ಖಾತ್ರಿ ಕೆಲಸದ ಕೂಲಿ ನೀಡುವಂತೆ ಒತ್ತಾಯ


Team Udayavani, Jun 25, 2019, 8:15 AM IST

gadaga-tdy-2..

ರೋಣ: ಉದ್ಯೋಗ ಖಾತ್ರಿ ಕೂಲಿ ನೀಡುವಂತೆ ಆಗ್ರಹಿಸಿ ತಾಲೂಕಿನ ಅಸೂಟಿ ಹಾಗೂ ಕರಮುಡಿ ಗ್ರಾಮಸ್ಥರು ತಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ರೋಣ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಿದ ಕೆಲಸಕ್ಕೆ 15 ದಿನ ಕಳೆದರೂ ಇಲ್ಲಿಯವರೆಗೆ ಕೂಲಿ ನೀಡಿಲ್ಲ ಎಂದು ಆರೋಪಿಸಿ ತಾಲೂಕಿನ ಅಸೂಟಿ ಹಾಗೂ ಕರಮುಡಿ ಗ್ರಾಮಸ್ಥರು ಸೋಮವಾರ ತಾಪಾಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ರತ್ನವ್ವ ತಳವಾರ ಮಾತನಾಡಿ, ಕಳೆದ ಮೂರು ವರ್ಷದಿಂದ ಗ್ರಾಮದಲ್ಲಿ ಸಕಾಲಕ್ಕೆ ಮಳೆ ಬಾರದ ಹಿನ್ನೆಲ್ಲೆಯಲ್ಲಿ ಬೆಳೆ ಇಲ್ಲದೆ ತುತ್ತು ಕೂಳಿಗಾಗಿ ಪರಿತಪಿಸುವಂತಾಗಿದೆ. ಸರ್ಕಾರದಿಂದ ನೀಡುವ ಉದ್ಯೋಗ ಖಾತ್ರಿ ಯೋಜನೆಯಲ್ಲಾದರೂ ಕೆಲಸ ಮಾಡಿ ಜೀವನ ಸಾಗಿಸೋಣ ಎಂದರೆ ಮಾಡಿದ ಕೂಲಿಗೆ ಹಣ ಸಂದಾಯ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಎರಡು ತಿಂಗಳು ದುಡಿದರೆ ಕೇವಲ ಒಂದು ವಾರ ಎರಡು ವಾರಗಳ ಕೂಲಿ ಹಣವನ್ನು ಮಾತ್ರ ನೀಡುತ್ತಾರೆ. ಉಳಿದ ಕೂಲಿ ಹಣ ಸಂದಾಯ ಮಾಡುವಂತೆ ಕೇಳಿದರೆ ಎನ್‌ಎಂಆರ್‌ ಹಾಕಬೇಕು, ಎಂಐಎಸ್‌ ಮಾಡಬೇಕು ಎಂದು ನಾನಾ ಕಾರಣಗಳನ್ನು ಹೇಳಿ ಸತಾಯಿಸುತ್ತಿದ್ದಾರೆ. ನಮ್ಮ ಜೀವನ ನಿರ್ವಹಣೆಗೆ ಏನು ಮಾಡಬೇಕು ಎಂದು ತಮ್ಮ ಅಸಾಯಕತೆ ತೋಡಿಕೊಂಡರು.

ಬಸಪ್ಪ ಚಲವಾದಿ ಮಾತನಾಡಿ, ಕರಮುಡಿ ಗ್ರಾಮದ ಜಲಾಯನ ಆಧಾರದ ಮೇಲೆ ಬದುವು ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡಿದ್ದೇವೆ. 14 ದಿನಗಳು ದುಡಿದರೂ ಕೇವಲ ಮೂರು ದಿನ ಕೆಲಸ ಮಾಡಿದ್ದಿರಿ ಎಂದು ಹೇಳುತ್ತಾರೆ. ಉಳಿದ ದಿನಗಳಿಗೆ ಎನ್‌ಎಂಆರ್‌ ಹಾಕಬೇಕು, ಹಾಕುತ್ತೇವೆ, ಮೇಲಾಧಿಕಾರಿಗಳು ಹೆಬ್ಬೆಟ್ಟು ಗುರುತು ನೀಡಿಲ್ಲ ಎಂಬ ಕಾರಣ ಹೇಳಿ ನಮ್ಮನ್ನು ಸತಾಯಿಸುತ್ತಿದ್ದಾರೆ. ಬರಗಾಲ ಇರುವುದರಿಂದ ನಮಗೆ ಉದ್ಯೋಗ ಖಾತ್ರಿ ಯೋಜನೆಯ ಕೆಲಸವೇ ಜೀವನಕ್ಕೆ ಆಧಾರವಾಗಿದೆ. ಆದರೆ ಅಧಿಕಾರಿಗಳು ಮಾಡಿದ ಕೆಲಸಕ್ಕೆ ಸಮರ್ಪಕ ಕೂಲಿ ನೀಡಲು ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಅಧಿಕಾರಿ ಭರವಸೆ ನಂತರ ರೈತರು ಪ್ರತಿಭಟನೆ ಹಿಂಪಡೆದರು.

ಶಿವಪ್ಪ ಚಲುವಾದಿ, ಯಲ್ಲಮ್ಮ ತಳವಾರ, ಶಂಕ್ರಪ್ಪ ತಳವಾರ, ಮೈಲಾರ ಚಲುವಾದಿ, ಶಿವನಗೌಡ ಕೆಂಚಪ್ಪಗೌಡ್ರ, ಸಂಗಪ್ಪ ಚಲುವಾದಿ, ವೀರಸಂಗಯ್ಯ ಹಿರೇಮಠ, ಅಶೋಕ ಚಲುವಾದಿ, ಹನುಮಪ್ಪ ನಿಂಬಣ್ಣವರ, ಯಲ್ಲಪ್ಪ ಜಾಲಿಹಾಳ, ಹನುಮಂತಪ್ಪ ಮೊರಬದ, ಶರಣಪ್ಪಗೌಡ ತಿಮ್ಮಪ್ಪಗೌಡ್ರ, ಶಿವನಪ್ಪ ಕೊಳ್ಳೂರ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.