ಹಿಜಾಬ್‌; ವಿದ್ಯಾರ್ಥಿನಿಯರ ಪ್ರತಿಭಟನೆ

ಮಕ್ಕಳ ಮನವೊಲಿಸಿದರು. ಕೋರ್ಟ್‌ ಆದೇಶದ ಬಗ್ಗೆ ತಿಳಿಹೇಳಿ, ತರಗತಿಗಳಿಗೆ ಕಳುಹಿಸಿದರು

Team Udayavani, Feb 16, 2022, 6:15 PM IST

ಹಿಜಾಬ್‌; ವಿದ್ಯಾರ್ಥಿನಿಯರ ಪ್ರತಿಭಟನೆ

ಗದಗ: ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಹಿಜಾಬ್‌ ಧರಿಸಬಾರದೆಂಬ ಶಿಕ್ಷಕರ ಸೂಚನೆಯಿಂದ ಕೆರಳಿದ ವಿದ್ಯಾರ್ಥಿಗಳು, ಹಿಜಾಬ್‌ಗ ಅವಕಾಶ ನೀಡಬೇಕೆಂದು ಆಗ್ರಹಿಸಿ ಕೆಲಕಾಲ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಗರದ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಬಸ್‌ ನಿಲ್ದಾಣ ಸಮೀಪದ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆಯಿತು.

ಎಂದಿನಂತೆ ಬೆಳಗ್ಗೆ 9:30ಕ್ಕೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸುತ್ತಿದ್ದಂತೆ ಶಿಕ್ಷಕರು, ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಿ, ತರಗತಿಯಲ್ಲಿ ಹಿಜಾಬ್‌ ಧರಿಸದಂತೆ ಸೂಚಿಸಿದರು. ಈ ನಡುವೆ ಶಾಲೆಗೆ ಆಗಮಿಸಿದ ಮಹಿಳೆಯೊಬ್ಬರು ಹಿಜಾಬ್‌ಗ ಅವಕಾಶ ನೀಡಬೇಕೆಂದು ಶಾಲಾ ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದರು.

ನೋಡನೋಡುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಶಾಲಾ ಗೇಟ್‌ ಹೊರಗೆ ಕರೆತಂದು ಪ್ರತಿಭಟನೆ ಆರಂಭಿಸಿದರು. ಅದಕ್ಕೆ ಸುತ್ತಮುತ್ತಲಿನ ಸಮಾಜದ ಪ್ರಮುಖರು ಕೂಡಾ ಪ್ರತಿಭಟನೆಗೆ ಸಾಥ್‌ ನೀಡಿದರು. ಜೊತೆಗೆ ಕೆಲ ವಿದ್ಯಾರ್ಥಿಗಳ ಪಾಲಕರೂ ಸ್ಥಳಕ್ಕೆ ಆಗಮಿಸಿದ್ದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಿತು.

ಈ ವಿದ್ಯಾರ್ಥಿನಿಯರ ಮನವೊಲಿಕೆಗೆ ಮುಂದಾದ ಶಿಕ್ಷಕರಿಗೆ ವಿದ್ಯಾರ್ಥಿನಿಯರು ಹಿಜಾಬ್‌ ಎಂಬುದು ನಮ್ಮ ಗೌರವದ ಪ್ರತಿರೂಪ. ಹಿಜಾಬ್‌ ಬೇಡವೆಂದರೆ, ನಮಗೆ ಶಾಲೆ, ಶಿಕ್ಷಣವೂ ಬೇಡವೆಂದು ಪಟ್ಟು ಹಿಡಿದರು. ಬಳಿಕ ಈ ಕುರಿತು ಸುದ್ದಿ ತಿಳಿಯುತ್ತಿದ್ದಂತೆ ಡಿಡಿಪಿಐ ಜಿ.ಎಂ. ಬಸವಲಿಂಗಪ್ಪ, ತಹಶೀಲ್ದಾರ್‌ ಕಿಶನ್‌ ಕಲಾಲ್‌ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಮನವೊಲಿಸಿದರು. ಕೋರ್ಟ್‌ ಆದೇಶದ ಬಗ್ಗೆ ತಿಳಿಹೇಳಿ, ತರಗತಿಗಳಿಗೆ ಕಳುಹಿಸಿದರು. ಅಧಿಕಾರಿಗಳ
ಮಾತಿಗೆ ಮಣಿದ ವಿದ್ಯಾರ್ಥಿನಿಯರು ಹಿಜಾಬ್‌ ತೆಗೆದು, ತಲೆಗೆ ಶಾಲು ಹಾಕಿಕೊಂಡು ತರಗತಿಗೆ ಹಾಜರಾದರು.

ಕ್ರಮಕ್ಕೆ ಸೂಚನೆ: ಘಟನೆ ಕುರಿತು ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಂ. ಬಸವಲಿಂಗಪ್ಪ, ಶಾಲಾ, ಕಾಲೇಜುಗಳಲ್ಲಿ ಹಿಜಾಬ್‌ ಧರಿಸದಂತೆ ಸರಕಾರದ ಆದೇಶದ ಬಗ್ಗೆ ಮಕ್ಕಳಿಗೆ ತಿಳಿವಳಿಕೆ ನೀಡಿದ್ದೇವೆ. ಯಾರೋ ಓರ್ವ ಮಹಿಳೆ ಬಂದು ಶಾಲೆಯಲ್ಲಿ ಹಿಜಾಬ್‌ಗ ಅವಕಾಶ ನೀಡಬೇಕೆಂದು ಪ್ರಚೋದನೆ ನೀಡಿದ್ದೇ ಕೆಲ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವಾಗಿದೆ. ಆ ಮಹಿಳೆ ಯಾರು ಎಂಬುದನ್ನು ಪತ್ತೆ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಹೇಳಿದರು.

ಅಪರಿಚಿತ ಮಹಿಳೆ ವಿರುದ್ಧ ದೂರು: ಶಾಲೆಯಲ್ಲಿ ಹಿಜಾಬ್‌ ಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಸರಕಾರಿ ಉರ್ದು ಶಾಲೆಯ ಕೆಲ ವಿದ್ಯಾರ್ಥಿನಿಯರಿಗೆ ಪ್ರತಿಭಟನೆ ನಡೆಸಲು ಪ್ರಚೋದಿಸಿದ್ದಾರೆ ಎನ್ನಲಾದ ಅಪರಿಚಿತ ಮಹಿಳೆ ವಿರುದ್ಧ ಶಾಲೆಯ ಮುಖ್ಯ ಗುರುಗಳು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಗದಗ ಶಹರ ಕ್ಷೇತ್ರಶಿಕ್ಷಣಾಧಿಕಾರಿ ರಾಜೇಶ್ವರಿ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.