ಈ ನಡುವೆ ಪಟ್ಟಣದ ಜಾಗೃತ ವೃತ್ತದ ಲಕ್ಷ್ಮೀಗುಡಿ ಓಣಿ ಸೇರಿದಂತೆ ಮತ್ತಿತರ ಪ್ರದೇಶಗಳನ್ನು ಏಕಾಏಕಿ ನಿರ್ಬಂಧಗೊಳಿಸಿದ್ದು ಪಟ್ಟಣದ ನಿವಾಸಿಗಳ ಆತಂಕಕ್ಕೆ ಕಾರಣವಾಯಿತು. ಬಳಿಕ ಆರೋಗ್ಯ ಇಲಾಖೆ ಪ್ರಕಟಿಸಿದ ವರದಿಯಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂಬುದನ್ನು ಅರಿತು ನಿರಾಳರಾದರು.
ಬುಧವಾರ ತಹಶೀಲ್ದಾರ್ ವೆಂಕಟೇಶ ನಾಯಕ, ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್. ನಾಯಕ ಹಾಗೂ ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಇದರ ಬೆನ್ನಲ್ಲೇ ತಾಲೂಕು ಆಡಳಿತ, ಪುರಸಭೆ ವತಿಯಿಂದ ಜಾಗೃತ ವೃತ್ತ ಲಕ್ಷ್ಮೀಗುಡಿ ಓಣಿ ಪ್ರದೇಶವನ್ನು ಬ್ಯಾರಿಕೇಡ್ ಹಾಕಿ ಕಂಬಳಿ ವೃತ್ತ, ತೋಂಟದಾರ್ಯ ಮಠದ ರಸ್ತೆ, ಡಾ| ಬಿ.ಆರ್. ಅಂಬೇಡ್ಕರ ನಗರ, ಭೀಮರಾವ್ ವೃತ್ತ, ಮಂಜುನಾಥ ನಗರದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಯಿತು.
ಅದರೊಂದಿಗೆ ಪುರಸಭೆ ಸಿಬ್ಬಂದಿ ಈ ಭಾಗದ ಗಲ್ಲಿಗಲ್ಲಿಗಳನ್ನು ಸ್ವತ್ಛಗೊಳಿಸಿ, ಹೈಡ್ರೊಕ್ಲೊರೈಡ್, ಮೆಲಾಥೀಯಾನ್ ಪೌಡರ್, ಮೆಲಾಥೀಯಾನ್ ದ್ರಾವಣ ಸಿಂಪಡಿಸಿದರು. ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ, ಈ ಭಾಗದ ಜನರಿಗೆ ಕೋವಿಡ್ 19 ಹರಡುವಿಕೆ, ರೋಗ ಲಕ್ಷಣಗಳು ಹಾಗೂ ತಡೆಯುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಈ ಭಾಗದ ವ್ಯಕ್ತಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ ಎಂಬ ವದಂತಿ ಹರಿದಾಡಿತು. ಆದರೆ ರಾಜ್ಯ ಸರಕಾರ ಎಂದಿನಂತೆ ಬುಧವಾರ ಪ್ರಕಟಿಸಿದ ವರದಿಗಳಲ್ಲಿ ಜಿಲ್ಲೆಯ ಕೋವಿಡ್ 19 ಪ್ರಕರಣಗಳು ದೃಢಪಟ್ಟ ಮಾಹಿತಿ ಇಲ್ಲದಿರುವುದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟರು.
ಮುಂಡರಗಿ ಮತ್ತು ನರಗುಂದ ತಾಲೂಕಿನಲ್ಲಿ ಬುಧವಾರ ಯಾವುದೇ ಕೋವಿಡ್ 19 ಪ್ರಕರಣಗಳು ಖಚಿತವಾಗಿಲ್ಲ. ಆದರೆ ಆ ಭಾಗದ ಕೆಲವರಲ್ಲಿ ಕೋವಿಡ್ 19 ಲಕ್ಷಣಗಳು ಕಂಡುಬಂದಿದ್ದರಿಂದ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಕೋವಿಡ್ -19 ನಿಯಮಾವಳಿಯಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. – ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.