![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 4, 2020, 2:31 PM IST
ಗದಗ: ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲಿರುವ ಮನೆಗಳನ್ನು ಗುರುತಿಸಿ, ಅವುಗಳಲ್ಲಿ ವಾಸ ಮಾಡುವ ಜನಜಾನುವಾರುಗಳನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಜಿ.ಪಂ. ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ, ಆರೋಗ್ಯ ಇಲಾಖಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಅತೀಯಾದ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ಮನೆ ಹಾಗೂ ಜಾನುವಾರುಗಳ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕು.
ಬೆಳೆ ಸಮೀಕ್ಷಾ ಕಾರ್ಯದಿಂದ ಜಿಲ್ಲೆಯ ಯಾವೊಬ್ಬ ರೈತರು ವಂಚಿತರಾಗಬಾರದು. ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಪರಿಹಾರ ಪೋರ್ಟ್‌ನಲ್ಲಿ ನೋಂದಾಯಿಸಬೇಕು ಎಂದು ತಿಳಿಸಿದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಪ್ರತಿಯೊಬ್ಬರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಈ ಕುರಿತು ಜಾಗೃತಿ ಮೂಡಿಸಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲು ಕ್ರಮ ಜರುಗಿಸಬೇಕು.
ಪಶ್ಚಿಮ ಪದವೀಧರರ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಪ್ರಥಮ ಬಾರಿಗೆ ಕೋವಿಡ್-19 ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತಿದ್ದು, ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಚುನಾವಣೆ ಜರುಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು.
ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್. ಎನ್. ರುದ್ರೇಶ್, ಎಲ್ಲ ತಾಲೂಕುಗಳು ತಹಶೀಲ್ದಾರ್, ತಾಪಂ ಇಒ, ಆರೋಗ್ಯ, ಕೃಷಿ ಅಧಿಕಾರಿಗಳು ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.