ಕಪ್ಪತ್ತಗುಡ್ಡಕ್ಕೆ ಬೆಂಕಿ : ಅಪಾರ ಆಯುರ್ವೇದ ಸಸ್ಯಗಳು ನಾಶ
Team Udayavani, Mar 4, 2017, 9:36 AM IST
ಗದಗ: ಜಿಲ್ಲೆಯ ಅಮೂಲ್ಯ ಖನಿಜ ಸಂಪತ್ತು, ವನ್ಯಜೀವಿಗಳು ಹಾಗೂ ಔಷಧೀಯ ಸಸ್ಯಗಳ ತಾಣವಾದ ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯ ಕೆನ್ನಾಲಗೆಗೆ ಅಪಾರ ಪ್ರಮಾಣದ ಆಯುರ್ವೇದ ಸಸ್ಯಗಳು ಸುಟ್ಟುಭಸ್ಮವಾಗಿದೆ.
ಬೆಂಕಿ ಹತ್ತಿಕೊಂಡ ವಿಚಾರವನ್ನು ಗಮನಕ್ಕೆ ತಂದರೂ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ 3 ರಿಂದ 4 ಗಂಟೆಗಳು ಕಳೆದು ಸ್ಥಳಕ್ಕೆ ಬಂದಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಗುಡ್ಡದಲ್ಲಿ ಹೈಟೆನ್ಶನ್ ವಿದ್ಯುತ್ ತಂತಿಗಳು ಹಾದುಹೋಗಿದ್ದು ಅದರಿಂದಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಕೆಲವರು ಹೇಳಿದ್ದಾರೆ.
17,872.24 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿರುವ ಗುಡ್ಡದಲ್ಲಿ ಅಪರೂಪದ ಸಸ್ಯ ಸಂಪತ್ತು ಇದೆ.
ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ಮುಂದಾಗಿದ್ದು ಇದರ ವಿರುದ್ಧ ವಿವಿಧ ಸಂಘಟನೆಗಳು,ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಭಾರೀ ಹೋರಾಟ ನಡೆಸಲಾಗುತ್ತಿದೆ.
ಈ ಹಿಂದೆ ಹಲವು ಬಾರಿ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿದ್ದು ಗಮನಕ್ಕೆ ಬಂದಿತ್ತು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.