ರಸ್ತೆ-ಚರಂಡಿ ನಿರ್ಮಾಣಕ್ಕೆ ಒತ್ತಾಯ
Team Udayavani, Nov 9, 2019, 1:41 PM IST
ನರೇಗಲ್ಲ: ಸಮೀಪದ ಡ.ಸ. ಹಡಗಲಿ ಗ್ರಾಮಕ್ಕೆ ತಾ.ಪಂ ಇಒ ಸಂತೋಷಕುಮಾರ ಪಾಟೀಲ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಗ್ರಾಮಸ್ಥ ಯಲ್ಲಪ್ಪಗೌಡ ಹಿರೇಗೌಡ್ರ ಮಾತನಾಡಿ, ಗ್ರಾಮದ ಕೆಲ ಓಣಿಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಪರದಾಡುವಂತಾಗಿದೆ. ಸುವ್ಯವಸ್ಥೆಯ ಸಿಸಿ ರಸ್ತೆ ಹಾಗೂ ಚರಂಡಿಗಳು ಇಲ್ಲದೆ ಕೆಲ ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ವಾಸನೆ ಬಡಿಯುತ್ತಿದೆ. ಕೆಲ ಕಡೆಗಳಲ್ಲಿ ಚರಂಡಿಗಳೇ ಇಲ್ಲ. ಯಾವುದೇ ಮೂಲ ಸೌಲಭ್ಯ ಇಲ್ಲವಾಗಿದೆ. ಇದರಿಂದ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಕೂಡಲೇ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಬೇಕೆಂದು ಈ ಹಿಂದೆ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಎಂದರು.
ತಾಪಂ ಇಒ ಸಂತೋಷಕುಮಾರ ಪಾಟೀಲ ಮಾತನಾಡಿ, ಗ್ರಾಮದಲ್ಲಿ ಈಗಾಗಲೇ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ 75 ಲಕ್ಷ ರೂ. ಗಳಲ್ಲಿ ಅನೇಕ ಕಾಮಗಾರಿ ಮಾಡಲಾಗಿದೆ. ಗ್ರಾಮದಲ್ಲಿ ಒಟ್ಟು 7 ಕಡೆಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿಗಳ ಕಾಮಗಾರಿ ಉಳಿದಿದ್ದು, ಈ ಕಾಮಗಾರಿಗಳನ್ನು 14ನೇ ಹಣಕಾಸು ಅಥವಾ ಎನ್‌ಆರ್‌ಜಿ ಯೋಜನೆಯಡಿಯಲ್ಲಿ ಕಾಮಾಗಾರಿ ಮಾಡಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು. ಪಿಡಿಒ ಸುನೀಲ, ರುದ್ರಯ್ಯ ಹಿರೇಮಠ, ಶರಣಪ್ಪ ಕುರಿ, ವೀರಯ್ಯ ಶಿರಹಟ್ಟಿಮಠ, ಚನ್ನಪ್ಪ ಹೂಗಾರ, ರಾಮಪ್ಪ ನಾಯ್ಕರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.