ಜಿಲ್ಲಾವಾರು ಪಿಯು ಮೌಲ್ಯಮಾಪನಕ್ಕೆ ಒತ್ತಾಯ
Team Udayavani, May 26, 2020, 10:36 AM IST
ಗದಗ: ರಾಜ್ಯಾದ್ಯಂತ ಮೇ 31ರ ವರೆಗೆ ಲಾಕ್‌ಡೌನ್ ಮುಂದುವರಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿರುವ ಅವರು, ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ನಗರ ಪ್ರದೇಶದಲ್ಲಿ ವಸತಿಗಾಗಿ ಲಾಡ್ಜಿಂಗ್ ಮತ್ತು ಹೋಟೆಲ್‌ಗಳು ಪ್ರಾರಂಭವಾಗಿಲ್ಲ. ಹೀಗಾಗಿ ಬೇರೆ ಜಿಲ್ಲೆಯ ಉಪನ್ಯಾಸಕರು ನಿಗದಿತ ಮೌಲ್ಯಮಾಪನ ಕೇಂದ್ರಕ್ಕೆ ಬಂದು ಮೌಲ್ಯಮಾಪನ ಮಾಡಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಮೌಲ್ಯಮಾಪನ ಕೇಂದ್ರ ಮಾಡುವುದರಿಂದ ಆಯಾ ಜಿಲ್ಲೆಗಳಲ್ಲಿ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಬೇಕು. 55 ವರ್ಷ ಮೇಲ್ಪಟ್ಟ ಉಪನ್ಯಾಸಕರಿಗೆ ಮೌಲ್ಯಮಾಪನಾ ಕಾರ್ಯದಿಂದ ವಿನಾಯಿತಿ ನೀಡಬೇಕು. ಗರ್ಭಿಣಿಯರಿಗೆ ಹಾಗೂ 2-3 ವರ್ಷದ ಮಗು ಇರುವ ತಾಯಂದಿರಿಗೆ, ಉಸಿರಾಟದ ತೊಂದರೆ, ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮೌಲ್ಯಮಾಪನದಿಂದ ವಿನಾಯಿತಿ ನೀಡಬೇಕು. ಮೌಲ್ಯಮಾಪಕರಿಗೆ ಇಲಾಖೆಯಿಂದಲೇ ಮಾಸ್ಕ್ ಹಾಗೂ ಸ್ಯಾನಿಟೈಸರ್ ಪೂರೈಸುವುದು ಹಾಗೂ ಥರ್ಮಲ್ ಟೆಸ್ಟಿಂಗ್ ನಡೆಸುವಂತೆ ಸಚಿವರನ್ನು ವಿನಂತಿಸಿರುವುದಾಗಿ ಸಂಕನೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.