ಜಿಪಂ ಸಿಇಒ ಸೇರಿ ಪ್ರಮುಖ ಹುದ್ದೆ ಖಾಲಿ; ಪ್ರಭಾರಿ ಅಧಿಕಾರಿಗಳಿಂದ ಆಡಳಿತ ನಿರ್ವಹಣೆ
Team Udayavani, Feb 13, 2024, 5:35 PM IST
ಉದಯವಾಣಿ ಸಮಾಚಾರ
ಗದಗ: ಜಿಲ್ಲೆಯಲ್ಲಿ ಕಳೆದ 7 ತಿಂಗಳಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಹಣಾಧಿಕಾರಿ ಹುದ್ದೆ ಖಾಲಿಯಿವೆ. ಲೋಕಸಭೆ ಚುನಾವಣೆ ಕೂಡ ಸಮೀಪಿಸುತ್ತಿದ್ದು, ಮತದಾರರ ಪಟ್ಟಿ ಪರಿಷ್ಕರಣೆ, ಮತದಾನ ಜಾಗೃತಿ ಸೇರಿ ಚುನಾವಣೆ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರ ಪ್ರಮುಖ ಕಾರ್ಯವಾಗಿದೆ.
ಜಿಪಂ ಸಿಇಒ ಅವರೇ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುತ್ತಾರೆ. ಆದರೆ ಜಿಪಂ ಸಿಇಒ ಹುದ್ದೆ ಖಾಲಿಯಿರುವುದರಿಂದ ಲೋಕಸಭಾ ಚುನಾವಣಾ ತಯಾರಿಗೂ ಕೊಂಚ ಹಿನ್ನಡೆಯಾದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ಜಿಲ್ಲೆಗೆ ಜಿಪಂ ಸಿಇಒ ನೇಮಕಕ್ಕೆ ಮುಂದಾಗದಿರುವುದು ಶೋಚನೀಯ.
ಗದಗ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಡಾ| ಸುಶೀಲಾ ಬಿ. ಅವರು 2023ರ ಜು.18ರಂದು ಯಾದಗಿರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾದರು. ಅಂದಿನಿಂದ ಈವರೆಗೆ ಗದಗ ಜಿಪಂ ಸಿಇಒ ಹುದ್ದೆ ಖಾಲಿಯಿದ್ದು, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸಿಇಒ ಹುದ್ದೆ ಪ್ರಭಾರ ವಹಿಸಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆ ಅತ್ಯಂತ ಹೆಚ್ಚು ಜವಾಬ್ದಾರಿಯುತವಾಗಿರುತ್ತದೆ.
ಅದರಲ್ಲೂ ಬರ ನಿರ್ವಹಣೆಯಲ್ಲಿ ಜಿಪಂ ಸಿಇಒ ಅವರ ಪಾತ್ರ ಅಪಾರವಾಗಿರುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಧಿಕಾರಿಗಳು ಮತ್ತು ಜಿಪಂ ಸಿಇಒ ಒಟ್ಟಾಗಿ ಬರ ನಿರ್ವಹಣೆ ಕಾಮಗಾರಿಯಲ್ಲಿ ತೊಡಗಿದ್ದರೆ, ಗದಗ ಜಿಲ್ಲೆಯಲ್ಲಿ ಮಾತ್ರ ಜಿಲ್ಲಾ ಧಿಕಾರಿಯೊಬ್ಬರೇ ಎರಡೂ ಹುದ್ದೆಗಳನ್ನು ಒತ್ತಡದಲ್ಲಿ ಕೆಲಸ ನಿರ್ವಹಿಸುವಂತಾಗಿದೆ.
ಗದಗ ಜಿಲ್ಲಾ ಪಂಚಾಯಿತಿಗೆ ಸಿಇಒ ನೇಮಕ ಮಾಡುವಂತೆ ಒತ್ತಾಯಿಸಿ ಅನೇಕ ಸಂಘಟನೆಗಳು, ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ಶುರುವಾಗಿದೆ. ಈ ವಿಷಯ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಗಮನಕ್ಕೂ ಬಂದಿದೆ. ಆದರೂ ಜಿಪಂ ಸಿಇಒ ಹುದ್ದೆ ಭರ್ತಿಗೆ ಕ್ರಮ ಕೈಗೊಂಡಿಲ್ಲ
ಏಳು ತಿಂಗಳಾದರೂ ನೇಮಕವಾಗಿಲ್ಲ..
ಐಎಎಸ್ ಶ್ರೇಣಿಯ ಜಿಪಂ ಸಿಇಒ ಹುದ್ದೆ ಇಷ್ಟೊಂದು ಸುದೀರ್ಘ ಅವಧಿಗೆ ಖಾಲಿ ಇರುವುದು ಇದೇ ಮೊದಲು. ಸಾಮಾನ್ಯವಾಗಿ
ವರ್ಗಾವಣೆಯಾದ ತಿಂಗಳೊಳಗೆ ಸರಕಾರ ಮತ್ತೂಬ್ಬ ಅಧಿಕಾರಿಯನ್ನು ನೇಮಕ ಮಾಡುತ್ತದೆ. ಆದರೆ ಇದೇ ಮೊದಲ ಬಾರಿಗೆ ಏಳು ತಿಂಗಳು ಕಳೆದರೂ ನೇಮಕ ಮಾಡದಿರುವುದು ಅನುಮಾನ ಮೂಡಿಸಿದೆ ಎನ್ನುತ್ತಾರೆ ಸಾರ್ವಜನಿಕರು.
ಜಿಪಂ ಸಿಇಒ ಹುದ್ದೆ ಖಾಲಿ ಇರುವುದರಿಂದ ಬರ ನಿರ್ವಹಣೆ, ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ. ತಕ್ಷಣ
ಸಿಇಒ ಹುದ್ದೆ ಭರ್ತಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಜಿಲ್ಲಾಧಿಕಾರಿಗಳಿಗೆ
ಮನವಿ ಸಲ್ಲಿಸಿದ್ದೇವೆ.
*ಯಲ್ಲಪ್ಪಗೌಡ ಕರಮುಡಿ
ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ಮುಂಡರಗಿ ತಾಲೂಕು ಘಟಕ
ಗದಗ ಜಿಪಂ ಸಿಇಒ ಹುದ್ದೆ ಖಾಲಿ ಇರುವುದು ಗಮನಕ್ಕೆ ಇದೆ. ಆದಷ್ಟು ಬೇಗ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
*ಎಚ್.ಕೆ.ಪಾಟೀಲ, ಕಾನೂನು ಹಾಗೂ
ಪ್ರವಾಸೋದ್ಯಮ ಇಲಾಖೆ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.