ಕಪ್ಪತ್ತಗುಡ್ಡ ರಕ್ಷಣೆಗೆ ಜನಾಂದೋಲನ
Team Udayavani, Jun 10, 2020, 2:13 PM IST
ಮುಂಡರಗಿ: ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಜಿಲ್ಲೆಗಳ ಜೀವನಾಡಿ ಕಪ್ಪತ್ತಗುಡ್ಡವನ್ನು ಈ ಹಿಂದೆ ರಾಜ್ಯ ಸರಕಾರ ವನ್ಯಜೀವಿಧಾಮವೆಂದು ಘೋಷಿಸಿದೆ. ಬಂಡವಾಳ ಶಾಹಿಗಳ ಒತ್ತಡಕ್ಕೆ ಮನಿದು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ರಾಜ್ಯ ಸರಕಾರವು ವನ್ಯಜೀವಿಧಾಮ ಸ್ಥಾನಮಾನ ಹಿಂದಕ್ಕೆ ಪಡೆದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪತ್ತಗುಡ್ಡಕ್ಕೆ ನೀಡಿರುವ ವನ್ಯಜೀವಿಧಾಮ ಸ್ಥಾನಮಾನ ಹಿಂಪಡೆದರೆ ಕಪ್ಪತಗುಡ್ಡ ಉಳಿಸಿ ಅಭಿಯಾನದೊಂದಿಗೆ ಕಾನೂನು ಸಮರ ನಡೆಸಲಾಗುವುದು. ವನ್ಯಜೀವಿಧಾಮದ ಸ್ಥಾನಮಾನವನ್ನು ಹಿಂಪಡೆಯಲು ರಾಜ್ಯ ಸರಕಾರದ ಮೇಲೆ ಈ ಭಾಗದ ಜನಪ್ರತಿನಿ ಧಿಗಳು ಒತ್ತಡ ಹೇರುವ ಹುನ್ನಾರ ನಡೆಸಿದ್ದಾರೆ. ಈ ಹಿಂದೆ ಕಪ್ಪತ್ತಗುಡ್ಡ ಭಾಗದ ಗ್ರಾಮ ಪಂಚಾಯಿತಿಗಳಲ್ಲಿ ವನ್ಯಜೀವಿಧಾಮ ಸ್ಥಾನಮಾನಕ್ಕಾಗಿ ಠರಾವು ಪಾಸು ಮಾಡಿ ಬೆಂಬಲ ಸೂಚಿಸಲಾಗಿತ್ತು.
ಆದರೆ ಈಗ ಶಾಸಕರು, ಸಂಸದರು ಬಂಡವಾಳಶಾಹಿಗಳ ಕುಮ್ಮಕ್ಕಿನಿಂದ ವನ್ಯಜೀವಿಧಾಮದ ಸ್ಥಾನಮಾನ ಹಿಂಪಡೆಯಲು ರಾಜ್ಯ ಸರಕಾರದ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತಿದ್ದಾರೆ. ಕಪ್ಪತ್ತಗುಡ್ಡ ಅಪರೂಪದ ಸಸ್ಯ ಸಂಪತ್ತು ಹೊಂದಿದೆ. ಗಣಗಾರಿಕೆಯು ನಡೆದರೇ ಕಪ್ಪತ್ತಗುಡ್ಡದ ಪರಿಸರ ನಾಶವಾಗಲಿದೆ. ಅಪರೂಪದ ಸಸ್ಯ ಸಂಪತ್ತು, ಸಸ್ಯ ವೈವಿಧ್ಯತೆ, ಜೀವಿ ವೈವಿಧ್ಯತೆಯನ್ನು ಉಳಿಸಿಕೊಳ್ಳುವ ಹೊಣೆಗಾರಿಕೆಯು ಪ್ರತಿಯೊಬ್ಬ ನಾಗರಿಕರದ್ದು ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.