ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ
Team Udayavani, Dec 13, 2019, 6:22 PM IST
ಗದಗ: ಗದಗ-ಬೆಟಗೇರಿ ನಗರಸಭೆ ವಾರ್ಡ್ ನಂ.4ರ ವ್ಯಾಪ್ತಿಯ ವಸಂತ್ ಸಿಂಗ್ ಜಮಾದಾರ ನಗರಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಬಡಾವಣೆಯಲ್ಲಿ ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.
ಇಲ್ಲಿನ ಹುಯಿಲಗೋಳ ರಸ್ತೆಲ್ಲಿರುವ ವಸಂತ್ ಸಿಂಗ್ ಜಮಾದಾರ ನಗರದಲ್ಲಿ ಸುಮಾರು 20 ವರ್ಷಗಳಿಂದ ಯಾವುದೇ ಮೂಲ ಸೌಲಭ್ಯಗಳಿಲ್ಲದೇ, ಜನರು ದಯನೀಯವಾಗಿ ಬದುಕುತ್ತಿದ್ದಾರೆ. ಸಾರ್ವಜನಿಕರಿಗೆ ಅಗತ್ಯವಿರುವ ರಸ್ತೆ, ಚರಂಡಿ ಹಾಗೂಮನೆಗಳ ನಿರ್ಮಾಣಕ್ಕೆ ಅಗತ್ಯವಿರುವ ಫಾರ್ಮ್ನಂ .3, ಉತಾರ ನೀಡಬೇಕು ಎಂದು ದಶಕಗಳಿಂದ ಒತ್ತಾಯಿಸುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಧಿಕ್ಕಾರ ಕೂಗಿದರು. 3 ವರ್ಷಗಳ ಇದೇ ಬೇಡಿಕೆಗಳಿಗೆ ಒತ್ತಾಯಿಸಿ 17/05/2016 ರಂದು ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿಲಾಗಿದೆ. 19/05/2016 ರಿಂದ ಅಹೋರಾ ರಾತ್ರಿ ಉಪವಾಸ ಸತ್ಯಾಗ್ರಹ ಮನವಿ ಸಲ್ಲಿಸಿದಾಗ, ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ನಗರಸಭೆ ಅಧಿಕಾರಿಗಳು ಲಿಖೀತ ಭರವಸೆ ನೀಡಿದ್ದರು. ಆದರೆ, ವರ್ಷಗಳು ಕಳೆದರೂ, ಸಮಸ್ಯೆಗಳು ಮಾತ್ರ ಪರಿಹಾರವಾಗಿಲ್ಲ. ಈ ಹಿನ್ನೆಲೆಯಲ್ಲಿ ಪರಿಹಾರ ಕಲ್ಪಿಸುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಒತ್ತಾಯಿಸಿದರು.
ಇದೇ ವೇಳೆ ನಗರಸಭೆ ಅಧಿ ಕಾರಿಗಳು ಸ್ಥಳಕ್ಕೆ ದಾವಿಸಿ, ಪ್ರತಿಭಟನಾ ನಿರತರ ಮನವೊಲಿಕೆಗೆ ನಡೆಸಿದ ಪ್ರಯತ್ನ ಫಲಿಸಲಿಲ್ಲ. ಕೊನೆಗೆ ಪೌರಾಯುಕ್ತ ಮನ್ಸೂರ ಅಲಿ ಅವರು 30 ದಿನಗಳಲ್ಲಿ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಪತ್ರ ಕಳುಹಿಸಿದ್ದರಿಂದ ತಾತ್ಕಾಲಿಕವಾಗಿ ಧರಣಿ ಹಿಂಪಡೆದರು.
ಧರಣಿಯಲ್ಲಿ ಬಡಾವಣೆಯ ಪ್ರಮುಖರಾದ ಹುಲ್ಲೇಶ ಭಜಂತ್ರಿ, ಇಸ್ಮಾಯಿಲಸಾಬ ಡಂಬಳ, ಬಸಣ್ಣ ಕೋತಂಬರಿ, ಈರಣ್ಣ ದ್ಯಾವನೂರ, ಬಸಣ್ಣ ಬಡಿಗೇರ, ಸೊಲಬಯ್ಯ ಹಿರೇಮಠ, ಮಹೇಶ ಸೂಡಿ, ಶ್ರೀನಿವಾಸ ಹುಬ್ಬಳ್ಳಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.