ಗ್ರಾಮೀಣ ಸಂಸ್ಕೃತಿ ಎತ್ತಿ ಹಿಡಿದ ಮತದಾರ
Team Udayavani, Jan 1, 2021, 6:44 PM IST
ಗದಗ: ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಚುನಾವಣಾ ಆಯೋಗ ಮತ್ತು ಸ್ಥಳೀಯ ಅಧಿಕಾರಿಗಳು ಕೆಲವರು ತಪ್ಪುಗಳನ್ನು ಮಾಡಿದರೂ ಗ್ರಾಮೀಣ ಜನರು ಶಾಂತಿಯುತವಾಗಿನಡೆದುಕೊಳ್ಳುವ ಮೂಲಕ ಪ್ರಜಾಪ್ರಭುತ್ವದಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕಜಿಲ್ಲೆಯ ಜನರು ಗ್ರಾಮೀಣ ಸಂಸ್ಕೃತಿಯನ್ನು ಎತ್ತಿ ಹಿಡಿದಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ನಗರದ ಕಾಟನ್‌ಸೇಲ್ ಸೋಸಾಯಿಟಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ಮತ ಎಣಿಕೆ ವೇಳೆ ಅಲ್ಪಸ್ವಲ್ಪ ಮತಗಳಿಂದ ಸೋತವರು ಮರು ಎಣಿಕೆಗೆಕೋರಿಕೆ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸುವಬದಲಾಗಿ ಸಮಯದ ಅಭಾವದ ನೆಪವೊಡ್ಡಿ ಅಧಿಕಾರಿಗಳು ತಳ್ಳಿಹಾಕಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯ ಜನರು ಶಾಂತಿಯಿಂದ ಅಧಿಕಾರಿಗಳ ನಿರ್ಣಯಗಳಿಗೆ ಗೌರವ ಸೂಚಿಸಿರುವುದು ಅಭಿನಂದನೀಯ ಎಂದರು.
ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ನಾಯಕರ ರಾಜಕೀಯ ಮೇಲಾಟದ ಮಧ್ಯೆಯೂ ಕಾಂಗ್ರೆಸ್‌ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬಂದಿದ್ದಾರೆ. ಗದಗ ತಾಲೂಕಿನ ಒಟ್ಟು 226ರಲ್ಲಿಸದಸ್ಯರಲ್ಲಿ ನೀಲಗುಂದಲ್ಲಿ ನೂತನ ಗ್ರಾಪಂಗೆಆಗ್ರಹಿಸಿ 7 ಸ್ಥಾನಗಳಿಗೆ ನಾಮಪತ್ರ ಸಲ್ಲಿಸದೇ,ಖಾಲಿ ಉಳಿದಿವೆ. ಒಟ್ಟು 219 ಸ್ಥಾನಗಳಲ್ಲಿ ಕಾಂಗ್ರೆಸ್‌ಕಾರ್ಯಕರ್ತರು, ಪಕ್ಷದ ಕಡೆಗೆ ಒಲವಿದ್ದ 161 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಬಿಜೆಪಿಗೆಒಲವಿದ್ದವರು 48 ಅಭ್ಯರ್ಥಿಗಳು ಹಾಗೂ ಇತರೆ10 ಜನ ಆಯ್ಕೆ ಆಗಿದ್ದಾರೆ. ಅದರಲ್ಲೂ ಗದಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 12 ಗ್ರಾಪಂಗಳಲ್ಲಿ 11 ಗ್ರಾಪಂಗಳು ಕಾಂಗ್ರೆಸ್ ಕಾರ್ಯಕರ್ತರೇ ಮೇಲುಗೈ ಸಾಧಿಸಿದ್ದಾರೆ. ಇನ್ನುಳಿದ ಒಂದು ಗ್ರಾಪಂನಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲ ಸಾಧಿಸಿದೆ ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು.
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿದ್ದಾಗ ಗ್ರಾಮಗಳು ನೈಜ ಅಭಿವೃದ್ಧಿಯಾಗಬೇಕು. ಗ್ರಾಮಗಳು ಸ್ವಾವಲಂಬಿಗಳಾಗಬೇಕು. ಗ್ರಾಮಸ್ಥರ ಬದುಕಿನಲ್ಲಿನಗು ಮೂಡಬೇಕು ಎನ್ನುವ ಉದ್ದೇಶದಿಂದಕಾನೂನನ್ನು ಬದಲಾವಣೆ ಮಾಡುವ ಮೂಲಕಕ್ರಾಂತಿಕಾರಿ ಬದಲಾವಣೆಯತ್ತ ಹೆಜ್ಜೆ ಇಡಲಾಗಿತ್ತು. ಕರ್ನಾಟಕ ಗ್ರಾಮ ಸ್ವರಾಜ ಹಾಗೂ ಪಂಚಾಯತ ರಾಜ್ ಕಾನೂನುಗಳ ಮೂಲಕ ಪಂಚಾಯತಿಗಳನ್ನು ಬಲಪಡಿಸಲು ಕಾನೂನು ರೂಪಿಸಲಾಗಿದೆ. ನೂತನ ಪಂಚಾಯತಿ ಸದಸ್ಯರು ಗಾಂಧೀಜಿ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಸಲಹೆ ನೀಡಿದರು.
ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಗಾಂಧಿಧೀಜಿ ಕನಸಿನ ಸ್ವರಾಜ ಅನುಷ್ಠಾನಗೊಳಿಸುವಲ್ಲಿ ರಾಜ್ಯದ ಯೋಜನೆಗಳು ಜನರ ಯೋಜನೆಗಳುಆಗಬೇಕೇ ವಿನಃ ಜನಪ್ರತಿನಿಧಿಗಳ ಯೋಜನೆ ಆಗಬಾರದು ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಪಕ್ಷದ ಪ್ರಮುಖರಾದ ಗುರಣ್ಣ ಬಳಗಾನೂರ, ಪ್ರಭು ಬುರಬುರೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.