ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಕಪ್ಪು ಶಿಲೀಂಧ್ರ ಪ್ರಕರಣಗಳು
27 ಪ್ರಕರಣಗಳು ಪತ್ತೆ! 24 ಜನರು ಶಂಕಿತರು! ಮಧುಮೇಹಿಗಳಲ್ಲಿ ಹೆಚ್ಚಿದ ಆತಂಕ
Team Udayavani, May 30, 2021, 6:54 PM IST
ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದಂತೆ ಬ್ಲ್ಯಾಕ್ ಫಂಗಸ್ ತೀವ್ರವಾಗಿದೆ. ಕಪ್ಪು ಶಿಲೀಂಧ್ರ ಪ್ರಕರಣಗಳು ದಿನಗಳೆದಂತೆ ಹೆಚ್ಚುತ್ತಿವೆ. ಅಲ್ಲದೇ, ತಕ್ಷಣಕ್ಕೆ ಅಗತ್ಯ ಔಷಧ ಲಭ್ಯವಾಗುತ್ತಿಲ್ಲ. ಇದರಿಂದ ಸಕ್ಕರೆ ರೋಗ ಸೇರಿದಂತೆ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಆತಂಕದ ಛಾಯೆ ಆವರಿಸುತ್ತಿದೆ.
ಒಟ್ಟು 27 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡು ಬಂದಿವೆ. ಅದರಲ್ಲಿ ಮೂವರಿಗೆ ಬ್ಲ್ಯಾಕ್ ಫಂಗಸ್(ಮ್ಯೂಕರ್ ಮೈಕೋಸಿಸ್) ಒಳಗಾಗಿದೆ. ಇನ್ನುಳಿದ 24 ಜನರಿಗೆ (ಶಂಕಿತರು) ಕಪ್ಪು ಶಿಲೀಂಧ್ರ ಸೋಂಕು ತಗುಲಿರುವ ಸಾಧ್ಯತೆ ಇದೆ. ಬ್ಲ್ಯಾಕ್ ಫಂಗಸ್ ಖಚಿತಪಟ್ಟ ಮೂವರು ಸೇರಿದಂತೆ ಒಟ್ಟು 20 ಜನರು ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 7 ಜನರು ಮನೆಯಲ್ಲೇ ಚಿಕಿತ್ಸೆಗೊಳಗಾಗಿದ್ದಾರೆ. ಅಲ್ಲದೇ ನಾನಾ ಕಾರಣಗಳಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಕಪ್ಪು ಶಿಲೀಂಧ್ರದ ಸಮಸ್ಯೆ ಕಾಡಬಹುದು ಎಂಬುದು ವೈದ್ಯರ ಆತಂಕ. 12 ದಿನದಲ್ಲಿ 27 ಪ್ರಕರಣಗಳು: ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಸಂಶಯಾಸ್ಪದ ಸೇರಿದಂತೆ ಒಟ್ಟು 27 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಮೇ 17ರಂದು ಮೊದಲ ಬಾರಿಗೆ ಇಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಆನಂತರ ಮೇ 20 ರಂದು 3, ಮೇ 21 ರಂದು 3, ಮೇ 22 ರಂದು 4 ಸೇರಿದಂತೆ ಒಟ್ಟು 27 ಜನರಲ್ಲಿ ಸೋಂಕು ಕಂಡು ಬಂದಿದೆ. ಅದರಲ್ಲಿ ಈವರೆಗೆ ಒಟ್ಟು 3 ಪ್ರಕರಣಗಳು ದೃಢಪಟ್ಟಿವೆ. 24 ಪ್ರಕರಣಗಳು ಸಂಶಯಾಸ್ಪದವಾಗಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಹೆಚ್ಚುತ್ತಿದೆ ಕಪ್ಪು ಶಿಲೀಂಧ್ರ ಉಪಟಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಪ್ಪು ಶಿಲೀಂಧ್ರದ ಸೋಂಕಿನ ಉಪಟಳ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಅಗತ್ಯ ಔಷ ಧ ಪೂರೈಕೆಯಾಗುತ್ತಿಲ್ಲ. ಕಪ್ಪು ಶಿಲೀಂಧ್ರಕ್ಕೆ ಬೇಕಿರುವ “ಲೈಫೋಸೋಮಲ್ ಆಂಫೋಟೆರಿಸಿನ್ ಬಿ’ ಔಷಧವನ್ನು ಮೊದಲ 10 ದಿನ ಕಡ್ಡಾಯವಾಗಿ ನೀಡಬೇಕು. ಆದರೆ, “ಲೈಫೋಸೋಮಲ್ ಆಂಫೋಟೆರಿಸಿನ್ ಬಿ” ಅತ್ಯಂತ ದುಬಾರಿಯಾಗಿದ್ದು, ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎಂಬ ದೂರು ಕೇಳಿ ಬಂದಿವೆ.
ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಬ್ಲ್ಯಾಕ್ ಫಂಗಸ್ ಮೂಗಿನಲ್ಲಿ ಉತ್ಪತ್ತಿಯಾಗಿ ಕಣ್ಣು ಮತ್ತು ಮೆದುಳಿಗೆ ಪ್ರವೇಶಿಸುತ್ತದೆ. ಈ ಸೋಂಕು ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದು ಕಂಡು ಬಂದ ಮೂರ್ನಾಲ್ಕು ದಿನಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲೇಬೇಕು. ವಿಳಂಬ ಮಾಡಿದರೆ, ವ್ಯಕ್ತಿ ಬದುಕುಳಿಯುವುದೇ ಕಷ್ಟ. ಈ ಹಿನ್ನೆಲೆಯಲ್ಲಿ ಕಪ್ಪು ಶಿಲೀಂಧ್ರದಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಅಗತ್ಯ ಪ್ರಮಾಣದಲ್ಲಿ ಚುಚ್ಚುಮದ್ದು ಪೂರೈಸಲು ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.