ಈಶ್ವರಪ್ಪ ಬಂಧನ ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು: ಸಿಎಂ ಬೊಮ್ಮಾಯಿ
Team Udayavani, Apr 15, 2022, 11:06 AM IST
ಗದಗ: ಈಗಾಗಲೇ ಈಶ್ವರಪ್ಪ ಅವರು ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಬಂಧಿಸುವ ಬಗ್ಗೆ ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ. ಅಲ್ಲಿವರೆಗೆ ಕಾಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ ಪ್ರಕರಣ ತನಿಖೆ ನಡೆಯಬೇಕು. ತನಿಖೆಗೆ ಎಲ್ಲರೂ ಸಹಕರಿಸಬೇಕು. ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರನ್ನು ಬಂಧಿಸಲಿಲ್ಲ. ಕರ್ನಾಟಕ ಪೊಲೀಸರ ತನಿಖೆ ವೇಳೆಯೂ ಬಂಧಿಸಲಿಲ್ಲ. ಬಳಿಕ ಪ್ರಕರಣ ಸಿಬಿಐಗೆ ವರ್ಗಾವಣೆಯಾದಾಗಲೂ ಬಂಧನವಾಗಲಿಲ್ಲ. ಅದು ಪ್ರಕರಣದ ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು. ಈಶ್ವರಪ್ಪ ಅವರನ್ನು ಬಂಧಿಸಬೇಕು ಎನ್ನಲು ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:40% ಆರೋಪಿತರಿಗೆ ನಡುಕ: ಬೊಮ್ಮಾಯಿ ಸಂಪುಟದಲ್ಲಿ ಇನ್ನಷ್ಟು ತಲೆದಂಡ ?
ಈ ಸಂದರ್ಭದಲ್ಲಿ ಜಿಲ್ಲಾಉಸ್ತುವಾರಿ ಸಚಿವ ಬಿ.ಸಿಪಾಟೀಲ, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ, ಶಾಸಕ ಕಳಜಪ್ಪ ಬಂಡಿ, ಎಸದ.ವಿ.ಸಂಕನೂರ, ಅನಿಲ್ ಮೆಣಸಿನಕಾಯಿ, ನಗರಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.