ಬೆಂಗಳೂರು-ದೆಹಲಿಯಿಂದ ಬಂದ ಇಬ್ಬರಿಗೆ ಸೋಂಕು
Team Udayavani, Jul 11, 2020, 4:48 PM IST
ಗಜೇಂದ್ರಗಡ: ಕೋಟೆ ನಾಡಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸ್ಫೋಟಗೊಳ್ಳುತ್ತಿದ್ದು, ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗದಗ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಸೋಂಕಿತನನ್ನು ಶುಕ್ರವಾರ ಕರೆದೊಯ್ಯಲಾಯಿತು.
ಪಟ್ಟಣದ ಪೂಜಾರ ಪ್ಲಾಟ್ ನಿವಾಸಿಯಾಗಿರುವ 52 ವರ್ಷದ ವ್ಯಕ್ತಿ ಜೂ. 23ರಂದು ಬೆಂಗಳೂರಿನಿಂದ ಸ್ವಂತಕಾರಿನಲ್ಲಿ ಪಟ್ಟಣಕ್ಕೆ ಆಗಮಿಸಿದ್ದಾನೆ. ಹೋಮ್ ಕ್ವಾರಂಟೈನ್ ಆಗಿದ್ದ ಸೋಂಕಿತನಿಗೆ ಪ್ರಾರಂಭದಲ್ಲಿ ನೆಗಡಿ, ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಚಿಕಿತ್ಸೆಗೆಂದು ಪಟ್ಟಣದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗದ ಹಿನ್ನೆಲೆಯಲ್ಲಿ ಜು. 7ರಂದು ಗದಗನ ಜಿಮ್ಸ್‌ನಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಸ್ಥಳೀಯ ವ್ಯಕ್ತಿಗೆ ಕೋವಿಡ್ 19 ಸೋಂಕು ಇರುವುದು ಶುಕ್ರವಾರ ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಮಿಸಿ, ಸೋಂಕಿತನನ್ನು ಗದಗ ಕೋವಿಡ್ 19 ಚಿಕಿತ್ಸಾ ಕೇಂದ್ರಕ್ಕೆ ಆ್ಯಂಬೂಲೆನ್ಸ್ ಮೂಲಕ ರವಾನಿಸ ಲಾಯಿತು. ಸೋಂಕಿತನ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದ ಅಧಿಕಾರಿಗಳು, ಪ್ರಾಥಮಿಕ ಸಂಪರ್ಕದಲ್ಲಿದ್ದ 10 ಜನ ಕುಟುಂಬಸ್ಥರನ್ನು ರೋಣದಲ್ಲಿನ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲಾಯಿತು.
30ಕ್ಕೂ ಅಧಿಕ ದ್ವಿತೀಯ ಸಂಪರ್ಕಿತರನ್ನು ಹೋಂ ಕ್ವಾರಂಟೈನ್‌ಗೆ ಸೂಚಿಸಿದ್ದಾರೆ. ಸೋಂಕಿತ ಖಾಸಗಿ ಆಸ್ಪತ್ರೆಗೆ ಭೇಟಿ: ಕೋವಿಡ್ ಸೋಂಕಿತ ವ್ಯಕ್ತಿ ಕಳೆದೊಂದು ವಾರದಿಂದ ಪಟ್ಟಣದ ಮೂರು ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದು, ಇದೀಗ ಪಟ್ಟಣದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಮತ್ತು ಪುರಸಭೆ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳನ್ನು 24 ಗಂಟೆಗಳ ಕಾಲ ಸ್ಯಾನಿಟೈಸೇಷನ್‌ಗೆ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.