ಜಿಲ್ಲಾಸ್ಪತ್ರೆ ಎನ್‌ಎಂಆರ್ ಸ್ಕ್ಯಾನ್ ಕೇಂದ್ರ ಉದ್ಘಾಟನೆ
Team Udayavani, Dec 14, 2019, 1:23 PM IST
ಗದಗ: ಜಿಲ್ಲಾಸ್ಪತ್ರೆಯಲ್ಲಿ 6.70 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ಎನ್‌ಎಂಆರ್ ಸ್ಕ್ಯಾನ್ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಶುಕ್ರವಾರ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಅಗತ್ಯವಾದ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಉದ್ಘಾಟಿಸಿ, ರಾಜ್ಯದಲ್ಲಿ ಮೊಟ್ಟಮೊದಲಿಗೆ ಎನ್‌ಎಂಆರ್ ಸ್ಕ್ಯಾನ್ ಸೌಲಭ್ಯವನ್ನು ಗದುಗಿನಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ| ಪಿ.ಎಸ್. ಭೂಸರೆಡ್ಡಿ ಮಾಹಿತಿ ನೀಡಿದರು.
ಶಾಸಕ ಎಚ್.ಕೆ. ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್. ಪಾಟೀಲ, ಶಾಸಕ ಕಳಕಪ್ಪ ಬಂಡಿ, ಜಿ.ಪಂ. ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚಾರ, ತಾ.ಪಂ. ಸದಸ್ಯೆ ಮುಮ್ತಾಜ್ ಬಿ.ನದಾಫ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿಇಒ ಡಾ| ಆನಂದ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಶ್ರೀನಿವಾಸ ದೇಶಪಾಂಡೆ, ಜಿಲ್ಲಾಸ್ಪತ್ರೆ ಸರ್ಜನ್ ಡಾ| ಬಿ.ಸಿ. ಕರಿಗೌಡರ, ವೈದ್ಯಕೀಯ ಅಧಿಕ್ಷಕ ಡಾ| ಪಲ್ಲೇದ, ಜಿ.ಎಸ್., ಡಾ| ಬಿಜ್ಜಳ, ಮಹಿಳಾ ಮತ್ತು ಅಭಿವೃದ್ಧಿ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ವಿ. ಶಿರೋಳ ಹಾಗೂ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.