International Tiger Day; ಬಿಂಕದಕಟ್ಟಿ ಮೃಗಾಲಯದಲ್ಲಿ ನೂತನ ಹುಲಿ ಪ್ರಾಣಿ ಮನೆ ಉದ್ಘಾಟನೆ
Team Udayavani, Jul 29, 2023, 3:47 PM IST
ಗದಗ: ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ಬಿಂಕದಕಟ್ಟಿಯ ಮೃಗಾಲಯದಲ್ಲಿ ನೂತನವಾಗಿ ನಿರ್ಮಿಸಲಾದ ಹುಲಿ ಪ್ರಾಣಿ ಮನೆ ಸೇರಿದಂತೆ ವಿವಿಧ ಪ್ರಾಣಿ ಮನೆಗಳನ್ನು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಶನಿವಾರ ಉದ್ಘಾಟಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವದಲ್ಲಿ ಇರುವ ಹುಲಿಗಳ ಪ್ರಮಾಣದಲ್ಲಿ ಶೇ. 60ರಷ್ಟು ಭಾರತ ದೇಶದಲ್ಲಿರುವದು ಹೆಮ್ಮೆಯ ವಿಷಯವಾಗಿದೆ. ವಿಶ್ವದಲ್ಲಿ ಒಟ್ಟು 5,578 ವಿವಿಧ ಜಾತಿಯ ಹುಲಿಗಳ ಸಂತತಿ ಇದ್ದು, ಈ ಪೈಕಿ ನಮ್ಮ ರಾಜ್ಯದಲ್ಲಿ 435 ಹುಲಿಗಳು ಇರುವದು ಸಂತಸ ತಂದಿದೆ ಎಂದರು.
ಕರ್ನಾಟಕ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಹುಲಿಗಳ ಸಂತತಿ ಸರಿ ಪ್ರಮಾಣದಲ್ಲಿದೆ. 1973 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಸಂರಕ್ಷಣೆಗೆ ಮುಂದಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದರ ಪರಿಣಾಮವಾಗಿ ಇಂದಿಗೂ ಹುಲಿ ಸಂತತಿ ದೇಶದಲ್ಲಿ ಜೀವಂತವಾಗಿದೆ ಎಂದರು.
ಮೃಗಾಲಯಕ್ಕೆ ಶೀಘ್ರ ಜಿರಾಫೆ, ಜಿಬ್ರಾ: ಬಿಂಕದಕಟ್ಟಿ ಮೃಗಾಲಯಕ್ಕೆ 2024ರ ಜನವರಿ 26ರಂದು ಹೊಸ ಅತಿಥಿಗಳಾಗಿ ಜಿರಾಫೆ ಹಾಗೂ ಜಿಬ್ರಾಗಳು ಆಗಮಿಸಲಿವೆ. ಈ ಪ್ರಾಣಿಗಳು ಮೃಗಾಲಯಕ್ಕೆ ಬರುವ ವೀಕ್ಷಕರ ಸಂಖ್ಯೆಯನ್ನು ಇನ್ನೂ ಹೆಚ್ಚಿಸುವ ವಿಶ್ವಾಸವಿದೆ. ಮೃಗಾಲಯದಲ್ಲಿ ಈ ಅತಿಥಿಗಳ ಸ್ವಾಗತಕ್ಕಾಗಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗುತ್ತಿದೆ ಎಂದರು.
ಮೃಗಾಲಯಕ್ಕೆ ಆನೆ ಆಗಮನ: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಗದಗ ಮೃಗಾಲಯದ ಕುರಿತು ಚರ್ಚಿಸಲಾಗಿದೆ. ಗದಗ ಮೃಗಾಲಯಕ್ಕೆ ಆನೆ ತರುವ ಬಗ್ಗೆ ಪ್ರಸ್ತಾಪಿಸಲಾಗಿದ್ದು, ಆನೆ ಜೊತೆಗೆ ಅಗತ್ಯ ನಿರ್ವಹಣಾ ಅನುದಾನವನ್ನು ಸಹ ನೀಡುವದಾಗಿ ಸಚಿವ ಈಶ್ವರ ಖಂಡ್ರೆ ಅವರು ಸಮ್ಮತಿ ನೀಡಿದ್ದಾರೆ. ಶೀಘ್ರವೇ ಗದಗ ಮೃಗಾಲಯಕ್ಕೆ ಆನೆಯು ಸಹ ಅತಿಥಿಯಾಗಿ ಆಗಮಿಸಲಿದೆ ಎಂದರು.
