ರಾಜ್ಯಕ್ಕೆ ಕೇಂದ್ರ ಸರಕಾರ ಸ್ಪಂದನೆ ಏನು?: ಪಾಟೀಲ
Team Udayavani, Nov 2, 2020, 8:34 PM IST
ಗದಗ/ಮುಳಗುಂದ: ರಾಜ್ಯದಲ್ಲಿ ಈ ಬಾರಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹದಿಂದಾಗಿ 250ಜೀವಗಳನ್ನು ಕಳೆದುಕೊಂಡಿದ್ದೇವೆ. 35 ರಿಂದ 430 ಸಾವಿರ ಕೋಟಿ ರೂ. ಮೊತ್ತದ ಬೆಳೆ ಹಾನಿಯಾಗಿದೆ. ಇವತ್ತು ರಾಜ್ಯ ದೊಡ್ಡ ಆಪತ್ತಿಗೆ ಸಿಲುಕಿದ್ದರೂ ಕೇಂದ್ರ ಸರಕಾರ ಸ್ಪಂದನೆ ಏನು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಆದರೆ, ಕೇಂದ್ರ ಸರಕಾರ ನಯಾ ಪೈಸೆಯೂ ನೀಡುತ್ತಿಲ್ಲ. ಇದು ರಾಜ್ಯ ಸರಕಾರದ ಅಶಕ್ತತೆಯನ್ನು ತೋರಿಸುತ್ತದೆ. ರಾಜ್ಯದ ಪ್ರತಿನಿಧಿಗಳು ಕೇಂದ್ರದೊಂದಿಗೆ ಸಂಘರ್ಷ ಮಾಡಿ, ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಒಟ್ಟಾರೆ, ಪ್ರವಾಹ ಮತ್ತು ಅತಿವೃಷ್ಟಿಯಿಂದ ಕನ್ನಡದ ಜನತೆ ಅತ್ಯಂತ ನೋವು ಅನುಭವಿಸುವ ದುರ್ದೈವಿಗಳಾಗಿದ್ದಾರೆ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಕಳೆದ ವರ್ಷ ಪ್ರವಾಹಕ್ಕೆ ಸಿಲುಕಿದ್ದನೆರೆ ಸಂತ್ರಸ್ತ್ರಿಗೆ ಈ ವರೆಗೆ ಸೂರು ಕಲ್ಪಿಸಲಾಗಿಲ್ಲ. ಜನರು ಬೀದಿ ಬದಿಯಲ್ಲೇ ಜೀವನ ಕಳೆಯುಚವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಬಿಡಲ್ಲ: ಕಪ್ಪತ್ತಗುಡ್ಡ ಪರಿಸರದ ಆಸ್ತಿಯಾಗಿ ಉಳಿಯಬೇಕು. ಗಣಿಗಾರಿಕೆ ಮಾಡಬಾರದು ಎಂಬುದೇ ಜಿಲ್ಲೆಯ ಜನರ ಹೋರಾಟದ ಉದ್ದೇಶ. ಇದನ್ನು ಕೆಲ ಶ್ರೀಮಂತರ ಅನುಕೂಲಕ್ಕಾಗಿ ಕಪ್ಪತ್ತಗುಡ್ಡ ವನ್ನು ಗಣಿಗಾರಿಕೆ ನೀಡಬಾರದು. ಗಣಿಗಾರಿಕೆಯಿಂದ ಜನರ ಬದುಕು ಏನಾಗುತ್ತದೆ ಎಂಬುದಕ್ಕೆ ಪಕ್ಕದ ಬಳ್ಳಾರಿ ಜಿಲ್ಲೆಯ ಬಳ್ಳಾರಿ,ಸಂಡೂರ್ ಹಾಗೂ ಜಿಂದಾಲ್ ಪ್ರದೇಶವೇ ಜೀವಂತ ಸಾಕ್ಷಿ. ಹೀಗಾಗಿ ಯಾವತ್ತೂ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಬಿಡುವುದಿಲ್ಲ ಎಂದರು.
ಕೋವಿಡ್ ಮತ್ತು ಪ್ರವಾಹದ ಹೊಡೆತದಿಂದಾಗಿ ದೇಶ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಕೊರೊನಾ ನಿಯಂತ್ರಿಸುವಲ್ಲಿ ಸರಕಾರ ವಿಫಲರಾಗಿದ್ದರಿಂದ ಅನೇಕಸಾವು-ನೋವುಗಳು ಸಂಭವಿಸಿದ್ದರೆ, ಆರ್ಥಿಕ ಕ್ಷೇತ್ರ ಸಂಪೂರ್ಣ ನೆಲಕಚ್ಚಿವೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೊಡ್ಡ ದೊಡ್ಡ ಪ್ಯಾಕ್ ಘೋಷಣೆ ಮಾಡಿದರೂ, ಅವು ಕೇವಲ ಪತ್ರಿಕಾ ಹೇಳಿಕೆಗಳಿಗೆ ಸೀಮಿತವಾಗಿವೆ. ಸರಕಾರದ ನೆರವಿನಿಂದ ಯಾವ ವರ್ಗಕ್ಕೆ ಅನುಕೂಲವಾಗಿದೆ ಎಂಬುದನ್ನು ಜನರ ಮುಂದಿಡಬೇಕು. ಪಿಎಂ ಕೇರ್ ಫಂಡ್, ಸಿಎಂ ಕೇರ್ ಫಂಡ್ ಗಳ ವಿವರಗಳನ್ನು ಗೌಪ್ಯವಾಗಿಡುವುದು ದುರದೃಷ್ಟಕರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.