ಯುವ ಕಾಂಗ್ರೆಸ್‌ನಿಂದ ಉದ್ಯೋಗ ಸೃಷ್ಟಿ ಸರ್ವೇ

ಮುಂದಿನ ದಿನಗಳಲ್ಲಿ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು

Team Udayavani, Jul 20, 2022, 6:15 PM IST

ಯುವ ಕಾಂಗ್ರೆಸ್‌ನಿಂದ ಉದ್ಯೋಗ ಸೃಷ್ಟಿ ಸರ್ವೇ

ಗದಗ: ರಾಜ್ಯದಲ್ಲಿ 1.25 ಕೋಟಿ ಯುವಕರಿದ್ದು, ಉದ್ಯೋಗ ವಂಚಿತರಾಗುತ್ತಿದ್ದಾರೆ. ಅವರಿಗೆ ಉದ್ಯೋಗದ ಭರವಸೆಗಾಗಿ ಯುವಧ್ವನಿ ಮೂಲಕ ಯುವಕರ ಧ್ವನಿಯಾಗುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿ ಸರ್ವೇ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಹೇಳಿದರು.

ನಗರದ ಕಾಟನ್‌ ಸೇಲ್ಸ್‌ ಸೊಸೈಟಿ ಆವರಣದಲ್ಲಿನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿ, ಧರ್ಮಗಳ ನಡುವೆ ಕೋಮುವಾದಿ ಬೀಜ ಬಿತ್ತುವ ಮೂಲಕ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕಳೆದ 8 ವರ್ಷಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸದೇ ಯುವಕರನ್ನು ಬೀದಿಗೆ ತಳ್ಳುವಂತೆ ಮಾಡಿದೆ. ಈಗ ಯುವಕರನ್ನು 4 ವರ್ಷಗಳ ಕಾಲ ಗುತ್ತಿಗೆ ಕಾರ್ಮಿಕರಂತೆ ನಡೆಸಿಕೊಳ್ಳಲು ಅಗ್ನಿಪಥ ಯೋಜನೆ ಜಾರಿಗೆ ತರುತ್ತಿದೆ. ಅವರಲ್ಲಿ ಶೇ. 25ರಷ್ಟು ಯುವಕರನ್ನು ಮಾತ್ರ ಮುಂದುವರಿಸುವುದಾಗಿ ತಿಳಿಸಿದ್ದು, ಸೇನೆಯಲ್ಲೂ ಕಮಿಷನ್‌ ಹೊಡೆಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

70 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ದೇಶಕ್ಕಾಗಿ ಏನು ಕೊಡುಗೆ ನೀಡಿದೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ ನೀಡಿರುವ ಐಐಟಿ, ಎಂಎಲ್‌, ಏರ್‌ಪೋರ್ಟ್‌ನಂತಹ ಯೋಜನೆ ಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತ ಹೊರಟಿದೆ. 1947ರಲ್ಲಿ ಬ್ರಿಟಿಷರನ್ನು ಓಡಿಸಿದ ಹಾಗೆಯೇ, 2023-24ರಲ್ಲಿ ಬಿಜೆಪಿಯನ್ನು ಓಡಿಸುವ ಕಾಲ ಬಂದಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ ಯಾವಾಗಲೂ ಜನಪರವಾಗಿರುತ್ತದೆ. ಜನ ಪರ ಆಡಳಿತ ನೀಡುತ್ತದೆ. ಆದರೆ, ಇಂದಿನ ಬಿಜೆಪಿ ಸರ್ಕಾರ ಹಾಲು-ಮೊಸರಿನಲ್ಲಿ ಶೇ. 5ರಷ್ಟು ಜಿಎಸ್‌ಟಿ, ರೈತರು ಬಳಸುವ ಉಪಕರಣಗಳು ಹಾಗೂ ಬ್ಯಾಂಕ್‌ ಚೆಕ್‌ಬುಕ್‌ಗಳಿಗೆ ಶೇ.18ರಷ್ಟು ಜಿಎಸ್‌ಟಿ ವಿಧಿಸಿದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ರೂಪದಲ್ಲಿ ಕೋಟ್ಯಂತರ ರೂ. ಸಂದಾಯವಾದರೂ ನಮ್ಮ ಪಾಲಿನ ಹಣ ಕೇಳುವ ಧೈರ್ಯ ಸಿಎಂ ಬೊಮ್ಮಾಯಿ ಅವರಾಗಲಿ, 25 ಸಂಸದರಿಗಾಗಲಿ ಇಲ್ಲ ಎಂದು ಲೇವಡಿ ಮಾಡಿದರು.

ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳು, 9 ಬ್ಲಾಕ್‌ಗಳಿದ್ದು, ಪ್ರತಿಯೊಂದು ಬ್ಲಾಕ್‌ಗಳ ಅಧ್ಯಕ್ಷರು ಕನಿಷ್ಟ 3000 ಯುವಕರನ್ನು, ಬ್ಲಾಕ್‌ ಪದಾಧಿಕಾರಿಗಳು ಕನಿಷ್ಟ 1000 ಯುವಕರನ್ನು ಉದ್ಯೋಗ ಸೃಷ್ಟಿ ಸರ್ವೇಯಲ್ಲಿ ಭಾಗೀದಾರರನ್ನಾಗಿ ಮಾಡಿಕೊಂಡು, ಅವರ ವಿದ್ಯಾರ್ಹತೆ, ಮಾಡುತ್ತಿದ್ದ ಉದ್ಯೋಗ, ಉದ್ಯೋಗದ ಸ್ಥಿತಿಗತಿ ಮಾಹಿತಿ ಪಡೆಯಬೇಕು. ಮುಂದಿನ ದಿನಗಳಲ್ಲಿ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದರು.

ಮಾಜಿ ಶಾಸಕ ಡಿ.ಆರ್‌. ಪಾಟೀಲ ಮಾತನಾಡಿ, ಕಾಂಗ್ರೆಸ್‌ ಸ್ವಾತಂತ್ರ್ಯ ಸಂಗ್ರಾಮದಿಂದಲೂ ಯುವಕರನ್ನು ಮುನ್ನಡೆಸುತ್ತ ಹೋರಾಟ ನಡೆಸುತ್ತ ಬಂದಿದೆ. ಯುವಕರು ನಿರಪೇಕ್ಷ ಭಾವದಿಂದ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಹೇಳಿದರು.

ಮಾಜಿ ಶಾಸಕ ಬಿ.ಆರ್‌.ಯಾವಗಲ್‌ ಮಾತನಾಡಿ, ಬಿಜೆಪಿಯ ದುರಾಡಳಿತ ದೇಶವನ್ನು ಅವನತಿಯತ್ತ ಸಾಗಿಸುತ್ತಿದೆ. ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ದೇಶ ಇಬ್ಭಾಗ ಮಾಡುವಂತಹ ಸ್ಥಿತಿಗೆ ತಂದಿಟ್ಟಿದೆ. ಯುವಕರು ಎಚ್ಚರಗೊಂಡು ದೇಶದ ಏಕತೆ, ಸಮಗ್ರತೆ, ಅಖಂಡತೆ ಸಾರಲು ಶ್ರಮಿಸಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ.ಎಸ್‌. ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿದರು. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಯುವ ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಮಂಜುನಾಥ ಮಣಿಶೆಟ್ಟಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಗೋವರ್ಧನ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ಮುಖಂಡರಾದ ರಾಮಕೃಷ್ಣ ರೊಳ್ಳಿ, ಉದಯಗೌಡ ವೀರನಗೌಡ್ರ, ವಿಜಯಕುಮಾರ ಚಲವಾದಿ, ವೀರಣ್ಣ ಶೆಟ್ಟರ, ಶರಣಪ್ಪ ಬೆಟಗೇರಿ ಇತರರಿದ್ದರು.

ಟಾಪ್ ನ್ಯೂಸ್

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.