ಹಳ್ಳಿ ಉದ್ಧಾರವಾಗದೇ ಅಭಿವೃದ್ಧಿ ಅಸಾಧ್ಯ
Team Udayavani, May 12, 2019, 4:11 PM IST
ಗದಗ: ನವದೆಹಲಿಯ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ಬೆಂಗಳೂರು ಫೌಂಡೇಶನ್ ಫಾರ್ ಕ್ವಾಲಿಟಿ ಇಂಡಿಯಾ ಸಹಭಾಗಿತ್ವದಲ್ಲಿ ನಗರದ ರೈತ ಭವನದಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯದ ಸ್ಮಾರ್ಟ್ ಗ್ರಾಮಗಳನ್ನು ಗುರುತಿಸುವ ಕುರಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಗ್ರಾವಿವಿ ಕುಲಪತಿ ಪ್ರೊ| ಬಿ. ತಿಮ್ಮೇಗೌಡ ಮಾತನಾಡಿ, ಭಾರತದ ಆತ್ಮವಾದ ಹಳ್ಳಿಗಳ ಉದ್ಧಾರವಾಗದೇ ದೇಶದ ಅಭಿವೃದ್ಧಿ ಅಸಾಧ್ಯ ಎಂಬ ಗಾಂಧಿಧೀಜಿ ಅವರ ಹೇಳಿಕೆ ಪುನರುಚ್ಛರಿಸಿದರು. ಗ್ರಾಮೀಣಾಭಿವೃದ್ಧಿಯಲ್ಲಿ ಸ್ಥಳೀಯ ಸರಕಾರದ ಪ್ರಾಮುಖ್ಯತೆ, ಆಡಳಿತ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಅಭಿವೃದ್ಧಿ ಕಾರ್ಯಗಳ ವಸ್ತುನಿಷ್ಠೆ ಮೌಲ್ಯಮಾಪನದ ಅಗತ್ಯತೆ ಕುರಿತು ವಿವರಿಸಿ, ಎಲ್ಲ ವಿದ್ಯಾರ್ಥಿಗಳು ಈ ಪ್ರಕ್ರಿಯೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕುಲಸಚಿವ ಡಾ| ಪ್ರೊ| ಸುರೇಶ ನಾಡಗೌಡರ ಮಾತನಾಡಿ, ಗ್ರಾಮೀಣ ಭಾರತವನ್ನು ಕಲ್ಯಾಣ ಭಾರತವನ್ನಾಗಿಸುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಆದರ್ಶ ಗ್ರಾಮ’ದ ಪರಿಕಲ್ಪನೆ ಸಾಕಾರಗೊಳಿಸಬೇಕು ಎಂದರು.
ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಡಾ| ವೆಂಕಟೇಶ್ ತುಪ್ಪಿಲ್ ಮಾತನಾಡಿ, ಗ್ರಾಮೀಣಾ ಭಿವೃದ್ಧಿಯ ವಿಕೇಂದ್ರಿಕರಣ ತತ್ವದ ಹಿನ್ನೆಲೆಯಲ್ಲಿ ವಿವರಿಸಿದ ಅವರು, ಅಭಿವೃದ್ಧಿ ಪ್ರಕ್ರಿಯೆ ಕೆಳಹಂತದಿಂದ ಪ್ರಾರಂಭವಾಗಬೇಕು. ಜತೆಗೆ ಅಬ್ದುಲ್ ಕಲಾಂ ಅವರ ಕನಸಾದ ಸ್ಮಾರ್ಟ್ ಗ್ರಾಮಗಳ ಮಾದರಿ ಸಾಕಾರಗೊಳ್ಳಬೇಕಿದೆ ಎಂದು ಹೇಳಿದರು.
ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಸದ್ಯಸ ಕೆ.ವಿ. ರವೀಂದ್ರನಾಥ್ ಟಾಗೋರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದ ಯೋಜನೆಗಳು ಇನ್ನೂ ಗ್ರಾಮೀಣ ಜನರಿಗೆ ತಲುಪಿಲ್ಲ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಡಾ| ಕವಿತಾ ಬೇವಿನಮರ, ಬಸನಗೌಡ, ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.