ಮೂಲಸೌಕರ್ಯ ಪೂರಕ ಕ್ರಿಯಾಯೋಜನೆ ತಯಾರಿಸಲು ಸೂಚನೆ
ವಾರ್ಡ್ ಮುಖ್ಯಸ್ಥರೊಂದಿಗೆ ಪಪಂ ಮುಖ್ಯಾಧಿಕಾರಿ ಚರ್ಚೆ
Team Udayavani, Jun 23, 2019, 10:38 AM IST
ಶಿರಹಟ್ಟಿ: ಪಪಂ ಕಾರ್ಯಾಲಯದಲ್ಲಿ ಹಸಿರು ನ್ಯಾಯಾಧಿಕರಣದ ನಿರ್ದೇಶನದ ಮೇರೆಗೆ ವಾರ್ಡ್‌ಗಳ ಮುಖ್ಯಸ್ಥರೊಂದಿಗೆ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಚರ್ಚಿಸಿದರು.
ಶಿರಹಟ್ಟಿ: ಹಸಿರು ನ್ಯಾಯಾಧಿಕರಣದ ನಿರ್ದೇಶನದಂತೆ ಪಪಂ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಕ್ಕೆ ಪೂರಕವಾದಂತಹ ಕ್ರಿಯಾಯೋಜನೆ ತಯಾರಿಸಿ ತಮಗೆ ನೀಡಬೇಕೆಂದು ಪಪಂ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಹೇಳಿದರು.
ಪಪಂ ಕಾರ್ಯಾಲಯದಲ್ಲಿ ಹಸಿರು ನ್ಯಾಯಾಧಿಕರಣದ ನಿರ್ದೇಶನದ ಮೇರೆಗೆ ವಾರ್ಡ್‌ಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ಅವರು ಮಾತನಾಡಿದರು. ವಾರ್ಡ್‌ಗಳ ಅಭಿವೃದ್ಧಿಗೆ ಅನುದಾನ ಸಾಕಾಗುತ್ತಿಲ್ಲ ಎಂಬುದರ ಬಗ್ಗೆ ಹಸಿರು ನ್ಯಾಯಾಲಯಕ್ಕೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯವು ವಾರ್ಡ್‌ಗಳ ಸ್ಥಿತಿಗತಿ ಬಗ್ಗೆ ಹಾಗೂ ಮೂಲಸೌಕರ್ಯಕ್ಕೆ ಬೇಕಾಗುವಂತಹ ಮಾಹಿತಿ ಕೇಳಿದ್ದು, ಅದಕ್ಕಾಗಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಮಿಟಿ ರಚನೆ ಮಾಡಿ 10 ಜನ ಸದಸ್ಯರನ್ನು ಹೊಂದಬೇಕು. ಇದರಲ್ಲಿ ಐದು ಜನ ಮಹಿಳೆಯರು ಕಡ್ಡಾಯವಾಗಿ ಇರಬೇಕು. ಇವರೆಲ್ಲರೂ ಸೇರಿ ತಮ್ಮ ವಾರ್ಡ್ ಅಭಿವೃದ್ಧಿಯಾಗುವಂತಹ ಕ್ರಿಯಾಯೋಜನೆ ತಯಾರಿಸಿ ತಮಗೆ ನೀಡಬೇಕು. ತಾವು ನೀಡಿದ ನಂತರ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.
ಇದರ ಜೊತೆಗೆ ಪಟ್ಟಣದಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ತರುವುದಕ್ಕಾಗಿ ಮೊದಲಿಗೆ ದಂಡ ರೂಪದಲ್ಲಿ ತಿಳಿ ಹೇಳಲಾಗುವುದು. ತದನಂತರ ಅಂತಹ ಅಂಗಡಿಗಳ ಪರವಾನಗಿ ರದ್ದು ಮಾಡಲಾಗುವುದು. ಸಾರ್ವಜನಿಕರು ಮನೆಗಳ ಮುಂದೆ ಹಸಿ ಕಸ ಚೆಲ್ಲಬಾರದು. ಇದಕ್ಕಾಗಿಯೇ ಪಪಂ ವತಿಯಿಂದ ನಾಲ್ಕು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇವುಗಳ ಸಮರ್ಪಕ ನಿರ್ವಹಣೆಗೆ ಜಿಪಿಎಸ್ ಅಳವಡಿಸಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಂಡು ಪಟ್ಟಣದ ಸೌಂದರ್ಯದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಹೇಳಿದರು.
ಸಂದೀಪ ಕಪ್ಪತ್ತನವರ, ಪರಮೇಶ ಪರಬ, ಫಕ್ಕೀರೇಶ ರಟ್ಟಿಹಳ್ಳಿ, ಮಹದೇವ ಗಾಣಿಗೇರ, ಪರಶುರಾಮ ಡೊಂಕಬಳ್ಳಿ, ಮಂಜುನಾಥ ಹುಬ್ಬಳ್ಳಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.