ಝೂ ಮಾಸ್ಟರ ಪ್ಲಾನ್: ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದ ಝೂ ಮಾಸ್ಟರ್ ಪ್ಲಾನ್ ಸಿದ್ಧವಾಗಿದ್ದು 2024ರ ಆ. 15 ರೊಳಗಾಗಿ ಝೂ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಗದಗ ಜಿಲ್ಲಾ ಪ್ರವಾಸೋದ್ಯಮ ಸಮಿತಿಯು ಗದಗ ಮೃಗಾಲಯದ ಅಭಿವೃದ್ಧಿಗೆ ಮುಂದಾಗಿದ್ದು ಅಧ್ಯಯನ ಸಹ ನಡೆಸಿದೆ. ಗದಗ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಬಿಂಕದಕಟ್ಟಿ ಮೃಗಾಲಯದ ಹತ್ತಿರದಲ್ಲಿಯೇ ಅತ್ಯಾಧುನಿಕ ಸೌಲಭ್ಯಗಳುಳ್ಳ ಉತ್ತಮ ಕ್ಯಾಂಟಿನ್ ಮಾಡಲಾಗುವದು ಎಂದರು.
ಪ್ರವಾಸೋದ್ಯಮ ವರದಿ: ಹಿರಿಯ ಐಎಎಸ್ ಅಧಿಕಾರಿ ಮನೋಜಕುಮಾರ ಅವರ ನೇತೃತ್ವದಲ್ಲಿ ಗದಗ ಜಿಲ್ಲಾ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿ ಸಮತಿಯನ್ನು ರಚಿಸಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸಮಿತಿಯು ಆ. 8ರಂದು ಅಧ್ಯಯನದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ಮೂಲಕ ಗದಗ ಜಿಲ್ಲಾ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲಕ್ಕುಂಡಿಯಲ್ಲಿ ಹುದುಗಿರುವ ದೇವಸ್ಥಾನಗಳನ್ನು ಗುರುತಿಸುವದರ ಮೂಲಕ ಅವುಗಳನ್ನು ಅಭಿವೃದ್ಧಿ ಪಡಿಸಿ ಲಕ್ಕುಂಡಿಯ ಗತ ವೈಭವವನ್ನು ಪ್ರವಾಸಿಗರಿಗೆ ಪರಿಚಯಿಸಬೇಕು. ಹಂಪಿಯಷ್ಟೇ ಲಕ್ಕುಂಡಿಯು ಸಮೃದ್ಧ ಪ್ರದೇಶವಾಗಿದೆ ಎಂಬುದನ್ನು ಪ್ರವಾಸಿಗರಿಗೆ ಪರಿಚಸಯಿಸಲು ಕ್ರಮ ಕೈಗೊಳ್ಳಲಾಗುವದು ಎಂದರು.
300 ಕೋಟಿ ಹೂಡಿಕೆ: ಪ್ರವಾಸೋದ್ಯಮದಲ್ಲಿ 300 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ನೂರಾರು ಹೋಟೆಲ್ ಸೌಲಭ್ಯಗಳು ಸೃಷ್ಟಿಯಾಗಲಿವೆ. ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಹಕಾರಿ. ಖಾಸಗಿ ಹೂಡಿಕೆಯಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು ಕೆಳವರ್ಗದ ಜನರೂ ಇದರ ಪ್ರಯೋಜನ ಪಡೆಯಲಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದಲ್ಲಿ ಪ್ರವಾಸೋದ್ಯಮವು ಅಭಿವೃದ್ಧಿಗೊಳ್ಳುತ್ತಿದೆ ಎಂದು ಹೇಳಿದರು.
ಈ ವೇಳೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿಪೀಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಗಂಗಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಸೇರಿದಂತೆ ಗಣ್ಯರು, ಹಿರಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.