ಸುತ್ತಲಿನ ಗ್ರಾಮಗಳಲ್ಲಿ ಹೆಚ್ಚಿದ ಆತಂಕ
Team Udayavani, May 7, 2020, 4:33 PM IST
ರೋಣ: ಪಕ್ಕದ ಬಾಗಲಕೋಟೆ ಜಿಲ್ಲೆಯ ಕೋವಿಡ್- 19 ಪಿ-607 ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಕೃಷ್ಣಾಪುರ ಗ್ರಾಮವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಬಾಗಲಕೋಟೆ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಗ್ರಾಮಸ್ಥರು ಗಡಿಭಾಗದ ಸಂಪರ್ಕ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ, ವಾಹನ ಹಾಗೂ ಸಾರ್ವಜನಿಕ ಸಂಪರ್ಕಕ್ಕೆ ನಿರ್ಬಂಧ ಹೇರಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಪಿ-607 ಜೊತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಇಡೀ ಗ್ರಾಮವನ್ನು ಕಂಟೇನ್ಮೆಂಟ್ ಎಂದು ಘೋಷಿಸಿದೆ. ಅಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್- 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಜಿಲ್ಲೆಯ ಗಡಿ ಭಾಗದ ಹಳ್ಳಿಗರಲ್ಲಿ ಆತಂಕ ಹೆಚ್ಚಿದೆ. ಹೀಗಾಗಿ ಜಿಲ್ಲೆಯ ಗಡಿಯಲ್ಲಿರುವ ಹೊಳೆಹಡಗಲಿ, ಬಿ.ಎಸ್. ಬೇಲೇರಿ ಹಾಗೂ ನಯನಾಪುರ ಗ್ರಾಮಸ್ಥರು ಬಾಗಲಕೋಟೆಗೆ ಸಂಪರ್ಕ ಕಲ್ಪಿಸುವ ಮಾರ್ಗಗಳಿಗೆ ಬೇಲಿ ಹಾಕಿ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.
ಈ ಭಾಗದ ಗ್ರಾಮಗಳಲ್ಲಿ ಕೋವಿಡ್- 19 ಹರಡುವಿಕೆ ತಡೆಯಲು ತಾಲೂಕು ಆಡಳಿತ ಸಕಲ ಕ್ರಮ ಕೈಗೊಳ್ಳುತ್ತಿದೆ. ಈ ಭಾಗದ ಜೊತೆಗೆ ಕೋವಿಡ್- 19 ಹರಡದಂತೆ ತಡೆಯುವ ಕ್ರಮಗಳ ಬಗ್ಗೆ ತಹಶೀಲ್ದಾರ್ ಹಾಗೂ ಪೊಲೀಸ್ ಹಾಗೂ ಆಯಾ ಗ್ರಾಪಂ ಅಧಿಕಾರಿಗಳು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.