ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ-ಸೌಲಭ್ಯ ಒದಗಿಸಲು ಸೂಚನೆ
Team Udayavani, Nov 30, 2019, 5:35 PM IST
ಗದಗ: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮೇಲಿಂದ ಮೇಲೆ ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ಸಿದ್ದು ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಭವನದ ಜಿ.ಪಂ. ಅಧ್ಯಕ್ಷರ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಜಾರಿ ಇರುವ ಬಹುಗ್ರಾಮ ಕುಡಿಯುವನೀರಿನ ಯೋಜನೆಯಡಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆನೀರಿನ ಸಂಪರ್ಕ ಕಲ್ಪಿಸಲು ಅಗತ್ಯದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆ್ಯಂಬುಲೆನ್ಸ್‌ಗಳ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಕೊರತೆಯಿರುವ ಆ್ಯಂಬುಲೆನ್ಸ್‌ಗಳ ಖರೀದಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.ಜಿಲ್ಲೆಯಲ್ಲಿ ಡೆಂಘೀ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಜರುಗಿಸುವಂತೆ ಸೂಚಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಬಿ.ಕಲ್ಲೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಸತೀಶ ಬಸರೀಗಡದ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.