ಕೋವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ
ಲಸಿಕೆ ಪಡೆದವರಿಂದ ಸೋಂಕು ದೂರಮೊದಲು ಬೇಡ ಎಂದವರಿಂದಲೇ ಸಾಲು
Team Udayavani, Jun 7, 2021, 8:19 PM IST
ವರದಿ: ವೀರೇಂದ್ರ ನಾಗಲದಿನ್ನಿ
ಗದಗ: ಕೊರೊನಾ ಸೋಂಕು ತಡೆಯುವಲ್ಲಿ ರಾಮಬಾಣವಾಗಿರುವ ಕೋವಿಡ್ ಲಸಿಕೆಗೆ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಲಸಿಕೆ ಪಡೆದ ಲಕ್ಷಾಂತರ ಜನರಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಸೋಂಕು ಕಂಡು ಬಂದಿದೆ.
ಈ ಮೂಲಕ ಕೋವಿಡ್ ಲಸಿಕೆಗಳು ಜನರಿಗೆ ರಕ್ಷಾ ಕವಚ ಎಂಬ ಸಂದೇಶ ಸಾರಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಜನರಲ್ಲಿ ರೋಗ ನಿರೋಧ ಶಕ್ತಿ ವೃದ್ಧಿಸುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ಗಳ ಬಗ್ಗೆ ಹಲವು ಬಗೆಯ ಚರ್ಚೆಗಳ ಬಳಿಕ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚುತ್ತಿದೆ.
ಜನವರಿ 16ರಿಂದ ಜಿಲ್ಲೆಯಲ್ಲಿ ವಿವಿಧ ಹಂತದಲ್ಲಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜೂ.2ರವರೆಗೆ 1.31 ಮೊದಲ ಡೋಸ್ ಮತ್ತು 42,128 ಎರಡನೇ ಡೋಸ್ ಸೇರಿದಂತೆ ಒಟ್ಟು 2.14 ಲಕ್ಷ ಜನರು ಲಸಿಕೆ ಪಡೆದಿದ್ದಾರೆ.
ಬೇಡ ಎಂದವರಿಂದಲೇ ಸಾಲು: ಕೋವಿಡ್ 2ನೇ ಅಲೆ ತೀವ್ರವಾಗುತ್ತಿದ್ದಂತೆ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಈ ನಡುವೆ ಲಸಿಕೆ ಬಗೆಗಿನ ಅಪನಂಬಿಕೆಗಳು ದೂರವಾಗಿದ್ದರಿಂದ ಜನರು ಮುಗಿ ಬೀಳುತ್ತಿದ್ದಾರೆ. ಕಳೆದ ಮೇ-ಜೂನ್ ತಿಂಗಳಲ್ಲಿ ಲಸಿಕಾಕರಣ ಗಣನೀಯ ಪ್ರಮಾಣದಲ್ಲಿ ಹೆಚ್ಚಿದೆ.
ಇತ್ತೀಚೆಗೆ ದಿನಕ್ಕೆ 5-6 ಸಾವಿರ ಡೋಸ್ ಲಸಿಕೆ ಪೂರೈಕೆಯಾದರೂ ಒಂದೆರಡು ದಿನಕ್ಕೆ ಖಾಲಿಯಾಗುತ್ತಿದೆ. ಈ ಹಿಂದೆ ಬೇಡವೆಂದಿದ್ದ ಜನರೂ ಲಸಿಕಾ ಕೇಂದ್ರಗಳ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ ಎಂಬುದು ವಿಶೇಷ.
ಮೂರೇ ದಿನದಲ್ಲಿ 2 ಸಾವಿರ ಜನರಿಗೆ ಲಸಿಕೆ: ಈ ನಡುವೆ ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಘೋಷಿಸಿ, ಆ ನಂತರ ಲಸಿಕೆ ಅಭಾವದಿಂದ ಮುಂದೂಡಿತು. ಈ ನಡುವೆ ಚಾಲ್ತಿಯಲ್ಲಿದ್ದ ಮೂರೇ ದಿನಗಳಲ್ಲಿ ಜಿಲ್ಲೆಯ 2,100 ಜನರು ಲಸಿಕೆ ಪಡೆದಿದ್ದಾರೆ. ಇನ್ನೂ ಅನೇಕರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡು ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ.
ಯಾರ್ಯಾರಿಗೆ ಎಷ್ಟು ಸಲ್ಲಿಕೆ?: ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು 9122, ಮುಂಚೂಣಿ ಕಾರ್ಯಕರ್ತರು 4856 ಜನರು ಲಸಿಕೆ ಪಡೆದು ಶೇ.100 ಗುರಿ ಸಾ ಧಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಿಗೆ ನಿಗಿದಪಡಿಸಿದ್ದ 89975ರಲ್ಲಿ 65456 ಜನ ಮೊದಲ ಡೋಸ್, 22752 ಎರಡನೇ ಡೋಸ್, 45 ವರ್ಷ ಮೇಲ್ಪಟ್ಟವರಿಗೆ ನಿಗದಿಪಡಿಸಿದ್ದ 177129 ಜನರಲ್ಲಿ 66088 ಜನರು ಮೊದಲ ಡೋಸ್ ಮತ್ತು 19376 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಅಲ್ಲದೇ ವಿವಿಧ ಆದ್ಯತೆ ಗುಂಪಿನಲ್ಲಿ ಗುರುತಿಸಿಕೊಂಡ 18 ವರ್ಷ ಮೇಲ್ಪಟ್ಟವರಲ್ಲಿ 11282 ಜನರು ಲಸಿಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.