Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
ಸಮಾಜಕ್ಕೆ ಕೇವಲ ಒಂದೇ ಟಿಕೆಟ್ ನೀಡಿದ್ದು, ಅನ್ಯಾಯ ಅಲ್ಲವೇ..?
Team Udayavani, Apr 13, 2024, 7:13 PM IST
ಗದಗ: ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂದು ವಚನಾನಂದ ಶ್ರೀಗಳು ಹೇಳಿದರು.
ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜಕ್ಕೆ ಕೇವಲ ಒಂದೇ ಟಿಕೆಟ್ ನೀಡಿದ್ದು, ಅನ್ಯಾಯ ಅಲ್ಲವೇ..? ಪಂಚಮಸಾಲಿ ಸಮಾಜವನ್ನು ರಾಜಕೀಯ ದಾಳವನ್ನಾಗಿ ಉಪಯೋಗಿಸಿಕೊಂಡಿದ್ದು, ಸಮಾಜದ ಜನಪ್ರತಿನಿಧಿಗಳಿಗೆ ಯಾವುದೇ ಪ್ರಮುಖ ಹುದ್ದೆಗಳನ್ನು ನೀಡದೆ ಅನ್ಯಾಯ ಮಾಡಿದೆ. ಈ ಅನ್ಯಾಯವನ್ನು ಇನ್ನೆಷ್ಟು ದಿನಗಳ ಕಾಲ ಸಹಿಸಿಕೊಳ್ಳುವುದು ಎಂದು ಪ್ರಶ್ನಿಸಿದರು.
ಎಲ್ಲ ಚುನಾವಣೆಗಳಿಗೂ ಪಂಚಮಸಾಲಿ ಸಮಾಜವನ್ನು ಬಳಸಿಕೊಳ್ಳುತ್ತಾರೆ. ಮುಗಿದ ಬಳಿಕ ಪಕ್ಕಕ್ಕೆ ಸರಿಸುತ್ತಾರೆ. ಈ ಹಿಂದಿನ ರಾಜ್ಯ ಸರ್ಕಾರ 2ಎ ಮೀಸಲಾತಿ ಘೋಷಣೆ ಮಾಡಿದರೂ ಅದು ಕೋರ್ಟ್ ಅಂಗಳ ತಲುಪಿದೆ. ಇದಕ್ಕಾಗಿ ಕಾನೂನು ಹೋರಾಟ ಮಾಡುತ್ತಿದ್ದೇವೆ. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಪಂಚಮಸಾಲಿ ಸಮಾಜ ಸೇರ್ಪಡೆಗೊಂಡರೆ ಮಾತ್ರ ಸಮಾಜದ ಜನರು ಮುಂದುವರಿಯಲು ಸಾಧ್ಯ. ಸಮಾಜಕ್ಕೆ ಒಬಿಸಿ ನಿಲುವನ್ನು ಗಟ್ಟಿಯಾಗಿ ಪ್ರತಿಪಾದನೆ ಮಾಡುವವರನ್ನು ಮಾತ್ರ ಈ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.
ಉತ್ತರ ಭಾರತದಲ್ಲಿ ಸನ್ಯಾಸಿಗಳು, ಸಾಧು ಸಂತರು ರಾಜಕೀಯ ಶುದ್ಧೀಕರಣಕ್ಕಾಗಿ ರಾಜಕೀಯಕ್ಕೆ ಬರುವುದರಲ್ಲಿ ತಪ್ಪಿಲ್ಲ.
ಅದೇ ರೀತಿ, ದಕ್ಷಿಣದಲ್ಲಿ ದಿಂಗಾಲೇಶ್ವರ ಶ್ರೀಗಳು ರಾಜಕೀಯ ಶುದ್ಧೀಕರಣಕ್ಕೆ ಬಂದಿದ್ದು, ನಾವು ಸ್ವಾಗತಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.