
ಉಸಿರಾಟದಿಂದ ಬಳಲುತ್ತಿದ್ದ ಶಿಶು ರಕ್ಷಣೆ
Team Udayavani, Apr 11, 2019, 4:11 PM IST

ಗದಗ: ಅತೀ ಕಡಿಮೆ 560 ಗ್ರಾಂ ತೂಕದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಶಿಶುವನ್ನು
ರಕ್ಷಿಸುವ ಮೂಲಕ ಇಲ್ಲಿನ ಜಿಮ್ಸ್ ಆಸ್ಪತ್ರೆ ವೈದ್ಯರು ಅಪರೂಪದ ಸಾಧನೆ ಮಾಡಿದ್ದಾರೆ.
ಪೂಜಾ ಪರಶುರಾಮ ಭಂಡಾರಿ ಎಂಬ 6.5 ತಿಂಗಳ ಗರ್ಭಿಣಿಯಲ್ಲಿ ಅವಧಿ ಪೂರ್ವ ಅಧಿಕ ರಕ್ತಸ್ರಾವದಿಂದ ನಗರದ
ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಮಗು ಕನಿಷ್ಠ 560 ಗ್ರಾ.ಪಂ ತೂಕ
ಹೊಂದಿದ್ದರಿಂದ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿತ್ತು. ಆದರೆ, ಹಣಕಾಸಿನ ತೊಂದರೆಯಿಂದಾಗಿ ಇಲ್ಲಿನ ಸರಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದ ಮಗುವಿಗೆ ಆಸ್ಪತ್ರೆಯ ಡಾ.ಶಿವನಗೌಡ ಜೋಳದರಾಶಿ ಅವರ ನೇತೃತ್ವದ ಶಿಶು ತಜ್ಞರ ಸತತ ಮತ್ತು ಕಠಿಣ ಪ್ರಯತ್ನದಿಂದ ಉಸಿರಾಟದ ತೊಂದರೆಗೊಳಗಾಗಿದ್ದ ಮಗುವನ್ನು ಕೃತಕ ಉಸಿರಾಟ, ಔಷಧಿಗಳು ಹಾಗೂ ಕಾಂಗರೂ ಕೇರ್‌ನಂತಹ ವ್ಯವಸ್ಥಗಳಿಂದ ಹಂತ ಹಂತವಾಗಿ ಮಗುವನ್ನು ರಕ್ಷಿಸಿದ್ದಾರೆ.
ಸದ್ಯ ಮಗು ಸ್ವಯಂ ಉಸಿರಾಡುತ್ತಿದ್ದು, ಹೆತ್ತವರು ಹಾಗೂ ಆಸ್ಪತ್ರೆಯ ವೈದ್ಯರಲ್ಲಿ ಸಂತಸ ಮೂಡಿಸಿದೆ. 6.5 ತಿಂಗಳಲ್ಲಿ ಜನಿಸುವ ಮಕ್ಕಳು ಬದುಕುಳಿಯುವುದು ವಿರಳ. ಅದರಲ್ಲೂ ಅತೀ ಕಡಿಮೆ ತೂಕದ ಮಗುವನ್ನು ರಕ್ಷಿಸುವಲ್ಲಿ ಆಸ್ಪತ್ರೆಯ ವೈದ್ಯರ ತಂಡದ ಪರಿಶ್ರಮವನ್ನು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರಡ್ಡಿ, ಮುಖ್ಯ ಆಡಳಿತಾಧಿಕಾರಿ ಪಿ.ಎಸ್. ಮಂಜುನಾಥ, ವೈದ್ಯಕೀಯ ಅಧೀಕ್ಷಕ ಡಾ.ಜಿ.ಎಸ್.ಪಲ್ಲೇದ ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.